ಬಾನು ಮುಷ್ತಾಕ್‌ ಒಪ್ಪಿದ್ರೆ ಜಿ ಕೆಟಗರಿ ಸೈಟು: ಡಿ.ಕೆ.ಶಿವಕುಮಾರ್‌

Published : May 23, 2025, 06:57 AM IST
ಬಾನು ಮುಷ್ತಾಕ್‌ ಒಪ್ಪಿದ್ರೆ ಜಿ ಕೆಟಗರಿ ಸೈಟು: ಡಿ.ಕೆ.ಶಿವಕುಮಾರ್‌

ಸಾರಾಂಶ

ಅಂತರಾಷ್ಟ್ರೀಯ ಬುಕರ್‌ ಪ್ರಶಸ್ತಿಗೆ ಭಾಜನರಾದ ಲೇಖಕಿ ಬಾನು ಮುಷ್ತಾಕ್‌ ಹಾಗೂ ಅನುವಾದಕಿ ದೀಪಾ ಭಾಸ್ತಿ ಅವರಿಗೆ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಅಭಿನಂದನೆ ಸಲ್ಲಿಸಲಾಗಿದ್ದು, ಬಾನು ಮುಷ್ತಾಕ್‌ ಅವರು ಒಪ್ಪಿದರೆ ಬಿಡಿಎ ಜಿ ಕೆಟಗರಿ ನಿವೇಶನ ನೀಡಲು ತೀರ್ಮಾನಿಸಲಾಗಿದೆ.   

ಬೆಂಗಳೂರು (ಮೇ.23): ಅಂತರಾಷ್ಟ್ರೀಯ ಬುಕರ್‌ ಪ್ರಶಸ್ತಿಗೆ ಭಾಜನರಾದ ಲೇಖಕಿ ಬಾನು ಮುಷ್ತಾಕ್‌ ಹಾಗೂ ಅನುವಾದಕಿ ದೀಪಾ ಭಾಸ್ತಿ ಅವರಿಗೆ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಅಭಿನಂದನೆ ಸಲ್ಲಿಸಲಾಗಿದ್ದು, ಬಾನು ಮುಷ್ತಾಕ್‌ ಅವರು ಒಪ್ಪಿದರೆ ಬಿಡಿಎ ಜಿ ಕೆಟಗರಿ ನಿವೇಶನ ನೀಡಲು ತೀರ್ಮಾನಿಸಲಾಗಿದೆ. 

ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಎದೆಯ ಹಣತೆ ಕೃತಿಯ ಮೂಲ ಲೇಖಕಿ ಬಾನು ಮುಷ್ತಾಕ್‌ ಹಾಗೂ ಈ ಕೃತಿಯನ್ನು ಇಂಗ್ಲಿಷ್‌ಗೆ ತರ್ಜುಮೆ ಮಾಡಿದ ದೀಪಾ ಭಾಸ್ತಿ ಅವರಿಗೆ ಸಚಿವ ಸಂಪುಟ ಸಭೆಯಲ್ಲಿ ಅಭಿನಂದನೆ ಸಲ್ಲಿಸಲಾಗಿದೆ. ಅಂತಾರಾಷ್ಟ್ರೀಯ ಬುಕರ್‌ ಪ್ರಶಸ್ತಿ ತಂದಿರುವ ಅವರು ನಾಡಿನ ಹೆಮ್ಮೆ ಎಂದು ಹೇಳಿದರು. ಇದೇ ವೇಳೆ ಬಾನು ಮುಷ್ತಾಕ್‌ ಅವರು ಒಪ್ಪಿದರೆ ಅವರಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಜಿ ಕೆಟಗರಿ ನಿವೇಶನ ನೀಡಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಇದು ಮೂಲ ಲೇಖಕಿಯಾದ ಬಾನು ಮುಷ್ತಾಕ್‌ ಅವರು ಒಬ್ಬರಿಗೆ ಮಾತ್ರ ನೀಡಲಾಗುವುದು ಎಂದು ಸ್ಪಷ್ಟಪಡಿಸಿದರು.

ತವರು ಹಾಸನದಲ್ಲಿ ಸಂಭ್ರಮ: ನಾಡಿನ ಖ್ಯಾತ ಲೇಖಕಿ, ಸಾಹಿತಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾರ್ಗದರ್ಶಿ ಸಮಿತಿ ಸದಸ್ಯರಾದ ಬಾನು ಮುಷ್ತಾಕ್ ಅವರಿಗೆ ಅಂತಾರಾಷ್ಟ್ರೀಯ ಬುಕರ್ ಸಾಹಿತ್ಯ ಪಶಸ್ತಿ ದೊರೆತ ಹಿನ್ನೆಲೆಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಪರಿಷತ್ತಿಗೆ ವಿದ್ಯುತ್ ದೀಪಾಂಲಕಾರ ಮಾಡಿಸಿ, ಕೇಕ್ ಕತ್ತರಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಡೆದ ಸಂಭ್ರಮಾಚರಣೆಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಎಚ್.ಎಲ್ ಮಲ್ಲೇಶಗೌಡ ಅವರು ಬಾನು ಮುಷ್ತಾಕ್ ಅವರ ಪತಿ ಮುಷ್ತಾಕ್ ಹಾಗೂ ಪುತ್ರ ತಾಹೀರ್ ಅವರಿಗೆ ಸಿಹಿ ತಿನ್ನಿಸಿ ಶುಭಾಶಯ ಕೋರಿದರು.

ನಟಿ ರನ್ಯಾ ರಾವ್‌ಗೆ ಪರಂ ಟ್ರಸ್ಟ್‌ನಿಂದ 40 ಲಕ್ಷ ಪಾವತಿ: ಡಿ.ಕೆ.ಶಿವಕುಮಾರ್

ಜಿಲ್ಲಾ ಕಸಾಪ ಅಧ್ಯಕ್ಷ ಡಾ.ಎಚ್.ಎಲ್ ಮಲ್ಲೇಶಗೌಡ ಮಾತನಾಡಿ, ಕರುನಾಡು ಇಂದು ಅಭಿಮಾನದಿಂದ ಬೀಗುವಂತಾಗಿದೆ. ಕನ್ನಡ ಭಾಷೆಯ ಮುಕುಟಕ್ಕೆ ವಿಶ್ವದ ಕಿರೀಟ ಪ್ರಾಪ್ತಿಯಾಗಿದೆ. ಬಾನು ಮುಷ್ತಾಕ್ ಅವರು ‘ಹಾರ್ಟ್‌ಲ್ಯಾಂಪ್’ ಕೃತಿಗೆ ಬೂಕರ್ ಧಕ್ಕಿಸಿಕೊಳ್ಳುವ ಮೂಲಕ ಕನ್ನಡಿಗರು ಹೆಮ್ಮೆಪಡುವಂತೆ ಮಾಡಿದ್ದಾರೆ. ಅವರು ತವರಿಗೆ ಹಿಂದಿರುಗಿದ ಮೇಲೆ ದೊಡ್ಡ ಅಭಿನಂದನಾ ಸಮಾರಂಭವನ್ನು ಕನ್ನಡ ಸಾಹಿತ್ಯ ಪರಿಷತ್ತು ನಡೆಸಲಿದೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸ್ತ್ರಿರೋಗ ತಜ್ಞೆ, ಪುತ್ರನ ದುರಂತ ಅಂತ್ಯ, ರಾತ್ರಿ ಜಗಳವಾಡಿದ ಇಬ್ಬರು ಬೆಳಗ್ಗೆ ಶವವಾಗಿ ಪತ್ತೆ
ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!