
ಮೈಸೂರು : ಹಿಂದೂ ಸಮಾಜದಲ್ಲಿ ಸಮಾನತೆ ಇದ್ದಿದ್ದರೆ, ಎಲ್ಲರಿಗೂ ಸಮಾನ ಅವಕಾಶಗಳಿದ್ದರೆ ಜನ ಯಾಕೆ ಮತಾಂತರಗೊಳ್ಳುತ್ತಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದ್ದಾರೆ.
ನಗರದಲ್ಲಿ ಶನಿವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ಮತಾಂತರದ ಬಗ್ಗೆ ಪ್ರತಿಕ್ರಿಯಿಸಿ, ಹಿಂದೂ ಸಮಾಜದಲ್ಲಿ ಸಮಾನತೆ ಇದ್ದಿದ್ದರೆ, ಎಲ್ಲರಿಗೂ ಸಮಾನ ಅವಕಾಶಗಳಿದ್ದರೆ ಜನ ಯಾಕೆ ಮತಾಂತರಗೊಳ್ಳುತ್ತಿದ್ದರು. ಅಸ್ಪೃಶ್ಯತೆ ಏಕೆ ಬಂತು? ಅದನ್ನು ನಾವು ಹುಟ್ಟು ಹಾಕಿದ್ದೇವೆಯೇ? ಎಂದು ಪ್ರಶ್ನಿಸಿದರು.
ಅಸಮಾನತೆ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಸೇರಿ ಎಲ್ಲಾ ಧರ್ಮದಲ್ಲಿ ಇದ್ದರೂ, ಮತಾಂತರ ಆಗಿ ಎಂದು ಹೇಳಿಲ್ಲ. ಆದರೂ ಮತಾಂತರವಾಗಿದ್ದಾರೆ. ಅದು ಅವರ ಹಕ್ಕು ಎಂದು ಹೇಳಿದರು.
ರಾಜ್ಯ ಸರ್ಕಾರ ಕೈಗೊಳ್ಳುತ್ತಿರುವ ಜಾತಿಗಣತಿಯಲ್ಲಿ ಹೊಸ ಜಾತಿಗಳನ್ನು ಸೇರ್ಪಡೆ ಮಾಡಲಾಗುತ್ತಿದೆ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿ, ಕೇಂದ್ರ ಸರ್ಕಾರ ಕೈಗೊಂಡಿರುವ ಜಾತಿ ಗಣತಿ ಬಗ್ಗೆ ಅವರು ಏನು ಹೇಳುತ್ತಾರೆ ಎಂದು ಪ್ರಶ್ನಿಸಿದರು.
ಯಾರಾದರೂ ಮತಾಂತರಗೊಂಡಿದ್ದರೆ ಅವರ ಈಗಿನ ಜಾತಿಯನ್ನೇ ಮುಂಬರುವ ಜನಗಣತಿ ವೇಳೆ ಪರಿಗಣಿಸಲಾಗುವುದು. ಮತಾಂತರವಾಗುವುದು ಬೇಡ ಎಂದರೂ ವ್ಯವಸ್ಥೆಯ ಪರಿಣಾಮವಾಗಿ ಜನ ಮತಾಂತರಗೊಳ್ಳುತ್ತಾರೆ. ನಾನು ಮುಸ್ಲಿಂ ಆಗಿ ಮತಾಂತರ ಆದರೆ ನನ್ನ ಜಾತಿಯೂ ಆ ಧರ್ಮದ ಜೊತೆ ಸೇರುತ್ತೆ ಅಲ್ವಾ? ನಾನೇನು ಮುಸ್ಲಿಂ ಆಗಿ ಮತಾಂತರ ಆಗಲ್ಲ. ಸುಮ್ಮನೆ ಉದಾಹರಣೆ ಆಗಿ ಹೇಳಿದೆ ಅಷ್ಟೇ ಎಂದು ಸ್ಪಷ್ಟಪಡಿಸಿದರು.ನಾನೂ ಕೂಡ ಹಿಂದೂ:
‘ನಾನೂ ಕೂಡ ಒಬ್ಬ ಹಿಂದೂ. ನನ್ನ ಹೆಸರಿನಲ್ಲಿಯೇ ಹಿಂದೂ ದೇವರಿದ್ದಾರೆ. ಸಿದ್ದ ಎಂದರೇ ಈಶ್ವರ ಮತ್ತು ರಾಮ ಎಂದರೇ ವಿಷ್ಣು. ಎರಡೂ ದೇವರ ಹೆಸರಿದೆ’ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ