
ಬೆಂಗಳೂರು : ರಾಜ್ಯದಲ್ಲಿ ಕಾನೂನು ಪದವಿ ಪಡೆದು, ವಕೀಲಿಕೆ ನಡೆಸಲು ಸನ್ನದು ನೋಂದಾಯಿಸಿಕೊಂಡ ನಂತರ ಸರ್ಕಾರಿ, ಅರೆ ಸರ್ಕಾರಿ, ನ್ಯಾಯಾಂಗ ಇಲಾಖೆ ಮತ್ತು ಖಾಸಗಿ ಕಂಪನಿಯಲ್ಲಿ ಉದ್ಯೋಗಕ್ಕೆ ಸೇರಿಕೊಂಡಿರುವವರು ತಮ್ಮ ಸನ್ನದು ಅಮಾನತು ಮಾಡಿಕೊಳ್ಳಲು ಕರ್ನಾಟಕ ವಕೀಲರ ಪರಿಷತ್ತು ಜೂನ್ 29 ರವರೆಗೆ ಕಾಲಾವಕಾಶ ವಿಸ್ತರಿಸಿದೆ.
ರಾಜ್ಯದಲ್ಲಿ ಹಲವು ವಕೀಲರು ಪರಿಷತ್‌ನಲ್ಲಿ ಸನ್ನದು ಮಾಡಿಕೊಂಡ ನಂತರ ಸರ್ಕಾರಿ, ಅರೆ ಸರ್ಕಾರಿ, ಸಹಾಯಕ ಅಭಿಯೋಜಕರಾಗಿ, ನ್ಯಾಯಾಂಗ ಇಲಾಖೆ ಮತ್ತು ಖಾಸಗಿ ಕಂಪನಿಯ ನೌಕರರಾಗಿ ನೇಮಕಗೊಂಡಿರುತ್ತಾರೆ. ಅಲ್ಲದೇ ಬೇರೆ ಬೇರೆ ರೀತಿಯ ಲಾಭದಾಯಕ ವ್ಯಾಪಾರ, ವ್ಯವಹಾರಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಅಂತಹವರು ಸನ್ನದು ಅಮಾನತು ಮಾಡಿಕೊಳ್ಳಲು ಮೇ 31ರವರೆಗೆ ಕಾಲಾವಕಾಶ ನೀಡಲಾಗಿತ್ತು.
ಮೇ ಅಂತ್ಯದವರೆಗೆ ಅನೇಕ ಜನರು ತಮ್ಮ ಸನ್ನದು ಅಮಾನತು ಮಾಡಿಕೊಂಡಿದ್ದಾರೆ. ಆದರೆ, ಇನ್ನೂ ಅನೇಕರು ಸನ್ನದು ಅಮಾನತು ಮಾಡಿಕೊಳ್ಳಬೇಕಿದೆ. ವಕೀಲರ ಕಾಯ್ದೆ-1961ರ ಪ್ರಕಾರ ವಕೀಲಿಕೆ ತೊರೆದು ಅನ್ಯ ಉದ್ಯೋಗದಲ್ಲಿ ತೊಡಗಿಸಿಕೊಂಡವರು ಆರು ತಿಂಗಳಲ್ಲಿ ತಮ್ಮ ಸನ್ನದು ಅನ್ನು ಅಮಾನತು ಮಾಡಿಕೊಳ್ಳಬೇಕಿದೆ. ಆದ್ದರಿಂದ ಜೂ.29ರವರೆಗೆ ಕಾಲಾವಕಾಶ ನೀಡಲಾಗಿದೆ.
ಜೂ.14, 15, 21, 22, 28 ಮತ್ತು 29ರಂದು ಪರಿಷತ್ ಕಚೇರಿಗೆ ಭೇಟಿ ನೀಡಿ, ಏಕೆ ಈವರೆಗೂ ಸನ್ನದು ಅಮಾನತು ಮಾಡಿಕೊಂಡಿಲ್ಲ ಎಂಬುದಕ್ಕೆ ಕಾರಣ ವಿವರಿಸಿ ಪ್ರಮಾಣ ಪತ್ರದೊಂದಿಗೆ ಸನ್ನದು ಅಮಾನತಿಗೆ ಅರ್ಜಿ ಸಲ್ಲಿಸಬಹುದು. ಜೂ. 29ರೊಳಗೆ ಸನ್ನದು ಅಮಾನತು ಮಾಡಿಕೊಳ್ಳಲು ವಿಫಲವಾದರೆ, ಅಂತಹವರ ವಿರುದ್ಧ ಕಠಿಣ ಕಾನೂನು ರೀತಿ ಕ್ರಮ ಜರುಗಿಸಲಾಗುತ್ತದೆ ಎಂದು ಪರಿಷತ್ ಅಧ್ಯಕ್ಷ ಎಸ್.ಎಸ್. ಮಿಟ್ಟಲಕೋಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ