International Day Against Drug Abuse: ಬಾಗಲಕೋಟೆ ಜಿಲ್ಲೆಯಾದ್ಯಂತ 4 ಲಕ್ಷ ಮಕ್ಕಳಿಗೆ ಪ್ರತಿಜ್ಞಾವಿಧಿ ಬೋಧನೆ!

Published : Jun 27, 2025, 10:47 AM ISTUpdated : Jun 27, 2025, 10:53 AM IST
Bagalkote news

ಸಾರಾಂಶ

ಅಂತರರಾಷ್ಟ್ರೀಯ ಮಾದಕ ದ್ರವ್ಯ ವ್ಯಸನ ಮುಕ್ತ ದಿನದ ಅಂಗವಾಗಿ ಬಾಗಲಕೋಟೆ ಜಿಲ್ಲೆಯಲ್ಲಿ 4 ಲಕ್ಷ ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯಗಳಿಂದ ದೂರವಿರುವ ಪ್ರತಿಜ್ಞೆ ಬೋಧಿಸಲಾಯಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪೊಲೀಸ್ ಇಲಾಖೆ ಸಹಯೋಗದಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ವರದಿ: ಮಲ್ಲಿಕಾರ್ಜುನ ಹೊಸಮನಿ‌

ಬಾಗಲಕೋಟೆ (ಜೂ.27): ಅಂತರರಾಷ್ಟ್ರೀಯ ಮಾದಕ ದ್ರವ್ಯ ವ್ಯಸನ ಮುಕ್ತ ದಿನದ ಅಂಗವಾಗಿ ಜಿಲ್ಲೆಯಾದ್ಯಂತ ವಿವಿಧ ಶಾಲಾ, ಕಾಲೇಜಿನ 4 ಲಕ್ಷ ಮಕ್ಕಳಿಗೆ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು. ನವನಗರದ ಅಲ್ಪಸಂಖ್ಯಾತ ಮೊರಾರ್ಜಿ ವಸತಿ ಶಾಲೆಯಲ್ಲಿ ಬಾಗಲಕೋಟೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಪೊಲೀಸ್ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾಧಿಕಾರಿ ಸಂಗಪ್ಪ ಎಂ, ಹಾಗೂ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಶಾಲಾ ಮಕ್ಕಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

ಪ್ರತಿಜ್ಞಾವಿಧಿಯಲ್ಲಿ ಮಾದಕ ದ್ರವ್ಯ ವ್ಯಸನ ಮುಕ್ತ ರಾಷ್ಟ್ರ ನಿರ್ಮಾಣ ಮಾಡಲು ನಾವು ಗಾಂಜಾ, ಅಫೀಮುದಂತಹ ಮಾದಕ ದ್ರವ್ಯಗಳನ್ನು ಸೇವಿಸುವುದಿಲ್ಲ. ಇತರರು ಸೇವಿಸದಂತೆ ಶ್ರಮಿಸುತ್ತೇವೆ ಎಂದು, ಅಕ್ರಮ ಮಾದಕ ದ್ರವ್ಯಗಳ ಬಗ್ಗೆ ಮಾಹಿತಿ ಬಂದಲ್ಲಿ ಪೊಲೀಸ್ ಸಹಾಯವಾಣಿ 112 ಗೆ ಕರೆ ಮಾಡುವ ಮೂಲಕ ಮಾದಕ ದ್ರವ್ಯ ವ್ಯಸನ ಮುಕ್ತ ರಾಷ್ಟ್ರವನ್ನಾಗಿ ಮಾಡಲು ಪಣತೊಡುತ್ತೇವೆ ಎಂದು ಪ್ರತಿಜ್ಞೆ ಗೈಯಲಾಯಿತು.

ಕುಟುಂಬ ಸದಸ್ಯರು ವ್ಯಸನಿಗಳಾಗಿದ್ದರೆ ಸರಿ ದಾರಿಗೆ ತನ್ನಿ: ಜಿಲ್ಲಾಧಿಕಾರಿ

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಸಂಗಪ್ಪ ಎಂ. ಅವರು ಅಪ್ರಾಪ್ತ ವಯಸ್ಸಿನಲ್ಲಿ ಮಾದಕ ವ್ಯಸನಿಗೆ ತುತ್ತಾದಲ್ಲಿ ಆರೋಗ್ಯದ ಮೇಲೆ ಪರಿಣಾಮ ಬೀರಿ ಕಿನ್ನತೆಗೆ ಒಳಗಾಗುತ್ತಾರೆ. ಇದರಿಂದ ಮಕ್ಕಳ ಬೆಳೆವಣಿಗೆಯಲ್ಲಿ ಕುಂಟಿತಗೊಳ್ಳುವದಲ್ಲದೇ ಕುಟುಂಬದ ಸ್ವಾಸ್ಥ ಹಾಳಾಗುತ್ತದೆ. ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಪ್ರಗತಿಹೊಂದಲು ಸಾಧ್ಯವಾಗುವದಿಲ್ಲ. ಇಂದು ಪ್ರಮಾಣ ವಚನ ಸ್ವೀಕರಿಸಿದ ಮಕ್ಕಳು ತಮ್ಮ ಕುಟುಂಬದ ಸದಸ್ಯರಲ್ಲಿ ವ್ಯಸನಿಗಳಿದ್ದರೆ, ಅವರನ್ನು ಸರಿದಾರಿಗೆ ತರುವ ಕಾರ್ಯ ಮಾಡಬೇಕು ಎಂದರು.

ಮಾದಕ ವಸ್ತುಗಳಿಂದ ದೂರವಿರಿ, ರಾಷ್ಟ್ರ ಕಟ್ಟುವ ಕೆಲಸ ಮಾಡಿ: ಸಿಇಓ

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಮಾತನಾಡಿ ಮುಂದಿನ ಪ್ರಜೆಗಳಾಗುವ ಯುವ ಪೀಳಿಗೆ ತಮ್ಮ ಶರೀರ ಯಾವ ರೀತಿಯ ಇರಬೇಕು ಎಂಬುದನ್ನು ತೀರ್ಮಾಣ ಮಾಡಬೇಕಿದೆ. ಪೌಷ್ಠಿಕ ಆಹಾರ ಸೇವನೆ ಮಾಡುವದರ ಜೊತೆಗೆ ಮಾದಕ ದ್ರವ್ಯಗಳಿಂದ ದೂರ ಇದ್ದು, ರಾಷ್ಟ್ರ ಕಟ್ಟುವಲ್ಲಿ ಕಾರ್ಯದಲ್ಲಿ ನಿರತರಾಗಬೇಕು. ಜಿಲ್ಲೆಯಲ್ಲಿ ಅಕ್ರಮ ಮಾದಕ ವಸ್ತು ಮಾರಾಟಗಾರರನ್ನು ಗುರುತಿಸಿ ಶಿಕ್ಷಿಸುವಲ್ಲಿ ಜಿಲ್ಲಾ ಪೊಲೀಸ್ ಮಹತ್ವದ ಕಾರ್ಯ ಮಾಡುತ್ತಿದ್ದು, ಶಾಲಾ, ಕಾಲೇಜು ಆವರಣ ಸುತ್ತಮುತ್ತ ಮಾದಕ ವಸ್ತು ಮಾರಾಟ ಕಂಡುಬಂದಲ್ಲಿ 112ಗೆ ಕರೆ ಮಾಡಿದಾಗ ವಾತಾವರಣ ಸರಿಪಡಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಜಿಲ್ಲೆಯಾದ್ಯಂತ ನಡೆದ ಕಾರ್ಯಕ್ರಮದಲ್ಲಿ 1600 ಪೊಲೀಸ್ ಸಿಬ್ಬಂದಿ, ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಸಹ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಅಲ್ಪಸಂಖ್ಯಾತರ ವಸತಿ ಶಾಲೆ ಹಾಗೂ ಕಾಲೇಜಿನ ಪ್ರಾಂಶುಪಾಲರಾದ ರಾಜೇಶ್ವರಿ, ಮಹಮ್ಮದ ರಹೀಂ, ಆನಂದ ಗಬ್ಬೂರ ಸೇರಿದಂತೆ ಸಹ ಶಿಕ್ಷಕರು, ನಿಲಯ ಮೇಲ್ವಿಚಾರಕರು ಉಪಸ್ಥಿತರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ನೊಂದವರಿಗೆ ನ್ಯಾಯ ಕೊಡಿಸುವಲ್ಲಿ ರಾಜ್ಯ ಮೊದಲ ಸ್ಥಾನ: ಗೃಹಸಚಿವ ಪರಮೇಶ್ವರ್
ಜಿಎಸ್‌ಟಿ ದರ ಬದಲಾವಣೆ ಬಳಿಕ ವಾಣಿಜ್ಯ ತೆರಿಗೆ ಸಂಗ್ರಹ ಕುಸಿತ