ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಡಿಕೆ ಶಿವಕುಮಾರ್ ವಿರುದ್ಧ ಲೋಕಾಯುಕ್ತ ಎಫ್ಐಆರ್!

By Kannadaprabha News  |  First Published Feb 13, 2024, 11:15 PM IST

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಕರ್ನಾಟಕ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.


ಬೆಂಗಳೂರು (ಫೆ.13): ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಕರ್ನಾಟಕ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ಪ್ರಸ್ತುತ ಸಿಬಿಐ ಈ ಪ್ರಕರಣದ ತನಿಖೆ ನಡೆಸುತ್ತಿದೆ. ಪ್ರಕರಣದ ತನಿಖೆ ನಡೆಸುವುದಕ್ಕೆ ಸಿಬಿಐ ಗೆ ನೀಡಲಾಗಿದ್ದ ಅನುಮತಿಯನ್ನು ಇತ್ತೀಚೆಗೆ ರಾಜ್ಯ ಸರ್ಕಾರ ವಾಪಸ್ ಪಡೆದಿತ್ತು. ಸರ್ಕಾರದ ನಿರ್ಧಾರವನ್ನು ಹೈಕೋರ್ಟ್ ನಲ್ಲಿ ಪ್ರಶ್ನಿಸಿರುವ ಸಿಬಿಐ, ತನಿಖೆ ಮುಗಿಯುವ ಹಂತದಲ್ಲಿದೆ. ಈ ವೇಳೆ ತನಿಖೆಗೆ ನೀಡಿರುವ ಅನುಮತಿ ವಾಪಸ್‌ ತೆಗೆದುಕೊಳ್ಳುವುದು ಸರಿಯಲ್ಲ ಎಂದು ವಾದಿಸಿದೆ. ರಾಜ್ಯ ಸರ್ಕಾರ ಡಿಸೆಂಬರ್‌ 22ರಂದು ಲೋಕಾಯುಕ್ತ ಡಿಜಿಪಿಗೆ ಪತ್ರ ಬರೆದು ಡಿಕೆ ಶಿವಕುಮಾರ್‌ ವಿರುದ್ಧ ತನಿಖೆಗೆ ಆದೇಶಿಸಿತ್ತು.

Tap to resize

Latest Videos

ಬೆಂಗಳೂರಿಗೆ ಕುಡಿಯುವ ನೀರು ಪೂರೈಸುವುದೇ ದೊಡ್ಡ ಸವಾಲಾಗಿದೆ: ಡಿಕೆ ಶಿವಕುಮಾರ

ಲೋಕಾಯುಕ್ತ ರಾಜ್ಯ ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಿಸಿದೆ. ಸಿಬಿಐ ಮೇಲ್ಮನವಿ ಅರ್ಜಿಯ ತೀರ್ಪನ್ನು ಎದುರು ನೋಡುತ್ತಿದ್ದು ಈ ಪ್ರಕರಣ ಲೋಕಾಯುಕ್ತಕ್ಕೆ ವರ್ಗಾವಣೆಯಾಗಲಿದೆಯೇ? ಎಂಬುದನ್ನು ಕಾದುನೋಡುತ್ತೇವೆ ಎಂದು ಲೋಕಾಯುಕ್ತ ಅಧಿಕಾರಿಯೊಬ್ಬರು ಪಿಟಿಐ ಗೆ ಹೇಳಿದ್ದಾರೆ.

ನಾವು ಏನೇ ಗಳಿಸಿದ್ರೂ ಅದನ್ನು ತೆಗೆದುಕೊಂಡು ಹೋಗಲು ಸಾಧ್ಯವಿಲ್ಲ: ಸುತ್ತೂರು ಜಾತ್ರೆಯಲ್ಲಿ ಡಿಕೆಶಿ ಮಾತು

click me!