ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ತಹಸೀಲ್ದಾರ್ ಅಜಿತ್ ರೈ ಅಮಾನತು

Published : Jul 01, 2023, 03:26 PM IST
ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ತಹಸೀಲ್ದಾರ್ ಅಜಿತ್ ರೈ ಅಮಾನತು

ಸಾರಾಂಶ

ನೂರಾರು ಕೋಟಿ ರು. ಅಕ್ರಮ ಆಸ್ತಿ ಪತ್ತೆಯಾದ ಕಾರಣ ಲೋಕಾಯುಕ್ತರ ವಶದಲ್ಲಿರುವ ಕೆ.ಆರ್‌. ಪುರ ತಹಸೀಲ್ದಾರ್‌ ಅಜಿತ್‌ ಕುಮಾರ್‌ ರೈ ಅವರನ್ನು ಅಮಾನತು ಮಾಡಿ ಕಂದಾಯ ಇಲಾಖೆ ಆದೇಶ ಮಾಡಿದೆ.

ಬೆಂಗಳೂರು (ಜು.1) ನೂರಾರು ಕೋಟಿ ರು. ಅಕ್ರಮ ಆಸ್ತಿ ಪತ್ತೆಯಾದ ಕಾರಣ ಲೋಕಾಯುಕ್ತರ ವಶದಲ್ಲಿರುವ ಕೆ.ಆರ್‌. ಪುರ ತಹಸೀಲ್ದಾರ್‌ ಅಜಿತ್‌ ಕುಮಾರ್‌ ರೈ ಅವರನ್ನು ಅಮಾನತು ಮಾಡಿ ಕಂದಾಯ ಇಲಾಖೆ ಆದೇಶ ಮಾಡಿದೆ.

500 ಕೋಟಿ ರು. ಮೌಲ್ಯದಷ್ಟುಅಕ್ರಮ ಆಸ್ತಿ ಪತ್ತೆಯಾದ ಹಿನ್ನೆಲೆಯಲ್ಲಿ ಅಜಿತ್‌ ರೈ  ವಿರುದ್ಧ ಬೆಂಗಳೂರು ನಗರ ಪೊಲೀಸ್ ಠಾಣೆಯಲ್ಲಿ ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ 1988ರ ರೀತ್ಯಾ ದೂರು ದಾಖಲಿಸಿಕೊಂಡು ಘನ 23ನೇ ಹೆಚ್ಚುವರಿ ನ್ಯಾಯಾಲಯದಿಂದ ಆಗತ್ಯವಾದ ಶೋಧನಾ ವಾರೆಂಟ್ ಪಡೆದುಕೊಂಡು ತಹಸೀಲ್ದಾರ ನಿವಾಸಗಳನ್ನು ಶೋಧಿಸಿ ಆದಾಯಕ್ಕಿಂತ ಮೀರಿದ ಆಸ್ತಿ ಪತ್ತೆ ಹಚ್ಚಲಾಗಿತ್ತು. ಈ ಹಿನ್ನೆಲೆ ತಹಸೀಲ್ದಾರ್ 7 ದಿನಗಳ ಕಾಲ ಲೋಕಾಯುಕ್ತ ಪೊಲೀಸರ ವಶಕ್ಕೆ ನೀಡಿ ನಗರದ 78ನೇ ಸಿಸಿಎಚ್‌ ನ್ಯಾಯಾಲಯ ಶುಕ್ರವಾರ ಆದೇಶ ನೀಡಿದೆ. ತಹಸೀಲ್ದಾರ್ ಹುದ್ದೆಯಲ್ಲಿ ಮುಂದುವರಿದರೆ ತನಿಖೆಗೆ ಅಡ್ಡಿ ಮಾಡುವ ಸಾಧ್ಯತೆ ಹಿನ್ನೆಲೆ ಕೂಡಲೇ ಅಮಾನತ್ತಿನಲ್ಲಿಡುವಂತೆ ಆದೇಶದಲ್ಲಿ ತಿಳಿಸಿದೆ. 

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಇಂದು ವಿಚಾರಣೆಗೆ ಬರಲು ಅಜಿತ್ ರೈಗೆ ಲೋಕಾಯುಕ್ತರಿಂದ ನೋಟಿಸ್

ಈ ಹಿಂದೆಯೂ ಸರ್ಕಾರ ಅಮಾನತ್ತು ಮಾಡಿತ್ತು:

ಈ ಹಿಂದೆ ಕೆ.ಆರ್‌. ಪುರದ ತಹಸೀಲ್ದಾರ್‌ ಆಗಿ ಕಾರ್ಯನಿರ್ವಹಿಸುತ್ತಿದ್ದ ಅಜಿತ್‌ ರಾಜಕಾಲುವೆ ಒತ್ತುವರಿದಾರರಿಗೆ ಸಹಕಾರ ನೀಡಿ ಹೈಕೋರ್ಟ್‌ನಿಂದ ತಡೆಯಾಜ್ಞೆ ತರಲು ನೆರವು ನೀಡಿದ್ದರು ಎಂಬ ಆರೋಪದಡಿ ರಾಜ್ಯ ಸರ್ಕಾರ ಅಮಾನತು ಮಾಡಿತ್ತು.

Lokayukta raids: ನಿರ್ಮಿತಿ ಕೇಂದ್ರದ ಗಂಗಾಧರ್‌ ಬಳಿ ₹3.75 ಕೋಟಿ ಆಸ್ತಿ ಪತ್ತೆ!

ಕೆಲವು ದಿನಗಳ ಹಿಂದೆ ಅಮಾನತು ಆದೇಶ ಹಿಂಪಡೆದು ಮತ್ತೆ ಕೆ.ಆರ್‌.ಪುರ ತಹಸೀಲ್ದಾರ್‌ ಆಗಿ ಬಂದಿದ್ದರು. ಕಳೆದ ಒಂದು ವಾರದ ಹಿಂದಷ್ಟೇ ಸ್ಥಳ ತೋರಿಸದೆ ವರ್ಗಾವಣೆ ಮಾಡಲಾಗಿತ್ತು. ಇದೀಗ ನ್ಯಾಯಾಲಯವು ಲೋಕಾಯುಕ್ತ ಪೊಲೀಸರ ವಶಕ್ಕೆ ನೀಡಿದ ಆದೇಶಿಸಿರುವ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಚಿನ್ನಸ್ವಾಮಿಗೆ ಅಂತಾರಾಷ್ಟ್ರೀಯ ಮತ್ತು IPL ಪಂದ್ಯಗಳು ವಾಪಸ್; ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ
ನಾನು ಕೃಷ್ಣತತ್ತ್ವ ನಂಬಿದವನೇ ಹೊರತು, ಕಾಂಗ್ರೆಸ್‌ನ ಕಂಸ ಹಿಂಸೆಯನ್ನಲ್ಲ: ಹೆಚ್.ಡಿ.ಕುಮಾರಸ್ವಾಮಿ!