
ಬೆಳಗಾವಿ (ಏ.21): ಗೋವುಗಳನ್ನು ಅಕ್ರಮವಾಗಿ ಲಾರಿಯಲ್ಲಿ ತುಂಬಿಕೊಂಡು ಸಾಗಿಸುತ್ತಿದ್ದ ವೇಳೆ ಹಿಂದೂ ಕಾರ್ಯಕರ್ತರು ತಡೆಹಿಡಿದು ಲಾರಿ ಗಾಜು ಪುಡಿ ಪುಡಿ ಚಾಲಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಬೆಳಗಾವಿ ಜಿಲ್ಲೆಯ ಸುವರ್ಣಸೌಧದ ಮುಂಭಾಗದಲ್ಲಿ ನಡೆದಿದೆ.
ಮಹಾರಾಷ್ಟ್ರ ಕಡೆಯಿಂದ ಹುಬ್ಬಳ್ಳಿ ಕಡೆಗೆ ಗೋವುಗಳನ್ನು ತುಂಬಿಕೊಂಡು ಹೊರಟಿದ್ದ ಲಾರಿ. ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿರುವ ಬಗ್ಗೆ ಮಾಹಿತಿ ಪಡೆದ ಹಿಂದೂ ಕಾರ್ಯಕರ್ತರು ಸುವರ್ಣಸೌಧದ ಮುಂಭಾಗದ ಹೆದ್ದಾರಿಯಲ್ಲಿ ಲಾರಿಗೆ ತಡೆಯೊಡ್ಡಿದ್ದಾರೆ. ಬಳಿಕ ಲಾರಿಯ ಗಾಜು ಪುಡಿಗಟ್ಟಿದ್ದಾರೆ. ಅಕ್ರಮವಾಗಿ ಗೋವುಗಳನ್ನ ಸಾಗಾಟ ಮಾಡುತ್ತಿದ್ದವನಿಗೂ ಥಳಿಸಿದ್ದಾರೆ.
ಹಿಂಸಾತ್ಮಕವಾಗಿ ಅಕ್ರಮ ಗೋವು ಸಾಗಾಟ; ಜಾನುವಾರು, ವಾಹನ ಸಮೇತ ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು!
ಘಟನೆ ಬಳಿಕ ಸ್ಥಳಕ್ಕೆ ದಾವಿಸಿ ಬಂದ ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್. ಸ್ಥಳದಲ್ಲಿಯೇ ಡಿಸಿಪಿ ರೋಹನ್ ಜಗದೀಶ್ ಜೊತೆಗೆ ಶೆಟ್ಟರ್ ಮಾತುಕತೆ ನಡೆಸಿದರು. ಈ ವೇಳೆ ನೂರಾರು ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಜಮಾಯಿಸಿದರು.
ಅಕ್ರಮ ದನ ಸಾಗಾಟದ ವಾಹನ ಡಿಕ್ಕಿಯಾಗಿ ವ್ಯಕ್ತಿ ಸಾವು ಆರೋಪ; ಹಿಂದೂ ಸಂಘಟನೆಗಳಿಂದ ಪ್ರತಿಭಟನೆ
ಡಿಸಿಪಿ ರೋಹನ್ ಜಗದೀಶ್ ಹೇಳಿದ್ದೇನು?
ಬೆಳಗಾವಿಯಲ್ಲಿ ಹಿಂದೂ ಕಾರ್ಯಕರ್ತರಿಂದ ಲಾರಿ ಚಾಲಕನ ಮೇಲೆ ಹಲ್ಲೆ ನಡೆಸಿದ ವಿಚಾರ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಪಿ ರೋಹನ್ ಜಗದೀಶ್, ಸಂಜೆ 7 ಗಂಟೆಗೆ ಆಕಳು ಸಾಗಾಟ ಮಾಡ್ತಿದ್ದ ವಾಹನ ತಡೆಯಲಾಗಿದೆ. ಈ ವೇಳೆ ಡ್ರೈವರ್ ಹಾಗೂ ಸ್ಥಳೀಯ ಯುವಕರ ಮಧ್ಯೆ ವಾಗ್ವಾದ ನಡೆದಿದೆ. ಪ್ರಾಥಮಿಕವಾಗಿ ನಮಗೆ ಮಾಹಿತಿ ಇರುವ ಪ್ರಕಾರ 10 ರಿಂದ 12 ಆಕಳು ಲಾರಿಯಲ್ಲಿದ್ದವು ಎನ್ನಲಾಗಿದೆ. ವಾಗ್ವಾದ ನಡೆಸಿದ್ದರಿಂದ ಡ್ರೈವರ್ ಹಾಗೂ ಕ್ಲೀನರ್ ಮೇಲೆ ಯುವಕರು ಹಲ್ಲೆ ಮಾಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಕರಣದ ಕುರಿತು ತನಿಖೆ ನಡೆಸುತ್ತೇವೆ ಹೆಚ್ಚಿನ ಮಾಹಿತಿ ಪಡೆದು ಅನಂತರ ಮಾಹಿತಿ ನೀಡುವೆ ಎಂದು ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ