ತೇಜಸ್ವಿ ಸೂರ್ಯ ಹಾಗೂ ಚಕ್ರವರ್ತಿ ಸೂಲಿಬೆಲೆ ಹತ್ಯೆಗೆ ಸ್ಕೆಚ್ ರೂಪಿಸಿದ ಆರೋಪದಡಿಯಲ್ಲಿ ಆರು ಮಂದಿ ಎಸ್‌ಡಿಪಿಐ ಕಾರ್ಯಕರ್ತರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಸ್ವತಃ ಬೆಂಗಳೂರು ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಅವರು ಸ್ಪಷ್ಟಪಡಿಸಿದ್ದಾರೆ. ಆದ್ರೆ, ಇದನ್ನು ಎಸ್‌ಡಿಪಿಎ ರಾಜ್ಯಾಧ್ಯಕ್ಷ ಅಲ್ಲಗೆಳೆದಿದ್ದಾರೆ
ಮಂಗಳೂರು/ಬೆಂಗಳೂರು, (ಜ.17): ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಪರ ಜಾಗೃತಿ ಜಾಥಾ ವೇಳೆ ಸಂಸದ ತೇಜಸ್ವಿ ಸೂರ್ಯ ಹಾಗೂ ಚಕ್ರವರ್ತಿ ಸೂಲಿಬೆಲೆ ಹತ್ಯೆಗೆ ಸ್ಕೆಚ್ ನಡೆದಿತ್ತು ಎನ್ನುವ ಸ್ಫೋಟಕ ಮಾಹಿತಿಯನ್ನು ಬೆಂಗಳೂರು ಪೊಲೀಸರು ಬಯಲು ಮಾಡಿದ್ದಾರೆ.
ಅಷ್ಟೇ ಅಲ್ಲದೇ ಈ ಪ್ರಕರಣ ಸಂಬಂಧ 6 ಜನರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದು, ಬಂಧಿತರೆಲ್ಲರೂ ಎಸ್‌ಡಿಪಿಐ ಕಾರ್ಯಕರ್ತರು ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಸಿಎಎ ಪರ ಪ್ರತಿಭಟನೆ: ತೇಜಸ್ವಿ ಸೂರ್ಯ, ಸೂಲಿಬೆಲೆ ಹತ್ಯೆಗೆ ಸ್ಕೆಚ್!...
ತೇಜಸ್ವಿ ಸೂರ್ಯ ಹಾಗೂ ಚಕ್ರವರ್ತಿ ಸೂಲಿಬೆಲೆ ಹತ್ಯೆಗೆ ಸ್ಕೆಚ್ ರೂಪಿಸಿದ ಆರೋಪದಡಿಯಲ್ಲಿ ಆರು ಮಂದಿ ಎಸ್‌ಡಿಪಿಐ ಕಾರ್ಯಕರ್ತರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಸ್ವತಃ ಬೆಂಗಳೂರು ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಅವರು ಸ್ಪಷ್ಟಪಡಿಸಿದ್ದಾರೆ. ಆದ್ರೆ, ಇದನ್ನು ಎಸ್‌ಡಿಪಿಎ ರಾಜ್ಯಾಧ್ಯಕ್ಷ ಅಲ್ಲೆಗೆಳೆದಿದ್ದಾರೆ.
ಇಂದು (ಶುಕ್ರವಾರ) ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಸ್‍ಡಿಪಿಐ ರಾಜ್ಯಾದ್ಯಕ್ಷ ಇಲ್ಯಾಸ್ ಮಹಮ್ಮದ್, ಡಿಸೆಂಬರ್ 22 ರ ಘಟನೆಯಲ್ಲಿ ಭಾಗಿಯಾಗಿರುವ ಆರು ಜನರು ನಮ್ಮ ಪಕ್ಷಕ್ಕೆ ಸಂಬಂಧ ಇಲ್ಲ ಎಂದು ಸ್ಪಷ್ಟಪಡಿಸಿದರು.
ಅವರಿಗೆ ಹಾಗೂ ನಮ್ಮ ಪಕ್ಷಕ್ಕೆ ಸಂಬಂಧ ಇಲ್ಲ. ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಅಪಾಧನೆಯಲ್ಲಿ ಯಾವುದೇ ಹುರುಳಿಲ್ಲ. ಅವರು ಸುಳ್ಳು ಹೇಳುತ್ತಿದ್ದಾರೆ ಎಂದು ಹೇಳಿದರು.
ತೇಜಸ್ವಿ ಸೂರ್ಯ ಹಾಗೂ ಚಕ್ರವರ್ತಿ ಸೂಲಿಬೆಲೆಯವರನ್ನು ಹೀರೋ ಮಾಡಲು ಹೊರಟಿದ್ದಾರೆ. ಪೊಲೀಸ್ ಇಲಾಖೆ ನಮ್ಮನ್ನು ನೇರವಾಗಿ ಟಾರ್ಗೆಟ್ ಮಾಡುತ್ತಿದೆ. ಪ್ರತಿಭಟನೆಯನ್ನು ಹುಟ್ಟಡಗಿಸಲು ಈ ರೀತಿ ಮಾಡುತ್ತಿದ್ದಾರೆ. ರಾಜಕೀಯ ನಾಯಕರ ಹಿತ್ತಾಸಕ್ತಿಗೆ ಕೆಲ ಪೊಲೀಸರು ಕೆಲಸ ಮಾಡ್ತಾ ಇದ್ದಾರೆ ಎಂದು ಗಂಭೀರ ಆರೋಪ ಮಾಡಿದರು.
ನಮ್ಮ ಬಗ್ಗೆ ಅಪಪ್ರಚಾರ ಮಾಡುತ್ತಿರುವುದರ ಬಗ್ಗೆ ಕಾನೂನು ಹೋರಾಟ ಮಾಡುತ್ತೇವೆ ಎಂದರು.