IAS, IPS ಅಧಿಕಾರಿಗಳ ಮೇಲೆ ಸಿಬಿಐ ದಾಳಿ

By Kannadaprabha NewsFirst Published Nov 9, 2019, 8:21 AM IST
Highlights

ಬಹುಕೋಟಿ ಐಎಂಎ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳು ರಾಜ್ಯದ ಹಲವು ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳ ಮೇಲೆ ದಾಳಿ ನಡೆಸಿದ್ದಾರೆ. 

ಬೆಂಗಳೂರು [ನ.09]:  ಬಹುಕೋಟಿ ‘ಐ ಮಾನಿಟರಿ ಅಡ್ವೈಸರಿ’ (ಐಎಂಎ) ವಂಚನೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳು ಬೆಂಗಳೂರಿನ 11 ಕಡೆ ಸೇರಿ ರಾಜ್ಯದ 15 ಕಡೆ ಏಕಕಾಲದಲ್ಲಿ ದಾಳಿ ನಡೆಸಿದ್ದು, ಅಕ್ರಮಕ್ಕೆ ಸಹಕಾರ ನೀಡಿದ ಆರೋಪ ಎದುರಿಸುತ್ತಿರುವ ಐಪಿಎಸ್, ಐಎಎಸ್ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದೆ. 

ಹಿರಿಯ ಐಪಿಎಸ್ ಅಧಿಕಾರಿಗಳಾದ ಹೇಮಂತ್ ನಿಂಬಾಳ್ಕರ್, ಅಜಯ್ ಹಿಲೋರಿ, ಐಎಎಸ್ ಅಧಿಕಾರಿ ಬೆಂಗಳೂರಿನ ಹಿಂದಿನ ಜಿಲ್ಲಾಧಿಕಾರಿ ವಿಜಯಶಂಕರ್ ಮೇಲೆ ದಾಳಿ ನಡೆದಿದೆ. ಅಲ್ಲದೆ, ಬಿಡಿಎ ಎಂಜಿನಿಯರ್ ಕುಮಾರ್, ಡಿವೈಎಸ್ಪಿ ಶ್ರೀಧರ್, ಉಪ ವಿಭಾಗಾಧಿಕಾರಿ ಎಲ್.ಸಿ.ನಾಗರಾಜ್, ಇನ್ಸ್‌ಪೆಕ್ಟರ್ ಎಂ.ರಮೇಶ್, ಸಬ್ ಇನ್ಸ್‌ಪೆಕ್ಟರ್ ಗೌರಿ ಶಂಕರ್, ಗ್ರಾಮ ಲೆಕ್ಕಿಗ ಮಂಜುನಾಥ್ ನಿವಾಸಗಳ ಮೇಲೂ ಶುಕ್ರವಾರ ಈ ದಾಳಿ ನಡೆದಿದೆ. ಬೆಂಗಳೂರು, ಮಂಡ್ಯ, ರಾಮನಗರ, ಬೆಳಗಾವಿಯಲ್ಲಿ ಬೆಳಗ್ಗೆಯಿಂದ ಸಂಜೆ ತನಕ ದಾಳಿ ನಡೆಸಿರುವ ಸಿಬಿಐ ಎಸ್ಪಿ ಥಾಮ್ಸನ್ ನೇತೃತ್ವದ ತಂಡ ಅಪಾರ ದಾಖಲೆ ಜಪ್ತಿ ಮಾಡಿದ್ದಾಗಿ ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ.

ಯುಪಿಯಲ್ಲೂ ಶೋಧ: ಬೆಂಗಳೂರು ಪೂರ್ವ ವಿಭಾಗದ ಡಿಸಿಪಿಯಾಗಿದ್ದ ಅಜಯ್ ಹಿಲೋರಿ ಅವರು ಮನ್ಸೂರ್ ಖಾನ್ ಪರ ತನಿಖೆ ನಡೆಸಿ ಹಿರಿಯ ಅಧಿಕಾರಿ ಗಳಿಗೆ ವರದಿ ನೀಡಿರುವ ಆರೋಪ ಎದುರಿಸುತ್ತಿದ್ದಾರೆ. ಅಜಯ್ ಹಿಲೋರಿ ಉತ್ತರ ಪ್ರದೇಶದ ಮೀರತ್ ಮೂಲದವರಾಗಿದ್ದು, ಅಲ್ಲೂ ಅವರ ಮನೆ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಜಪ್ತಿ ಮಾಡಿದ್ದಾರೆ. 

ಇನ್ನು ಆರ್ಥಿಕ ನಷ್ಟ ಅನುಭವಿಸಿದ್ದ ಮನ್ಸೂರ್ ಖಾನ್, 2018 ರಲ್ಲಿ ಬ್ಯಾಂಕ್‌ಗಳಿಂದ 600 ಕೋಟಿ ಸಾಲ ಪಡೆಯಲು ಯತ್ನಿಸಿದ್ದ. ಆದರೆ ಬ್ಯಾಂಕ್‌ಗಳು, ಸರ್ಕಾರದ ನಿರಾಕ್ಷೇಪಣಾ (ಎನ್‌ಓಸಿ) ಪತ್ರ ನೀಡಿದರೆ ಸಾಲ ಮಂಜೂರು ಮಾಡುವುದಾಗಿ ಹೇಳಿದ್ದವು. ಆಗ ಅಂದಿನ
ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ನನಗೆ ಪರಿಚಯವಿದ್ದು, ಬ್ಯಾಂಕ್‌ನಲ್ಲಿ ಸಾಲಕ್ಕಾಗಿ ಸರ್ಕಾರದ ನಿರಪೇಕ್ಷಣಾ ಪ್ರಮಾಣ ಪತ್ರ (ಎನ್‌ಓಸಿ) ಕೊಡಿಸುತ್ತೇನೆ ಎಂದು ನಂಬಿಸಿ ಬಿಡಿಎ ಕಾರ್ಯನಿರ್ವಾಹಕ ಎಂಜಿನಿಯರ್ ಕುಮಾರ್ ಸಹ ಮನ್ಸೂರ್ ನಿಂದ 5 ಕೋಟಿ ವಸೂಲಿ ಮಾಡಿದ್ದ ಆರೋಪ ಎದುರಿಸುತ್ತಿದ್ದಾರೆ. ಬೆಳಗ್ಗಿನಿಂದ 15ಕ್ಕೂ ಹೆಚ್ಚು ಕಡೆ ಏಕಕಾಲದಲ್ಲಿ ದಾಳಿ ನಡೆಸಿದ ಅಧಿಕಾರಿಗಳು ರಾತ್ರಿವರೆಗೂ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ED ಶೂನ್ಯ, CBIಗೆ ಅಗ್ರಸ್ಥಾನ; ಏನಿದು ಡಿಕೆಶಿ ಮಾತಿನ ಒಳ ಮರ್ಮ?...

ಏನಿದು ಪ್ರಕರಣ?: ಅಧಿಕ ಲಾಭಾಂಶದ ಆಮಿಷವೊಡ್ಡಿ 40 ಸಾವಿರಕ್ಕೂ ಅಧಿಕ ಜನರಿಗೆ  ಐ ಮಾನಿಟರಿ ಅಡ್ವೈಸರ್ (ಐಎಂಎ) ಕಂಪನಿ ಮಾಲೀಕ ಮಹಮ್ಮದ್ ಮನ್ಸೂರ್ ಖಾನ್ ವಂಚಿಸಿದ್ದ. ಇದಕ್ಕೂ ಮುನ್ನವೇ ಐಎಂಎ ಸಂಸ್ಥೆ ಆರ್ಥಿಕ ವಹಿವಾಟಿನ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದ
ಭಾರತೀಯ ರಿಸರ್ವ್ ಬ್ಯಾಂಕ್‌ನ ಪ್ರಾದೇಶಿಕ ಆಯುಕ್ತರು, ಆ ಸಂಸ್ಥೆ ಹಣಕಾಸು ವ್ಯವಹಾರದ ಬಗ್ಗೆ ತನಿಖೆ ನಡೆಸುವಂತೆ  2018 ರ ನವೆಂಬರ್ ನಲ್ಲಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದರು.

ರಾಜ್ಯ ಸರ್ಕಾರವು, ಐಎಂಎ ಸಂಸ್ಥೆ ಬಗ್ಗೆ ವಿಚಾರಣೆ ನಡೆಸಿ ವರದಿ ನೀಡಲು ಉಪ ವಿಭಾಗಾಧಿಕಾರಿ ನಾಗರಾಜ್‌ರನ್ನು ಸಕ್ಷಮ ಪ್ರಾಧಿ ಕಾರಿಯನ್ನಾಗಿ ನೇಮಿಸಿತ್ತು. ಆದರೆ ಅಧಿಕಾರಿಗಳು ಮನ್ಸೂರ್ ಖಾನ್ ಬಳಿ ಲಂಚ ಪಡೆದು ನೆರವು ನೀಡಿದ್ದರು. ಪ್ರಕರಣದ
ತನಿಖೆಗೆ ಹಿಂದಿನ ಸಮ್ಮಿಶ್ರ ಸರ್ಕಾರ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚನೆ ಮಾಡಿತ್ತು. ಎಸ್‌ಐಟಿ ಅಧಿಕಾರಿ ಸೇರಿ ಹಲವು ಮಂದಿಯನ್ನು ಬಂಧಿ ಸಿತ್ತು. ಬಳಿಕ ಹೆಚ್ಚಿನ ತನಿಖೆಗೆ ಸಿಬಿಐಗೆ ವರ್ಗಾಯಿಸಲಾಗಿತ್ತು.

click me!