ವರ್ಷದೊಳಗೆ ಬೆಂಗ್ಳೂರಿನ ಚಿತ್ರಣವೇ ಚೇಂಜ್..!

Published : Jan 01, 2021, 10:27 AM IST
ವರ್ಷದೊಳಗೆ ಬೆಂಗ್ಳೂರಿನ ಚಿತ್ರಣವೇ ಚೇಂಜ್..!

ಸಾರಾಂಶ

ವರ್ಷದೊಳಗೆ ಬೆಂಗ್ಳೂರಿನ ಚಿತ್ರಣವೇ ಬದಲು: ಸಿಎಂ | ದೇಶದಲ್ಲೇ ಮಾದರಿ ನಗರವಾಗಿ ಸಿಲಿಕಾನ್‌ ಸಿಟಿ ಅಭಿವೃದ್ಧಿ

ಬೆಂಗಳೂರು(ಜ.01): ಮುಂದಿನ ಒಂದು ವರ್ಷದಲ್ಲಿ ರಾಜಧಾನಿ ಬೆಂಗಳೂರಿನ ಚಿತ್ರಣವನ್ನೇ ಬದಲಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ.

ಸೋಮವಾರ ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಬೆಂಗಳೂರು ನಗರದ ಅಭಿವೃದ್ಧಿ ದೃಷ್ಟಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರ ಸಲಹೆಯಂತೆ ‘ಬೆಂಗಳೂರು ಮಿಷನ್‌-2022’ಕ್ಕೆ ಇತ್ತೀಚೆಗಷ್ಟೇ ಚಾಲನೆ ನೀಡಿದ್ದೇವೆ.

ಹೊಸ ವರ್ಷ: ಪಾರ್ಟಿಗಾಗಿ ಅಕ್ರಮವಾಗಿ ಸಂಗ್ರಹಿಸಿದ್ದ 83 ಲೀಟರ್‌ ಮದ್ಯ ವಶ

ಇದಕ್ಕೆ ಸಂಬಂಧಿಸಿದಂತೆ ಮುಂದಿನ ತಿಂಗಳಿಂದಲೇ ಅಭಿವೃದ್ಧಿ ಕೆಲಸ ಆರಂಭಿಸಲಾಗುವುದು. ಅದಕ್ಕೆ ಅಗತ್ಯವಾದ ಹಣವನ್ನೂ ಬಿಡುಗಡೆ ಮಾಡಿ ಬೆಂಗಳೂರನ್ನು ದೇಶದಲ್ಲೇ ಮಾದರಿ ನಗರವನ್ನಾಗಿ ಮಾಡುವುದಕ್ಕೆ ಒತ್ತು ನೀಡಲಾಗುವುದು ಎಂದರು.

ಪ್ರವಾಸೋದ್ಯಮಕ್ಕೆ ಅನೇಕ ಕಾರ್ಯಕ್ರಮಗಳನ್ನು ರೂಪಿಸಿದ್ದೇವೆ. ಹಣವನ್ನೂ ಬಿಡುಗಡೆ ಮಾಡುತ್ತಿದ್ದೇವೆ. ಜೋಗ ಜಲಪಾತ, ಕೆಮ್ಮಣ್ಣುಗುಂಡಿ ಸೇರಿದಂತೆ ಪ್ರಮುಖ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಒತ್ತು ನೀಡಲಾಗುವುದು. ಕರ್ನಾಟಕ ರಾಜ್ಯವನ್ನು ಅಭಿವೃದ್ಧಿ ಭೂಪಟದಲ್ಲಿ ನಂಬರ್‌ ಒನ್‌ ಸ್ಥಾನಕ್ಕೆ ಕೊಂಡೊಯ್ಯುವ ಆಸೆಯಿದೆ. ಇದಕ್ಕಾಗಿ ನಾನೂ ಸೇರಿದಂತೆ ನಮ್ಮ ಸಂಪುಟದ ಎಲ್ಲ ಸಹೋದ್ಯೋಗಿಗಳು ಹಾಗೂ ಅಧಿಕಾರಿಗಳು ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಾರಲ್ಲ, ಸರ್ಕಾರ ಕೆಲಸಕ್ಕೆ ಓಡಾಡಲು ಹೆಲಿಕಾಪ್ಟರ್, ವಿಮಾನ ಖರೀದಿಗೆ ಡಿಕೆಶಿ ನೇತೃತ್ವದಲ್ಲಿ ಸಭೆ
ರಾಜ್ಯದಲ್ಲಿ 2.84 ಲಕ್ಷ ಸರ್ಕಾರಿ ಹುದ್ದೆ ಖಾಲಿ: 24,300 ಹುದ್ದೆ ಭರ್ತಿಗೆ ಅಂಕಿತ! ಇಲಾಖಾವಾರು ಮಾಹಿತಿ ಇಲ್ಲಿದೆ!