ಮುಂದಿನ 7 ದಿನ ಕರ್ನಾಟಕದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಲೆವೆಡೆ ಗುಡು ಸಹಿತ ಮಳೆಯಾಗಲಿದೆ. ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಿವಾಸಿಗಳು ಮುನ್ನಚ್ಚರಿಕೆ ನೀಡಲಾಗಿದೆ.
ಬೆಂಗಳೂರು(ಜೂ.18) ಹವಾಮಾನ ಇಲಾಖೆ ಮಳೆ ಮುನ್ಸೂಚನೆ ನೀಡಿದೆ. ಇದೇ ವೇಳೆ ಎಚ್ಚರಿಕೆಯನ್ನೂ ನೀಡಿದೆ. ಕರ್ನಾಟಕದಲ್ಲಿ ಮುಂದಿನ 7 ದಿನ ಭಾರಿ ಮಳೆಯಾಗಲಿದೆ. ಕರಾವಳಿಯ ಜಿಲ್ಲೆಯ ಬಹುತೇಕ ಸ್ಥಳಗಳಲ್ಲಿ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದಿದೆ. ಇದೇ ವೇಳೆ ಬೆಂಗಳೂರು ನಗರ ಹಾಗೂ ಸುತ್ತಮುತ್ತ ಪ್ರದೇಶದಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಮುಂದಿನ 24 ಗಂಟೆಗಳಲ್ಲಿ ಗುಡುಗು ಸಹಿತ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.
ಬೆಂಗಳೂರಿನಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ದಿನಾಂಕ 23 ರಿಂದ ಮಳೆ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞ ಸಿಎಸ್ ಪಾಟೇಲ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಕಳೆರೆಡು ದಿನದಿಂದ ಮಳೆಯಾಗುತ್ತಿದೆ. ಬೆಳಗ್ಗೆಯಿಂದ ಮಧ್ಯಾಹ್ನದವರಿಗೆ ಬಿಸಿಲು ಹಾಗೂ ಮಧ್ಯಾಹ್ನ ಬಳಿಕ ಮಳೆಯಾಗುತ್ತಿದೆ. ನಾಳೆಯಿಂದ ಮಳೆ ಪ್ರಮಾಣ ಹೆಚ್ಚಾಗುವ ಸಾಧ್ಯತೆಯನ್ನು ಹವಾಮಾನ ಇಲಾಖೆ ಹೇಳಿದೆ.
ಮಲೆನಾಡಲ್ಲಿ ಮತ್ತೆ ಅಬ್ಬರಿಸಿದ ಮಳೆ; ಮಹಲ್ಗೋಡು ಸೇತುವೆ ಮುಳುಗಡೆ!
ಇವತ್ತು(ಜೂ.18) ಹಾಗೂ ನಾಳೆ ಕರ್ನಾಟಕದ ಕರಾವಳಿ ಭಾಗಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಹೀಗಾಗಿ ಎರಡು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜೂನ್ 22 ಹಾಗೂ 23ರಂದ ಈ ಮೂರು ಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಒಟ್ಟು ನಾಲ್ಕು ದಿನ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಚಿಕ್ಕಮಗಳೂರು, ಹಾಸನ, ಕೊಡಗು, ಚಿತ್ರದುರ್ಗ, ಶಿವಮೊಗ್ಗ, ಮಂಡ್ಯ ಜಿಲ್ಲೆಗಳಲ್ಲಿ ಭಾರೀ ಗಾಳಿಯೊಂದಿಗೆ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಒಳನಾಡಿನ ಉಳಿದ ಜಿಲ್ಲೆಗಳ ಅನೇಕ ಸ್ಥಳಗಳಲ್ಲಿ ಭಾರೀ ಗಾಳಿ ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಹೇಳಿದೆ. ಮುಂದಿನ 48 ಗಂಟೆಗಳಲ್ಲಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಇದರಿಂದ ಗರಿಷ್ಠ ಮತ್ತು ಕನಿಷ್ಠ ತಾಪಮಾನವು 30° C ಮತ್ತು 21°C ಆಗಿರಬಹುದು ಎಂದಿದೆ.
ಚಿಕ್ಕಮಗಳೂರು: ಮಳೆ ಅನಾಹುತ ತಡೆಯಲು ಜಿಲ್ಲಾಡಳಿತ ಸಜ್ಜು!
ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಆದರೆ ಒಂದೇ ಸಮನೆ ಸುರಿದು ಹಲವೆಡೆ ಅವಾಂತರಗಳು ಸೃಷ್ಟಿಯಾಗಿದೆ. ಬೆಂಗಳೂರಿನಲ್ಲಿ ಜೂನ್ ತಿಂಗಳು ಗರಿಷ್ಠ ಮಳೆ ದಾಖಲಿಸಿದೆ. ಆದರೆ ನೀರಿನ ಮಟ್ಟ ಏರಿಕೆಯಲ್ಲಿ ಗಣನೀಯ ಏರಿಕೆ ಕಂಡಿಲ್ಲ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಇತ್ತ ಕರ್ನಾಟಕದ ಜಲಾಶಗಳ ಒಳ ಹರಿವು ಹೆಚ್ಚಾಗಿದೆ.