Rain Alert: ಕರ್ನಾಟಕದಲ್ಲಿ ಇನ್ನೂ 6 ದಿನ ಮಳೆ: ಯೆಲ್ಲೋ ಅಲರ್ಟ್‌

By Kannadaprabha News  |  First Published Oct 15, 2022, 3:00 AM IST

ರಾಜ್ಯದಲ್ಲಿ ಮುಂದಿನ ಐದಾರು ದಿನ ಭರ್ಜರಿ ಮಳೆಯಾಗುವ ಸಾಧ್ಯತೆಯಿದೆ. ನೈಋುತ್ಯ ಮುಂಗಾರು ಮಾರುತ ಮರಳುವಿಕೆ, ಅರಬ್ಬಿ ಸಮುದ್ರ, ಉತ್ತರ ಅಂಡಮಾನ್‌ ಸಮುದ್ರ ಭಾಗ ಮತ್ತು ಬಂಗಾಳ ಕೊಲ್ಲಿಯಲ್ಲಿ ನಿರ್ಮಾಣ ಆಗಿರುವ ಮೇಲ್ಮೈ ಸುಳಿಗಾಳಿಗಳು ಮಳೆಯ ಅಬ್ಬರವನ್ನು ಹೆಚ್ಚಿಸಲಿದೆ ಎಂದು ಹವಾಮಾನ ತಜ್ಞರು ಹೇಳುತ್ತಾರೆ. 


ಬೆಂಗಳೂರು (ಅ.15): ರಾಜ್ಯದಲ್ಲಿ ಮುಂದಿನ ಐದಾರು ದಿನ ಭರ್ಜರಿ ಮಳೆಯಾಗುವ ಸಾಧ್ಯತೆಯಿದೆ. ನೈಋುತ್ಯ ಮುಂಗಾರು ಮಾರುತ ಮರಳುವಿಕೆ, ಅರಬ್ಬಿ ಸಮುದ್ರ, ಉತ್ತರ ಅಂಡಮಾನ್‌ ಸಮುದ್ರ ಭಾಗ ಮತ್ತು ಬಂಗಾಳ ಕೊಲ್ಲಿಯಲ್ಲಿ ನಿರ್ಮಾಣ ಆಗಿರುವ ಮೇಲ್ಮೈ ಸುಳಿಗಾಳಿಗಳು ಮಳೆಯ ಅಬ್ಬರವನ್ನು ಹೆಚ್ಚಿಸಲಿದೆ ಎಂದು ಹವಾಮಾನ ತಜ್ಞರು ಹೇಳುತ್ತಾರೆ. ರಾಜ್ಯದ ಕೆಲವೆಡೆ ತುಂತುರು ಮಳೆ, ಇನ್ನು ಕೆಲವೆಡೆ ಭರ್ಜರಿ ಮಳೆಯ ಸಾಧ್ಯತೆಯಿದ್ದು, ಒಟ್ಟಾರೆ ಮುಂದಿನ ಕೆಲ ದಿನ ರಾಜ್ಯದಲ್ಲಿ ಮಳೆಯ ವಾತಾವರಣ ಇರಲಿದೆ. 

ಅಕ್ಟೋಬರ್‌ ಕೊನೆಯ ವಾರದಲ್ಲಿ ಹಿಂಗಾರು ಮಾರುತದಿಂದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಶನಿವಾರ ಬೆಳಗ್ಗೆ 8.30ರವರೆಗೆ ಕಲಬುರಗಿ, ವಿಜಯಪುರ, ಬಾಗಲಕೋಟೆ, ಯಾದಗಿರಿ, ರಾಯಚೂರು, ಕೊಪ್ಪಳ, ಬಾಗಲಕೋಟೆ, ಬೆಳಗಾವಿ, ಉತ್ತರಕನ್ನಡ, ದಾವಣಗೆರೆ, ಚಿಕ್ಕಮಗಳೂರು, ತುಮಕೂರು, ಹಾಸನ, ಬೆಂಗಳೂರು ನಗರ ಮತ್ತು ಗ್ರಾಮಾಂತರ, ರಾಮನಗರ, ಮಂಡ್ಯ, ಚಾಮರಾಜನಗರ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ‘ಯೆಲ್ಲೋ ಅಲರ್ಟ್‌’ ನೀಡಲಾಗಿದೆ. 

Tap to resize

Latest Videos

ಮಳೆ ಹಾನಿ ಸ್ಥಳಕ್ಕೆ ಖುದ್ದು ಹೋಗಿ: ಡಿಸಿಗಳಿಗೆ ಸಿಎಂ ಬೊಮ್ಮಾಯಿ ಖಡಕ್‌ ಸೂಚನೆ

ಆ ಬಳಿಕ ಭಾನುವಾರ ಬೆಳಗ್ಗೆ 8.30ರವರೆಗೆ ಚಾಮರಾಜನಗರ, ಮಂಡ್ಯ, ಕೊಡಗು, ಹಾಸನ, ದಕ್ಷಿಣ ಕನ್ನಡ, ಉತ್ತರಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿ, ಧಾರವಾಡ, ಗದಗ, ಬಾಗಲಕೋಟೆ, ರಾಯಚೂರು, ಕೊಪ್ಪಳ, ಬಳ್ಳಾರಿ ಮತ್ತು ಕಲಬುರಗಿ ಜಿಲ್ಲೆಗೆ ‘ಯೆಲ್ಲೋ ಅಲರ್ಟ್‌’ ಇರಲಿದೆ. ಭಾನುವಾರ ಬೆಳಗ್ಗೆಯಿಂದ ಸೋಮವಾರದ ತನಕ ಚಾಮರಾಜನಗರ, ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿ, ದಾವಣಗೆರೆ, ಚಿತ್ರದುರ್ಗ, ರಾಯಚೂರು, ಬಾಗಲಕೋಟೆ, ಕೊಪ್ಪಳ, ಬಳ್ಳಾರಿ ಮತ್ತು ಕಲಬುರಗಿ ಜಿಲ್ಲೆಗೆ ಯೆಲ್ಲೋ ಅಲರ್ಟ್‌ ಪ್ರಕಟಿಸಲಾಗಿದೆ. ಆ ಬಳಿಕವೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ ಅಗುವ ಸಂಭವ ಇದೆ.

ಗುಡುಗು ಸಹಿತ ಭಾರಿ ಮಳೆ: ನಗರದಲ್ಲಿ ಶುಕ್ರವಾರ ಸಂಜೆ ಗುಡುಗು, ಮಿಂಚು ಸಹಿತ ಧಾರಾಕಾರವಾಗಿ ಮಳೆ ಸುರಿದ ಪರಿಣಾಮ ನಗರದ ರಸ್ತೆ, ಜಂಕ್ಷನ್‌ಗಳಲ್ಲಿ ದೊಡ್ಡ ಪ್ರಮಾಣದಲ್ಲಿ ನೀರು ನಿಂತುಕೊಂಡು ಅವಾಂತರ ಸೃಷ್ಟಿಸಿದೆ. ನಗರದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಮಳೆ ಅಬ್ಬರಿಸುತ್ತಿರುವ ಮಳೆರಾಯ ಶುಕ್ರವಾರವೂ ತನ್ನ ಅಬ್ಬರವನ್ನು ಮುಂದುವರೆಸಿದೆ. ಶಿವಾನಂದ ವೃತ್ತ, ಮಲ್ಲೇಶ್ವರ, ಎಂಜಿ ರಸ್ತೆ, ಡಬ್ಬಲ್‌ ರೋಡ್‌, ಆನಂದ್‌ರಾವ್‌ ವೃತ್ತ, ಶೇಷಾದ್ರಿ ರಸ್ತೆ, ಮೆಜೆಸ್ಟಿಕ್‌, ಚಾಮರಾಜಪೇಟೆ ಸೇರಿ ನಗರ ಹಲವು ಬಡಾವಣೆಗಳು ಭಾರಿ ಮಳೆಯಾಗಿದೆ. 

Karnataka Rains: ಮತ್ತೆ ಕರ್ನಾಟಕದ ಹಲವೆಡೆ ಮಳೆಯಬ್ಬರ: 2 ಬಲಿ

ಧಾರಾಕಾರ ಮಳೆಯಿಂದ ತಗ್ಗು ಪ್ರದೇಶದ ನಿವಾಸಿಗಳಲ್ಲಿ ಆತಂಕ ಉಂಟಾಗಿತ್ತು. ನಗರದಲ್ಲಿ ಬೆಳಗ್ಗೆಯೆಲ್ಲ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು. ಮಧ್ಯಾಹ್ನ ಸಣ್ಣದಾಗಿ ಮಳೆಯಾಗಿ ನಂತರ ತಣ್ಣಗಾಗಿತ್ತು. ರಾತ್ರಿ 7ರ ನಂತರ ನಗರದ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಿದೆ. ಹಲವು ಮರ ಧರೆಗೆ: ಮಳೆಯಿಂದಾಗಿ ಹೆಬ್ಬಾಳದ ಎನ್‌ಇಟಿ ಬಸ್‌ ನಿಲ್ದಾಣ, ಸಂಜಯನಗರ, ವಿಜಯನಗರ ಸೇರಿದಂತೆ ವಿವಿಧ ಕಡೆ ಮರ ಬಿದ್ದಿದ್ದು, ವಾಹನ ಸಂಚಾರಕ್ಕೆ ತಡೆಯುಂಟಾಗಿತ್ತು. ಅಲ್ಲದೆ, ಹಲವು ಕಡೆಗಳಲ್ಲಿ ಮರದ ರೆಂಬೆಗಳು ಬಿದ್ದಿರುವ ವರದಿಯಾಗಿದೆ.

click me!