Rain Alert: ಇಂದು ಭಾರಿ ಮಳೆ ಮುನ್ಸೂಚನೆ: ಮಂಡ್ಯ, ಮೈಸೂರು, ಚಾ.ನಗರಕ್ಕೆ ಆರೆಂಜ್‌ ಅಲರ್ಟ್‌

By Govindaraj SFirst Published Oct 16, 2022, 2:15 AM IST
Highlights

ರಾಜ್ಯದಲ್ಲಿ ಮಳೆ ಇನ್ನಷ್ಟು ಬಿರುಸು ಪಡೆದುಕೊಳ್ಳುವ ಸಾಧ್ಯತೆಯಿದ್ದು, ಹಲವು ಜಿಲ್ಲೆಗಳಿಗೆ ಈ ಮೊದಲು ನೀಡಲಾಗಿದ್ದ ಭಾರಿ ಮಳೆ (6.45 ಸೆಂ.ಮೀ.ನಿಂದ 11.55 ಸೆಂ.ಮೀ.)ಯ ‘ಯೆಲ್ಲೋ ಅಲರ್ಟ್‌’ ಅನ್ನು ಅತಿ ಭಾರಿ ಮಳೆ (11.56 ಸೆಂ.ಮೀ.ನಿಂದ 20.44 ಸೆಂ.ಮೀ.)ಯ ಆರೆಂಜ್‌ ಅಲರ್ಟ್‌ ಆಗಿ ಹವಾಮಾನ ಇಲಾಖೆ ಪರಿವರ್ತಿಸಿದೆ. 

ಬೆಂಗಳೂರು (ಅ.16): ರಾಜ್ಯದಲ್ಲಿ ಮಳೆ ಇನ್ನಷ್ಟು ಬಿರುಸು ಪಡೆದುಕೊಳ್ಳುವ ಸಾಧ್ಯತೆಯಿದ್ದು, ಹಲವು ಜಿಲ್ಲೆಗಳಿಗೆ ಈ ಮೊದಲು ನೀಡಲಾಗಿದ್ದ ಭಾರಿ ಮಳೆ (6.45 ಸೆಂ.ಮೀ.ನಿಂದ 11.55 ಸೆಂ.ಮೀ.)ಯ ‘ಯೆಲ್ಲೋ ಅಲರ್ಟ್‌’ ಅನ್ನು ಅತಿ ಭಾರಿ ಮಳೆ (11.56 ಸೆಂ.ಮೀ.ನಿಂದ 20.44 ಸೆಂ.ಮೀ.)ಯ ಆರೆಂಜ್‌ ಅಲರ್ಟ್‌ ಆಗಿ ಹವಾಮಾನ ಇಲಾಖೆ ಪರಿವರ್ತಿಸಿದೆ. ಭಾನುವಾರ ಬೆಳಗ್ಗೆ 8.30ರವರೆಗೆ ದಕ್ಷಿಣ ಒಳನಾಡಿನ ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗೆ ಆರೆಂಜ್‌ ಅಲರ್ಟ್‌ ನೀಡಲಾಗಿದೆ.  

ಉಳಿದಂತೆ ಬೆಳಗಾವಿ, ಬಾಗಲಕೋಟೆ, ರಾಯಚೂರು, ಬೀದರ್‌, ಧಾರವಾಡ, ಗದಗ, ಕೊಪ್ಪಳ, ಬಳ್ಳಾರಿ, ಚಿತ್ರದುರ್ಗ, ಶಿವಮೊಗ್ಗ, ಕೊಡಗು, ಹಾಸನ, ತುಮಕೂರು, ಚಿಕ್ಕಮಗಳೂರು, ಕೋಲಾರ, ರಾಮನಗರ, ಬೆಂಗಳೂರು ನಗರ ಮತ್ತು ಗ್ರಾಮಾಂತರಕ್ಕೆ ‘ಯೆಲ್ಲೋ ಅಲರ್ಟ್‌’ ಪ್ರಕಟಿಸಲಾಗಿದೆ. ಭಾನುವಾರ ಬೆಳಗ್ಗೆಯಿಂದ ಸೋಮವಾರ ಮುಂಜಾನೆ 8.30ರ ತನಕ ಒಳನಾಡಿನ ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ ಮತ್ತು ಬಳ್ಳಾರಿಗೆ ಆರೆಂಜ್‌ ಅಲರ್ಟ್‌ ಪ್ರಕಟಿಸಲಾಗಿದೆ. ಉಳಿದಂತೆ ಬೆಂಗಳೂರು ನಗರ ಮತ್ತು ಗ್ರಾಮಾಂತರ ಸೇರಿದಂತೆ ಬೀದರ್‌, ಕಲಬುರಗಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಗದಗ, ಧಾರವಾಡ, ಹಾವೇರಿ, ಚಿಕ್ಕಮಗಳೂರು, ಹಾಸನ, ತುಮಕೂರು, ಕೊಡಗು, ಮೈಸೂರು, ಮಂಡ್ಯ ಜಿಲ್ಲೆಗೆ ಯೆಲ್ಲೋ ಅಲರ್ಟ್‌ ಇರಲಿದೆ. 

Bengaluru Rain: ಸಿಲಿಕಾನ್ ಸಿಟಿಯಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆ

ನೈಋುತ್ಯ ಮುಂಗಾರಿನ ಮರುಳುವಿಕೆ ಮತ್ತು ಅರಬ್ಬಿ ಸಮುದ್ರ ಹಾಗೂ ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ಮೇಲ್ಮೈ ಸುಳಿಗಾಳಿಯ ಪ್ರಭಾವದಿಂದ ಮಳೆ ಹೆಚ್ಚಿನ ಪ್ರಮಾಣದಲ್ಲಿ ಸುರಿಯುತ್ತಿದೆ. ಶನಿವಾರ ಬೆಳಗ್ಗೆ 8.30ಕ್ಕೆ ಪೂರ್ಣಗೊಂಡ 24 ಗಂಟೆ ಅವಧಿಯಲ್ಲಿ ಒಳನಾಡಿನಲ್ಲಿ ಭರ್ಜರಿ ಮಳೆಯಾಗಿದ್ದು, ಕರಾವಳಿಯಲ್ಲಿ ಮುಂಗಾರು ದುರ್ಬಲವಾಗಿತ್ತು. ಮಂಡ್ಯದಲ್ಲಿ 17 ಸೆಂ.ಮೀ., ಮಂಡ್ಯ ಕೆವಿಕೆ 15, ಮೈಸೂರಿನ ಟಿ.ನರಸೀಪುರ, ಚಾಮರಾಜನಗರದ ಕೊಳ್ಳೆಗಾಲ ತಲಾ 9, ಬೀದರ್‌ನ ಮಂಠಾಳ, ಕಲಬುರಗಿಯ ಯಡ್ರಾಮಿ, ರಾಮನಗರದ ಕನಕಪುರ, ಕೋಲಾರದ ಮಾಲೂರಿನಲ್ಲಿ 8 ಸೆಂ.ಮೀ ಮಳೆಯಾಗಿದೆ.

ಕರ್ನಾಟಕದಲ್ಲಿ ಇನ್ನೂ 6 ದಿನ ಮಳೆ: ರಾಜ್ಯದಲ್ಲಿ ಮುಂದಿನ ಐದಾರು ದಿನ ಭರ್ಜರಿ ಮಳೆಯಾಗುವ ಸಾಧ್ಯತೆಯಿದೆ. ನೈಋುತ್ಯ ಮುಂಗಾರು ಮಾರುತ ಮರಳುವಿಕೆ, ಅರಬ್ಬಿ ಸಮುದ್ರ, ಉತ್ತರ ಅಂಡಮಾನ್‌ ಸಮುದ್ರ ಭಾಗ ಮತ್ತು ಬಂಗಾಳ ಕೊಲ್ಲಿಯಲ್ಲಿ ನಿರ್ಮಾಣ ಆಗಿರುವ ಮೇಲ್ಮೈ ಸುಳಿಗಾಳಿಗಳು ಮಳೆಯ ಅಬ್ಬರವನ್ನು ಹೆಚ್ಚಿಸಲಿದೆ ಎಂದು ಹವಾಮಾನ ತಜ್ಞರು ಹೇಳುತ್ತಾರೆ. ರಾಜ್ಯದ ಕೆಲವೆಡೆ ತುಂತುರು ಮಳೆ, ಇನ್ನು ಕೆಲವೆಡೆ ಭರ್ಜರಿ ಮಳೆಯ ಸಾಧ್ಯತೆಯಿದ್ದು, ಒಟ್ಟಾರೆ ಮುಂದಿನ ಕೆಲ ದಿನ ರಾಜ್ಯದಲ್ಲಿ ಮಳೆಯ ವಾತಾವರಣ ಇರಲಿದೆ. 

Karnataka Rains: ಮತ್ತೆ ಕರ್ನಾಟಕದ ಹಲವೆಡೆ ಮಳೆಯಬ್ಬರ: 2 ಬಲಿ

ಅಕ್ಟೋಬರ್‌ ಕೊನೆಯ ವಾರದಲ್ಲಿ ಹಿಂಗಾರು ಮಾರುತದಿಂದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಶನಿವಾರ ಬೆಳಗ್ಗೆ 8.30ರವರೆಗೆ ಕಲಬುರಗಿ, ವಿಜಯಪುರ, ಬಾಗಲಕೋಟೆ, ಯಾದಗಿರಿ, ರಾಯಚೂರು, ಕೊಪ್ಪಳ, ಬಾಗಲಕೋಟೆ, ಬೆಳಗಾವಿ, ಉತ್ತರಕನ್ನಡ, ದಾವಣಗೆರೆ, ಚಿಕ್ಕಮಗಳೂರು, ತುಮಕೂರು, ಹಾಸನ, ಬೆಂಗಳೂರು ನಗರ ಮತ್ತು ಗ್ರಾಮಾಂತರ, ರಾಮನಗರ, ಮಂಡ್ಯ, ಚಾಮರಾಜನಗರ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ‘ಯೆಲ್ಲೋ ಅಲರ್ಟ್‌’ ನೀಡಲಾಗಿದೆ. 

click me!