
ಬೆಂಗಳೂರು (ಆ.13) ಬೆಂಗಳೂರಿನ ಹಲವು ಭಾಗದಲ್ಲಿ ಭಾರಿ ಮಳೆಯಾಗಿದೆ. ಸತತವಾಗಿ ಅರ್ಧ ಗಂಟೆ ಕಾಲ ಸುರಿದ ಮಳೆಗೆ ಹಲವು ರಸ್ತೆಗಳು ಜಲಾವೃತಗೊಂಡಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಸಂಜೆಯಾಗುತ್ತಿದ್ದಂತೆ ಸುರಿದ ಮಳೆಯಿಂದ ಬಾರಿ ಟ್ರಾಫಿಕ್ ಜಾಮ್ ಸಮಸ್ಯೆ ಎದುರಾಗಿದೆ. ಇದರ ಬೆನ್ನಲ್ಲೇ ಹವಾಮಾನ ಇಲಾಖೆ ಮಹತ್ವದ ಎಚ್ಚರಿಕೆ ನೀಡಿದೆ. ಮುಂದಿನ ಮೂರು ಗಂಡೆ ಬೆಂಗಳೂರಿನಲ್ಲಿ ಆರೇಂಜ್ ಅಲರ್ಟ್ ನೀಡಲಾಗಿದೆ. ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಎಚ್ಚರಿಸಿದೆ.
ಬೆಂಗಳೂರಿನಲ್ಲಿ ಮುಂದಿನ ಮೂರು ಗಂಟೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಈಗಾಗಲೇ ಭಾರಿ ಮಳೆ ಬೆನ್ನಲ್ಲೇ ಎಚ್ಚರಿಕೆ ನೀಡಲಾಗಿದೆ.
ಯೆಲ್ಲೋ ಅಲರ್ಟ್ ಹಿನ್ನಲೆಯಲ್ಲಿ ನಗರದಲ್ಲಿ ಇಂದು ಸಂಜೆಯಿಂದಲೇ ಮಳೆ ಅಬ್ಬರಿಸಲು ಆರಂಭಿಸಿದೆ. ಮೆಜೆಸ್ಟಿಕ್, ಲಾಲ್ ಬಾಗ್, ಕಾರ್ಪೋರೇಷನ್, ಮಾರ್ಕೆಟ್, ರಾಜಾಜಿನಗರ, ಮಲ್ಲೇಶ್ವರಂ, ಹೆಬ್ಬಾಳ, ಶಿವಾನಂದ ಸರ್ಕಲ್, ರೇಸ್‌ಕೋರ್ಸ್ ರೋಡ್, ಕಾರ್ಪೋರೇಶನ್ ಸೇರಿದಂತೆ ಹಲವೆಡೆ ಭಾರಿ ಮಳೆಯಾಗಿದೆ.
ಈ ವಾರ ಇಡೀ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿದೆ. ಬೆಂಗಳೂರು ನಗರ, ಗ್ರಾಮಾಂತರ ಸೇರಿ ರಾಜ್ಯದ ಎಲ್ಲ ಜಿಲ್ಲೆಗಳಿಗೆ ಮುಂದಿನ ನಾಲ್ಕು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕೆಲೆವೆಡೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಎಚ್ಚರಿಸಿದೆ. ಮಲೆನಾಡು, ಕರಾವಳಿ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದಿದೆ. ರಾಜ್ಯದ ಕೆಲ ಭಾಗದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಕೊಡುಗು ಜಿಲ್ಲೆಯಲ್ಲಿ ಕೆಲ ದಿನಗಳ ಕಾಲ ಬ್ರೇಕ್ ನೀಡಿದ್ದ ಮಳೆರಾಯ ಇದೀಗ ಮತ್ತೆ ಅಬ್ಬರಿಸಲು ಆರಂಭಿಸಿದೆ. ಮಳೆ ಚುರುಗೊಂಡಿರುವ ಕಾರಣ ಮಡಿಕೇರಿ ಮಂಗಳೂರು ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಮಣ್ಣು ಕುಸಿತವಾಗಿದೆ. ಸಣ್ಣ ಪ್ರಮಾಣದಲ್ಲಿ ಹೆದ್ದಾರಿಗೆ ಗುಡ್ಡದ ಮಣ್ಣು ಕುಸಿದು ಬಿದ್ದಿದೆ. ಸದ್ಯ ವಾಹನ ಸಂಚಾರಕ್ಕೆ ಯಾವುದೇ ಸಮಸ್ಯೆಯಾಗಿಲ್ಲ. ಆದರೆ ಮಳೆ ಇದೇ ರೀತಿ ಮುಂದುವರಿದರೆ, ಗುಡ್ಡದ ಮಣ್ಣು ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಜೋಡುಪಾಲ ಬಳಿ ಈ ಕುಸಿತ ಸಂಭವಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ