ಬೆಂಗಳೂರಿನಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, 'ಯಲ್ಲೋ ಅಲರ್ಟ್' ಘೋಷಿಸಲಾಗಿದೆ. ತುಮಕೂರು, ಚಿತ್ರದುರ್ಗ, ದಾವಣಗೆರೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಕೂಡ ಭಾರೀ ಮಳೆಯಾಗುವ ಮುನ್ಸೂಚನೆ ಇದೆ.
ಬೆಂಗಳೂರು (ಆ.21): ಬೆಂಗಳೂರಿನಲ್ಲಿಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ. ಅದಕ್ಕಾಗಿ ಬೆಂಗಳೂರಿನಲ್ಲಿಂದು ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ನಗರದಲ್ಲಿ ಕಳೆದ ಕೆಲ ದಿನದಿಂದ ಸಂಜೆ ವೇಳೆ ಮಳೆಯಾಗುತ್ತಿದೆ. ಇಂದು ಕೂಡ ರಾಜಧಾನಿಯಲ್ಲಿ ಮಳೆಯಾಗೋ ಸಾಧ್ಯತೆ ಇದೆ. ಅದರೊಂದಿಗೆ ತುಮಕೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳಲ್ಲಿ ಇಂದು ಕೂಡ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಇನ್ನು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಗದಗ, ಹಾವೇರಿ, ಬಾಗಲಕೋಟೆ, ಕೊಪ್ಪಳ ರಾಯಚೂರು, ಯಾದಗಿರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ರಾಮನಗರ ಜಿಲ್ಲೆಗಳಲ್ಲೂ ಮಳೆಯಾಗಬಹುದು ಎನ್ನುವ ವರದಿಗಳಿವೆ. ಕೆಲ ಜಿಲ್ಲೆಗಳಲ್ಲಿ ಪ್ರತಿ ಗಂಟೆಗೆ 40-50 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ. ಆ. 25ರಿಂದ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇಂದು, ನಾಳೆ ಕರ್ನಾಟಕದ 14 ಜಿಲ್ಲೆಗಳಲ್ಲಿ ಭಾರೀ ಮಳೆ..!
ಬೆಂಗಳೂರಲ್ಲಿ ಭಾರೀ ಮಳೆ; ಆಟೋ ಮೇಲೆ ಬಿದ್ದ ಬೃಹತ್ ಮರ! ಚಾಲಕ, ಪ್ರಯಾಣಿಕರಿಗೆ ಗಾಯ!