
ಬೆಂಗಳೂರು(ಸೆ.03): ‘ಶಕ್ತಿ ಯೋಜನೆಯಿಂದ ಖಾಸಗಿ ಸಾರಿಗೆ ಉದ್ಯಮಕ್ಕೆ ತೊಂದರೆಯಾಗಿರುವುದು ನಿಜ. ಅವರಿಗೆ ಏನಾದರೂ ಪರಿಹಾರ ಕಂಡು ಹಿಡಿಯಬೇಕು. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರೊಂದಿಗೆ ಮಾತನಾಡುತ್ತೇನೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖಾಸಗಿ ಸಾರಿಗೆ ಒಕ್ಕೂಟಗಳು ಬಂದ್‌ಗೆ ಕರೆ ನೀಡಿರುವ ಬಗ್ಗೆ ಮಾತನಾಡಿದರು.
ಪಾಪ ಖಾಸಗಿ ಸಾರಿಗೆಯವರಿಗೆ ತೊಂದರೆಯಾಗಿರುವುದು ನಿಜ. ಈ ಕುರಿತು ನಮಗೆ ತಿಳಿದಿದೆ. ಶಕ್ತಿ ಯೋಜನೆ ಜಾರಿಯಿಂದ ಖಾಸಗಿ ಬಸ್ಸುಗಳಿಗೆ ಯಾರೂ ಹೋಗುತ್ತಿಲ್ಲ. ಅವರ ಸಮಸ್ಯೆಗೆ ಪರಿಹಾರ ನೀಡಲು ಉಪಾಯ ಹುಡುಕಬೇಕಿದೆ. ಈ ಬಗ್ಗೆ ಮುಖ್ಯಮಂತ್ರಿಗಳ ಮಟ್ಟದಲ್ಲಿ ಚರ್ಚಿಸುತ್ತೇನೆ ಎಂದು ಹೇಳಿದರು.
ರಾಜ್ಯ ಸರ್ಕಾರಕ್ಕೆ ತಲೆನೋವಾದ ಖಾಸಗಿ ಸಾರಿಗೆ ಒಕ್ಕೂಟ; ಸೆಪ್ಟೆಂಬರ್ 11ಕ್ಕೆ ಬೆಂಗಳೂರು ಬಂದ್‌ಗೆ ಕರೆ!
ಇನ್ನು ಕೆಲವು ಜಿಲ್ಲೆಗಳಲ್ಲಿ ಸರ್ಕಾರಿ ಬಸ್ಸುಗಳೇ ಇಲ್ಲ. ಕೇವಲ ಖಾಸಗಿ ಬಸ್ಸುಗಳು ಮಾತ್ರ ಇವೆ. ಅಂತಹ ಕಡೆ ಜನರಿಗೆ ಸಮಸ್ಯೆಯಾಗಬಾರದು. ಜತೆ ಖಾಸಗಿಯವರಿಗೂ ಸಮಸ್ಯೆಯಾಗಬಹುದು. ಆ ರೀತಿ ಏನಾದರೂ ಉಪಾಯ ಮಾಡುತ್ತೇವೆ ಎಂದರು.
ಯಾವ ಶಾಸಕರಿಗೂ ಅಸಮಾಧಾನವಿಲ್ಲ: ಡಿಕೆಶಿ
ಅಧಿಕಾರಿಗಳು ಮಾತು ಕೇಳುತ್ತಿಲ್ಲ ಎಂದು ಹಿರಿಯ ಶಾಸಕ ಬಸವರಾಜ ರಾಯರೆಡ್ಡಿ ಅವರು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಬಗ್ಗೆ ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್, ‘ಯಾವ ಶಾಸಕರಿಗೂ ಅಸಮಾಧಾನ ಇಲ್ಲ. ಆದರೆ ನೋವು ಹೇಳಿಕೊಳ್ಳುವುದರಲ್ಲಿ ತಪ್ಪಿಲ್ಲ’ ಎಂದರು. ಎಲ್ಲಾ ನೀವೇ ಸೃಷ್ಟಿಮಾಡುತ್ತಿದ್ದೀರಿ. ನಮ್ಮ ಶಾಸಕರಲ್ಲಿ ಅಸಮಾಧಾನವಿಲ್ಲ. ನಮ್ಮ ಪಕ್ಷದಲ್ಲಿ ಶಿಸ್ತಿದೆ. ಶಾಸಕರು ತಮ್ಮ ನೋವು ತೋಡಿಕೊಳ್ಳುವುದರಲ್ಲಿ ತಪ್ಪೇನಿದೆ? ಎಂದು ಪ್ರಶ್ನಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ