ಬೆಳಗಾವಿಯ ಸುವರ್ಣಸೌಧದಲ್ಲಿ ಗುರುವಾರ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ಪಂಚಮಸಾಲಿ ಸಮಾಜಕ್ಕೆ 2ಎ ಸೇರಿದಂತೆ ವಿವಿಧ ಸಮುದಾಯಗಳ ಮೀಸಲಾತಿ ಬೇಡಿಕೆಗೆ ಸಂಬಂಧಿಸಿದಂತೆ ನಿರ್ಣಯ ಕೈಗೊಳ್ಳುವ ಸಾಧ್ಯತೆಯಿದೆ.
ಸುವರ್ಣಸೌಧ (ಡಿ.29) :ಬೆಳಗಾವಿಯ ಸುವರ್ಣಸೌಧದಲ್ಲಿ ಗುರುವಾರ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ಪಂಚಮಸಾಲಿ ಸಮಾಜಕ್ಕೆ 2ಎ ಸೇರಿದಂತೆ ವಿವಿಧ ಸಮುದಾಯಗಳ ಮೀಸಲಾತಿ ಬೇಡಿಕೆಗೆ ಸಂಬಂಧಿಸಿದಂತೆ ನಿರ್ಣಯ ಕೈಗೊಳ್ಳುವ ಸಾಧ್ಯತೆಯಿದೆ.
ಚಳಿಗಾಲದ ಅಧಿವೇಶನ(Winter session)ದ ಕೊನೆಯ ದಿನವಾದ ಗುರುವಾರ ಸಂಜೆ 5 ಗಂಟೆಗೆ ಸಚಿವ ಸಂಪುಟ ಸಭೆ ನಡೆಯಲಿದೆ. ಈ ವೇಳೆ ಕಳೆದ ವಾರ ಹಿಂದುಳಿದ ವರ್ಗಗಳ ಆಯೋಗ(Backward Classes Commission)ದ ಅಧ್ಯಕ್ಷ ಜಯಪ್ರಕಾಶ ಹೆಗ್ಡೆ ಅವರು ಸರ್ಕಾರಕ್ಕೆ ಸಲ್ಲಿಸಿರುವ ಮಧ್ಯಂತರ ವರದಿಯನ್ನು ಅಂಗೀಕರಿಸುವ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ.
undefined
ಪಂಚಮಸಾಲಿ ಸಮುದಾಯ(Panchamasali community)ವು 2ಎ ಮೀಸಲಾತಿ(reservation)ಗೆ ಆಗ್ರಹಿಸಿ ಹೋರಾಟ ನಡೆಸುತ್ತಿದ್ದು, ಸರ್ಕಾರಕ್ಕೆ ಗಡುವನ್ನು ನೀಡಿದೆ. ಅದು ಡಿ.29ಕ್ಕೆ ಮುಗಿಯಲಿದೆ. ಇದರೊಂದಿಗೆ ಒಕ್ಕಲಿಗ ಸಮುದಾಯವೂ ಮೀಸಲಾತಿ ಕುರಿತಂತೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದೆ. ಈ ಸಂಬಂಧಪಟ್ಟಂತೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಗೆ ಬರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಇದರಿಂದಾಗಿ ಈ ಸಚಿವ ಸಂಪುಟ ಸಭೆಯು ಮಹತ್ವ ಪಡೆದಿದೆ.
ಪಂಚಮಸಾಲಿ ಅಹೋರಾತ್ರಿ ಧರಣಿ ವಾಪಸ್: ತಾತ್ಕಾಲಿಕವಾಗಿ ಹಿಂತೆಗೆತ