ತೆರಿಗೆ ವಂಚನೆ ಮಾಡುವವರ ಮೇಲೆ ಐಟಿ ದಾಳಿಯಾಗಲಿ. ಬಿಜೆಪಿಯವರ ಮನೆ ಮೇಲೆ ಯಾಕೆ ದಾಳಿ ಆಗೋದಿಲ್ಲ? ಎಂದು ಸಚಿವ ಶಿವರಾಜ ತಂಗಡಗಿ ಕಿಡಿಕಾರಿದ್ದಾರೆ.
ಕೊಪ್ಪಳ (ಅ.13): ರಾಜ್ಯದಲ್ಲಿ ಮಾತ್ರವಲ್ಲ ಇಡೀ ದೇಶದಲ್ಲಿ ಕಾಂಗ್ರೆಸ್ ನಾಯಕರ ಮನೆಗಳ ಮೇಲೆ ಮಾತ್ರ ಐಟಿ ದಾಳಿ ಮಾಡಲಾಗುತ್ತದೆ. ಆದರೆ, ಈಗ 42 ಕೋಟಿ ಸಿಕ್ಕಿರೋದನ್ನು ನಾನು ಸಮರ್ಥಿಸಿಕೊಳ್ಳುವುದಿಲ್ಲ. ತೆರಿಗೆ ವಂಚನೆ ಮಾಡುವವರ ಮೇಲೆ ಐಟಿ ದಾಳಿಯಾಗಲಿ. ಬಿಜೆಪಿಯವರ ಮನೆ ಮೇಲೆ ಯಾಕೆ ದಾಳಿ ಆಗೋದಿಲ್ಲ? ಬಿಜೆಪಿಯವರಿಗೆ ಜನರು ತಕ್ಕ ಪಾಠ ಕಲಿಸುತ್ತಾರೆ ಎಂದು ಸಚಿವ ಶಿವರಾಜ ತಂಗಡಗಿ ಕಿಡಿಕಾರಿದ್ದಾರೆ.
ಈ ಕುರಿತು ಕೊಪ್ಪಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರಿಗೆ ಐಟಿ, ಇಡಿ, ಸಿಬಿಐ ಬಿಟ್ರೆ ಬೇರೇನೂ ಇಲ್ಲ. ಬಿಜೆಪಿ ನಾಯಕರ ಮನೆ ಮೇಲೆ ದಾಳಿ ಆಗೋದಿಲ್ಲ. ಬಿಜೆಪಿಯವರ ಮನೆಯಲ್ಲಿ ಏನೂ ಇಲ್ಲವಾ? ಹಿಂದಿನ ಸರಕಾರದಲ್ಲಿ ಏನೇನು ತಿಂದಿದ್ದಾರೆ ಅನ್ನೋದು ಜನರಿಗೆ ಗೊತ್ತಿದೆ. ದೆಹಲಿಯಲ್ಲಿ ಎಎಪಿ, ಕರ್ನಾಟಕದಲ್ಲಿ ಕಾಂಗ್ರೆಸ್, ಆಂಧ್ರದಲ್ಲಿ ಅವರಿಗೆ ಚಂದ್ರಬಾಬು ನಾಯಕರು ಕಾಣುತ್ತಾರೆ. ಎಟಿಎಂ ಸರಕಾರ ಅನ್ನೋದಕ್ಕೆ ಬಿಜೆಪಿಯವರು ಪ್ರೂಫ್ ನೀಡಲಿ. ತಪ್ಪಿದ್ದರೆ ಹೇಳಲಿ ತಿದ್ದಿಕೊಳ್ಳುತ್ತೇವೆ ಎಂದು ಹೇಳಿದರು.
undefined
ಕಾವೇರಿ ನೀರು ನಿರ್ವಹಣೆ ಪ್ರಾಧಿಕಾರದಿಂದಲೂ ಕರ್ನಾಟಕಕ್ಕೆ ಶಾಕ್: 3,000 ಕ್ಯೂಸೆಕ್ ನೀರು ಹರಿಸಲು ಆದೇಶ
ರಾಜ್ಯದಲ್ಲಿ ಐಟಿ ದಾಳಿಯಿಂದ 42 ಕೋಟಿ ಸಿಕ್ಕಿರೋದನ್ನು ನಾನು ಸಮರ್ಥಿಸಿಕೊಳ್ಳುವುದಿಲ್ಲ. ಟ್ಯಾಕ್ಸ್ ವಂಚನೆ ಮಾಡುವವರ ಮೇಲೆ ಐಟಿ ದಾಳಿಯಾಗಲಿ. ಬಿಜೆಪಿಯವರ ಮನೆ ಮೇಲೆ ಯಾಕೆ ದಾಳಿ ಆಗೋದಿಲ್ಲ? ಬಿಜೆಪಿಯವರಿಗೆ ಜನರು ತಕ್ಕ ಪಾಠ ಕಲಿಸುತ್ತಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರೂ ಸಮಾನರು. ವಿದ್ಯುತ್ ಅಭಾವವಿದೆ. ಹೀಗಾಗಿ ಲೋಡ್ ಶೆಡ್ಡಿಂಗ್ ಇದೆ. ಜಿಲ್ಲೆಯಲ್ಲಿ ಅಕ್ರಮ ಮರಳು ದಂಧೆ ಮಟ್ಕಾ, ಇಸ್ಪೀಟ್ ಆಟವನ್ನು ಬಂದ್ ಮಾಡಿದ್ದೇವೆ. ನಿಗಮ ಮಂಡಳಿಗಳಿಗೆ ಆದಷ್ಟು ಬೇಗ ನೇಮಕ ಮಾಡಲಾಗುತ್ತದೆ ಎಂದು ಸಚಿವ ಶಿವರಾಜ ತಂಗಡಗಿ ತಿಳಿಸಿದರು.
ಕಾಂಗ್ರೆಸ್ ಟೀಕಿಸಿದ ಸಿ.ಟಿ. ರವಿ: ಐಟಿ ದಾಳಿಯ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಮಾಜಿ ಶಾಸಕ ಸಿ.ಟಿ. ರವಿಉ ಅವರು, "ಹಿಂದಿನ ಬಿಜೆಪಿ ಸರಕಾರದ ಮೇಲೆ ಶೇ.40% ಸರಕಾರ ಎಂದು ಸುಳ್ಳು ಆರೋಪ ಮಾಡಿದ, ಕಾಂಗ್ರೆಸ್ಸಿನ ಹಿರಿಯ ನಾಯಕರ ಆಪ್ತ, ಬಿಬಿಎಂಪಿ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಹಾಗೂ ಆತನ ಪತ್ನಿ ಕಾಂಗ್ರೆಸ್ಸಿನ ಮಾಜಿ ಕಾರ್ಪೊರೇಟರ್ ದಂಪತಿಯ ಮನೆಯಲ್ಲಿ ಐಟಿ ಅಧಿಕಾರಿಗಳು ವಶಪಡಿಸಿಕೊಂಡ 42 ಕೋಟಿ ರೂಪಾಯಿ ನಗದು ಯಾರಿಗೆ ಸೇರಿದ್ದು ಸನ್ಮಾನ್ಯ ಉಪಮುಖ್ಯಮಂತ್ರಿಗಳಾದ ಡಿ ಕೆ ಶಿವಕುಮಾರ್ ಅವರೆ? ಮೊನ್ನೆಯ ಪಾಲಿಕೆಯಲ್ಲಿ ₹600 ಕೋಟಿ ಬಾಕಿ ಹಣ ಬಿಡುಗಡೆಯಾಗಿತ್ತು. ಇದು ಅದರ ಕಮಿಷನ್ ಹಣದ ಬಾಬ್ತು ಎಂದು ಅನೇಕ ಗುತ್ತಿಗೆದಾರರು ಹೇಳುತ್ತಿದ್ದಾರೆ ನಿಜವೇ ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯನವರೇ?" ಎಂದು ಪೋಸ್ಟ್ ಮಾಡಿಕೊಂಡಿದ್ದಾರೆ.
IT Raid: ಅಂಬಿಕಾ ಮನೆಯಲ್ಲಿ ಸಿಕ್ಕ 42 ಕೋಟಿ ರೂ. ಮೂಲವನ್ನು ಬಹಿರಂಗಡಿಸಿದ ಶಾಸಕ ಯತ್ನಾಳ್!
ಪಂಚ ರಾಜ್ಯಗಳ ಚುನಾವಣಾ ಸಂದರ್ಭದಲ್ಲಿ ಯಾವ ಯಾವ ರಾಜ್ಯದ ಚುನಾವಣೆಗೆ ನಮ್ಮ ಕರ್ನಾಟಕವನ್ನು ATM ಮಾಡಿಕೊಂಡಿದ್ದೀರಿ ಕಾಂಗ್ರೆಸ್ಸಿಗರೇ? ಗ್ಯಾರೆಂಟಿ ಎಂಬ ಸುಳ್ಳು ಆಮಿಷ ಒಡ್ಡಿ ಅಧಿಕಾರಕ್ಕೆ ಬಂದ ನೀವು ರಾಜ್ಯವನ್ನು ಇನ್ನೆಷ್ಟು ಲೂಟಿ ಮಾಡಲು ಯೋಜನೆ ಹಾಕಿಕೊಂಡಿದ್ದೀರಿ? ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಟೀಕೆ ಮಾಡಿದ್ದಾರೆ.