
ಬೆಂಗಳೂರು (ಜ.19) : ಬ್ರಾಹ್ಮಣ ಸಮುದಾಯದಲ್ಲಿ ವಿವಾಹ ವಿಚ್ಛೇದನ ಸಮಸ್ಯೆ ಹೆಚ್ಚಾಗಿದೆ. ವಿಪ್ರ ಸಮುದಾಯ ಹಿಂದೆಂದಿಗಿಂತಲೂ ಹೆಚ್ಚಿನ ಸಮಸ್ಯೆಯಲ್ಲಿ ಸಿಲುಕಿದೆ ಎಂದು ಸೋಂದಾ ಸ್ವರ್ಣವಲ್ಲೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಕಳವಳ ವ್ಯಕ್ತಪಡಿಸಿದರು.
ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದಿಂದ ಅರಮನೆ ಮೈದಾನದಲ್ಲಿ ಭಾರತೀತೀರ್ಥ ಸಭಾಂಗಣದಲ್ಲಿ ಶನಿವಾರ ನಡೆದ ‘ಬ್ರಾಹ್ಮಣ ಮಹಾ ಸಮ್ಮೇಳನ ಸುವರ್ಣ ಸಂಭ್ರಮ’ ಸಮಾರಂಭದಲ್ಲಿ ಮಾತನಾಡಿದ ಅವರು, ಬ್ರಾಹ್ಮಣರಲ್ಲಿ ವೈವಾಹಿಕ ಸಂಬಂಧಿತ ತೊಂದರೆಗಳು ವಿಪರೀತವಾಗಿವೆ. ವಿವಾಹ ನಿಶ್ಚಯ, ದಾಂಪತ್ಯ ಜೀವನ, ವಿಚ್ಛೇದನಗಳು ಹೆಚ್ಚಾಗಿವೆ. ಇದು ಸಂಸ್ಕಾರವಂತ, ಬುದ್ಧಿವಂತ ಸಮುದಾಯದ ಲಕ್ಷಣವೇ?. ಹೀಗಾಗಿ ವಿವಾಹ ಸಮಸ್ಯೆಗಳನ್ನು ಸರಿಪಡಿಸುವ ಅಗತ್ಯವಿದೆ ಎಂದರು.
ಸ್ವರ್ಣವಲ್ಲೀ ಮಹಾಸಂಸ್ಥಾನದಲ್ಲಿ ಶಿಷ್ಯ ಸ್ವೀಕಾರ ಮಹೋತ್ಸವ: ಸ್ವರ್ಣವಲ್ಲಿ ನೂತನ ಯತಿಗಳಿಗೆ ಸನ್ಯಾಸ ದೀಕ್ಷೆ
ಇವುಗಳ ಪರಿಹಾರ ದೃಷ್ಟಿಯಿಂದ ಹೆಣ್ಣುಮಕ್ಕಳಿಗೆ ದಶಹೋಮ, ಕನ್ಯಾಸಂಸ್ಕಾರ, ಮಾರ್ಗದರ್ಶಕ ಶಿಬಿರ ನೀಡಿ ಅವರು ಬದುಕಿನಲ್ಲಿ ಧರ್ಮವನ್ನು ಅನುಸರಿಸಿಕೊಂಡು ಹೋಗಬೇಕು. ದಂಪತಿ ಶಿಬಿರದ ಮೂಲಕ ವಿಚ್ಛೇದನ ತಡೆಯುವ ಕೆಲಸ ವ್ಯಾಪಕವಾಗಬೇಕು. ಈ ನಿಟ್ಟಿನಲ್ಲಿ ಬ್ರಾಹ್ಮಣ ಮಹಾಸಭಾ ಕೆಲಸ ಮಾಡಿ ಬ್ರಾಹ್ಮಣ ಸಮುದಾಯವನ್ನು ಉಳಿಸುವ ಕೆಲಸ ಮಾಡಬೇಕು ಎಂದು ಹೇಳಿದರು.
ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಮಾತನಾಡಿ, ಬ್ರಾಹ್ಮಣ ಸಮಾಜ ಎಲ್ಲರನ್ನು ಒಗ್ಗೂಡಿಸಿಕೊಂಡು ಮುನ್ನಡೆಯುತ್ತಿದೆ. ಇದುವೇ ಬ್ರಾಹ್ಮಣ್ಯದ ಸಂಕೇತ. ವೇದ, ಉಪನಿಷತ್ತು, ಭಾಗವತದ ಪ್ರಾರ್ಥನೆ ಜೊತೆಗೆ ಅದಕ್ಕೆ ತಕ್ಕಂತೆ ನಡೆದುಕೊಳ್ಳಬೇಕು. ಸಮಾಜದ ಎಲ್ಲರ ಹಿತಕ್ಕಾಗಿ ಕಷ್ಟಪಡುವುದೇ ತಪಸ್ಸು. ಸ್ವಾರ್ಥಕ್ಕಾಗಿ ಪ್ರಯತ್ನ ಮಾಡುವುದು ತಾಪತ್ರಯ. ಹೀಗಾಗಿ, ಸಮಾಜದ ಎಲ್ಲರ ಒಳಿತಿಗಾಗಿ ತಪಸ್ಸು ಮಾಡಬೇಕು ಎಂದು ಕರೆ ನೀಡಿದರು.
ಬೇರೆಯವರ ಅನುಕರಣೆಯಿಂದ ಬ್ರಾಹ್ಮಣರು ತಮ್ಮತನ ಕಳೆದುಕೊಳ್ಳುತ್ತಿದ್ದಾರೆ: ಸ್ವರ್ಣವಲ್ಲಿ ಶ್ರೀಗಳು ಕಳವಳ
ಶಾಸಕರಾದ ಶ್ರೀವತ್ಸ, ರವಿಸುಬ್ರಹ್ಮಣ್ಯ, ರಾಮಮೂರ್ತಿ, ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಅಶೋಕ ಹಾರನಹಳ್ಳಿ ಸೇರಿದಂತೆ ಇನ್ನಿತರ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ