
ಕುಂದಾಪುರ (ಜೂ.15): ಅನ್ಯ ರಾಜ್ಯಗಳಲ್ಲಿನ ವಿವರ ಪಡೆದು ಪೊಲೀಸ್ ಕಾನ್‌ಸ್ಟೆಬಲ್ ಅಭ್ಯರ್ಥಿಗಳ ವಯೋಮಿತಿ 33 ವರ್ಷಕ್ಕೆ ಏರಿಕೆ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹಸಚಿವ ಡಾ.ಪರಮೇಶ್ವರ್ ಹೇಳಿದರು.
ಅವರು ಶನಿವಾರ ಕೋಟ ಪೊಲೀಸ್ ಠಾಣೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಸಿಬ್ಬಂದಿ ಕೊರತೆ ಕುರಿತು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು.
ಇದನ್ನೂ ಓದಿ: ತ್ಯಾಗದ ಬಗ್ಗೆ ಮಾತಾಡಿದ್ದ ಡಿಕೆಶಿಗೆ ಪರಂ ಕೌಂಟರ್ | Parameshwar on DK | Political Updates | Suvarna
ಪ್ರತಿಯೊಂದು ಠಾಣೆಗಳಲ್ಲಿ ಸಿಬ್ಬಂದಿ ಕೊರತೆ ಇದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.
ಎಲ್ಲ ಜಾತಿ, ಸಮುದಾಯದ ಸಣ್ಣ, ದೊಡ್ಡ ಪ್ರಾರ್ಥನಾ ಮಂದಿರಗಳಿಗೆ ರಾತ್ರಿ ಬೆಳಕಿನ ಸೌಲಭ್ಯ ಹಾಗೂ ಸಿಸಿಟಿವಿ ಅಳವಡಿಸಿ, ಅದರ ಮಾಹಿತಿ ಪ್ರತಿದಿನ ಠಾಣಾ ವ್ಯಾಪ್ತಿಯಲ್ಲಿ ಬರುವಂತೆಯೂ ಗೃಹಸಚಿವರು ಸಲಹೆ ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ