Independence Day in Bengaluru: 77ನೇ ಸ್ವಾತಂತ್ರ್ಯ ದಿನಾಚರಣೆಗೆ ಸಕಲ ಸಿದ್ಧತೆ

By Kannadaprabha NewsFirst Published Aug 14, 2023, 6:28 AM IST
Highlights

ನಗರದ ಮಾಣೆಕ್‌ ಷಾ ಪರೇಡ್‌ ಮೈದಾನದಲ್ಲಿ ನಡೆಯಲಿರುವ ರಾಜ್ಯ ಮಟ್ಟದ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಭಾರೀ ಪೊಲೀಸ್‌ ಬಂದೋಬಸ್‌್ತ ವ್ಯವಸ್ಥೆ ನಡುವೆ ಅದ್ಧೂರಿಯಾಗಿ ಆಚರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದ್ದು, 12 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆ ಇದೆ.

ಬೆಂಗಳೂರು (ಆ.15) :  ನಗರದ ಮಾಣೆಕ್‌ ಷಾ ಪರೇಡ್‌ ಮೈದಾನ(Manekshaw Parade Ground)ದಲ್ಲಿ ನಡೆಯಲಿರುವ ರಾಜ್ಯ ಮಟ್ಟದ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಭಾರೀ ಪೊಲೀಸ್‌ ಬಂದೋಬಸ್‌್ತ ವ್ಯವಸ್ಥೆ ನಡುವೆ ಅದ್ಧೂರಿಯಾಗಿ ಆಚರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದ್ದು, 12 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆ ಇದೆ.

ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌(Tushar girinatah IAS), ಆಗಸ್ಟ್‌ 15ರ ಬೆಳಗ್ಗೆ 9ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಧ್ವಜಾರೋಹಣ ನೆರವೇರಿಸಲಿದ್ದಾರೆ. ಬಳಿಕ ತೆರೆದ ಜೀಪಿನಲ್ಲಿ ಪೆರೇಡ್‌ ಪರಿವೀಕ್ಷಣೆ ಮತ್ತು ಗೌರವ ರಕ್ಷೆ ಸ್ವೀಕರಿಸಿ ನಾಡಿನ ಜನತೆಗೆ ಸಂದೇಶ ನೀಡಲಿದ್ದಾರೆ ಎಂದು ತಿಳಿಸಿದರು.

Latest Videos

Independence Day: ಬಿಜೆಪಿಯಿಂದ ದೇಶ ವಿಭಜನೆ ಕತೆ ಹೇಳುವ ಕಾರ‍್ಯಕ್ರಮ ಆಯೋಜನೆ

ಕೆಎಸ್‌ಆರ್‌ಪಿ, ಸಿಆರ್‌ಪಿಎಫ್‌, ಬಿಎಸ್‌ಎಫ್‌ ಸೇರಿದಂತೆ ವಿವಿಧ ರಕ್ಷಣಾ ಪಡೆಗಳ 38 ತುಕಡಿಗಳಲ್ಲಿ 1,350 ಮಂದಿ ಪಥ ಸಂಚಲನ ನಡೆಸಿಕೊಡಲಿದ್ದಾರೆ. 1,450 ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಬೆಳಗಾವಿಯ ಬೈಲಹೊಂಗಲದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ 50 ವಿದ್ಯಾರ್ಥಿಗಳು ‘ರೋಪ್‌ ಸ್ಕಿಪಿಂಗ್‌’ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ ಎಂದು ತಿಳಿಸಿದರು.

ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ದಯಾನಂದ್‌ ಮಾತನಾಡಿ, ನಾಲ್ಕರಿಂದ ಐದು ಸಾವಿರ ಗಣ್ಯರು, ಸಾರ್ವಜನಿಕರಿಗೆ ಸೇರಿದಂತೆ ಒಟ್ಟು 12 ಸಾವಿರ ಜನರು ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಬೆಂಗಳೂರು ನಗರದ ಪೊಲೀಸ್‌ ಆಯುಕ್ತ ಬಿ.ದಯಾನಂದ್‌(Bangalore City Police Commissioner B. Dayanand) ಮಾತನಾಡಿ, ಬಂದೋಬಸ್‌್ತಗಾಗಿ 9 ಡಿಸಿಪಿ, 10 ಕೆಎಸ್‌ಆರ್‌ಪಿ ತುಕಡಿ, ಅಧಿಕಾರಿಗಳು ಸೇರಿದಂತೆ ಒಟ್ಟು 1,786 ಪೊಲೀಸ್‌ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಮೈದಾನದ ಸುತ್ತ ಭದ್ರತೆ ಮತ್ತು ಸುರಕ್ಷತೆಗಾಗಿ 100 ಸಿಸಿ ಕ್ಯಾಮೆರಾ ವ್ಯವಸ್ಥೆ, ಅತ್ಯಾಧುನಿಕ ಮೆಟಲ್‌ ಡಿಟೆಕ್ಟರ್‌ ಡೋರ್‌ ಅಳವಡಿಸಲಾಗಿದೆ ಎಂದು ತಿಳಿಸಿದರು.

ಗೋವಾ ಪೊಲೀಸ್‌ ತಂಡ ಭಾಗಿ:

ಈ ಬಾರಿ ವಿಶೇಷವಾಗಿ ಸ್ವಾತಂತ್ರ್ಯ ದಿನಾಚರಣೆಯ ಪಥ ಸಂಚಲನದಲ್ಲಿ ಗೋವಾ ಪೊಲೀಸ್‌ ತಂಡ, ರಾಷ್ಟ್ರೀಯ ಮಿಲಿಟರಿ ಸ್ಕೂಲ್‌ನ ಒಂದು ತಂಡ ಹಾಗೂ ಆರ್ಮಿ ಪಬ್ಲಿಕ್‌ ಸ್ಕೂಲ್‌ನ ಎರಡು ತಂಡಗಳು ಭಾಗವಹಿಸುತ್ತಿವೆ.

ಸಾರ್ವಜನಿಕರಿಗೆ ಸೂಚನೆಗಳು

  • *ಬೆಳಗ್ಗೆ 8.30ರ ಒಳಗಾಗಿ ಆಸೀನರಾಗಬೇಕು.
  • *ಮಣಿಪಾಲ್‌ ಸೆಂಟರ್‌ ಕಡೆಯಿಂದ ಕಬ್ಬನ್‌ ರಸ್ತೆಯಲ್ಲಿ ಆಗಮಿಸಿ ಗೇಟ್‌ 4ರ ಮೂಲಕ ಪ್ರವೇಶ.
  • *ಮೊಬೈಲ…, ಹೆಲ್ಮೆಟ್‌, ಕ್ಯಾಮೆರಾ, ರೇಡಿಯೋ, ಕೊಡೆ ತರುವಂತಿಲ್ಲ.
  • *ಸೆಲ್ಫಿ ತೆಗೆಯುವಂತಿಲ್ಲ.

ನಿಷೇಧಿಸಲಾದ ವಸ್ತುಗಳು

ಸಿಗರೆಟ್‌, ಬೆಂಕಿ ಪಟ್ಟಿಗೆ, ಕರಪತ್ರಗಳು, ಚಾಕು-ಚೂರಿ, ಹರಿತವಾದ ವಸ್ತುಗಳು, ತಿಂಡಿ, ತಿನಿಸು, ಮದ್ಯದ ಬಾಟಲಿ, ಮಾದಕ ವಸ್ತು, ಬಣ್ಣದ ದ್ರವ, ನೀರಿನ ಬಾಟಲಿ ಹಾಗೂ ಕ್ಯಾನ್‌ಗಳು.

ವಾಹನ ನಿಲುಗಡೆ ನಿಷೇಧ

*ಸೆಂಟ್ರಲ್‌ ಸ್ಟ್ರೀಟ್‌- ಅನಿಲ್‌ಕುಂಬ್ಳೆ ವೃತ್ತದಿಂದ ಶಿವಾಜಿನಗರ ಬಸ್‌ ನಿಲ್ದಾಣವರೆಗೆ

*ಕಬ್ಬನ್‌ ರಸ್ತೆ-ಸಿಟಿಓ ವೃತ್ತದಿಂದ ಕೆಆರ್‌ರಸ್ತೆ ಮತ್ತು ಕಬ್ಬನ್‌ ರಸ್ತೆ ಜಂಕ್ಷನ್‌ವರೆಗೆ

*ಎಂಜಿ ರಸ್ತೆ- ಅನಿಲ್‌ಕುಂಬ್ಳೆ ವೃತ್ತದಿಂದ ಕ್ವೀನ್ಸ್‌ ವೃತ್ತದವರೆಗೆ

ಸಂಚಾರ ನಿರ್ಬಂಧ

*ಕಬ್ಬನ್‌ ರಸ್ತೆ-ಬಿಆರ್‌ವಿ ಜಂಕ್ಷನ್‌ - ಕಾಮರಾಜ ರಸ್ತೆ ಜಂಕ್ಷನ್‌ ಎರಡೂ ಬದಿ

*ಮಣಿಪಾಲ್‌ ಸೆಂಟರ್‌ ಜಂಕ್ಷನ್‌ನಿಂದ ಬಿಆರ್‌ವಿ ಜಂಕ್ಷನ್‌ ಕಡೆ ವಾಹನಗಳ ಸಂಚಾರ ನಿರ್ಬಂಧ

ಪರ್ಯಾಯ ಸಂಚಾರ ವ್ಯವಸ್ಥೆ

*ಇನ್‌ ಫೆಂಟ್ರಿ ರಸ್ತೆಯಿಂದ ಮಣಿಪಾಲ್‌ ಸೆಂಟರ್‌ ಕಡೆ ಸಂಚರಿಸುವ ವಾಹನಗಳು ನೇರವಾಗಿ ಇನ್‌ಫೆಂಟ್ರಿ ರಸ್ತೆ-ಸಫೀನಾ ಪ್ಲಾಜಾ ಬಳಿ ಎಡ ತಿರುವು ಪಡೆದು ಮೈನ್‌ ಗಾರ್ಡ್‌ ರಸ್ತೆ ಮೂಲಕ ಡಿಕನ್ಸನ್‌ ರಸ್ತೆ ಜಂಕ್ಷನ್‌ ಮೂಲಕ ಕಾಮರಾಜ ರಸ್ತೆ ಜಂಕ್ಷನ್‌ನಲ್ಲಿ ಎಡಕ್ಕೆ ತಿರುವು ಪಡೆ ಮಣಿಪಾಲ್‌ ಸೆಂಟರ್‌ ಕಡೆಗೆ ಸಾಗುವುದು.

*ಮಣಿಪಾಲ… ಸೆಂಟರ್‌ ಜಂಕ್ಷನ್‌ನಿಂದ ಬಿಆರ್‌ವಿ ಜಂಕ್ಷನ್‌ ಕಡೆ ವಾಹನಗಳು, ವೆಬ್ಸ್‌ ಜಂಕ್ಷನ್‌ ಬಳಿ ಬಲ ತಿರುವು ಪಡೆದು ಎಂಜಿ ರಸ್ತೆ ಮೂಲಕ ಮೆಯೋಹಾಲ್‌, ಕಾವೇರಿ ಎಂಪೋರಿಯಂ, ಅನಿಲ್‌ಕುಂಬ್ಳೆ ವೃತ್ತದಲ್ಲಿ ಬಲ ತಿರುವು ಪಡೆದು ಸಾಗುವುದು.

ಹುಬ್ಬಳ್ಳಿ: ಖಾದಿ ನೆಲದಲ್ಲಿ ಪಾಲಿಸ್ಟರ್‌ ರಾಷ್ಟ್ರಧ್ವಜ ಮಾರಾಟದ ಅಬ್ಬರ..!

ಹರ್‌ ಘರ್‌ ತ್ರಿರಂಗ

ನಗರದಲ್ಲಿ ಆ.13 ರಿಂದ ಮೂರು ದಿನ ಹರ್‌ ಘರ್‌ ತ್ರಿರಂಗ ಅಭಿಯಾನದಡಿ ರಾಷ್ಟ್ರ ಧ್ವಜ ಹಾರಾಟಕ್ಕೆ ಅವಕಾಶ ನೀಡಲಾಗಿದ್ದು, ಸಾರ್ವಜನಿಕರು ಮನೆ, ಕಟ್ಟಡ, ಕಚೇರಿಗಳ ಮೇಲೆ ಧ್ವಜ ಹಾರಾಟ ಮಾಡಬಹುದು.ಅಭಿಯಾನದಡಿ ಸರ್ಕಾರ ಬಿಬಿಎಂಪಿಗೆ ನೀಡಿರುವ 2 ಲಕ್ಷ ಧ್ವಜಗಳನ್ನು ಸಾರ್ವಜನಿಕರಿಗೆ ವಿತರಿಸಲಾಗುವುದು ಎಂದು ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ತಿಳಿಸಿದರು.

ಚಾಮರಾಜಪೇಟೆ ಮೈದಾನದಲ್ಲಿ ಸರ್ಕಾರದಿಂದ ಧ್ವಜಾರೋಹಣ

ಚಾಮರಾಜಪೇಟೆಯ ಆಟದ ಮೈದಾನದಲ್ಲಿ ರಾಜ್ಯ ಸರ್ಕಾರದಿಂದಲೇ ಧ್ವಜಾರೋಹಣ ಕಾರ್ಯಕ್ರಮ ನಡೆಸಲು ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ದಯಾನಂದ ತಿಳಿಸಿದರು.

‘ನನ್ನ ಮಣ್ಣು ನನ್ನ ದೇಶ’ ಅಭಿಯಾನ

ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ‘ನನ್ನ ಮಣ್ಣು ನನ್ನ ದೇಶ’ ಅಭಿಯಾನವನ್ನು ನಗರದ 28 ವಿಧಾನಸಭಾ ಕ್ಷೇತ್ರದಲ್ಲಿ ಆ.15 ರಂದು ನಡೆಸಲಾಗುವುದು. ಕೆರೆ ಅಥವಾ ಉದ್ಯಾನ ವನದಲ್ಲಿ ಶಿಲಾಫಲಕ ಸ್ಥಾಪಿಸಬೇಕು. ಫಲಕದಲ್ಲಿ ಪ್ರಧಾನಿ, ಮುಖ್ಯಮಂತ್ರಿ ಹಾಗೂ ಬಸವಣ್ಣನವರ ಘೋಷವಾಕ್ಯ, ವಿಧಾನಸಭಾ ಕ್ಷೇತ್ರದ ವೀರ ಯೋಧರ ಹೆಸರುಗಳನ್ನು ಫಲಕದಲ್ಲಿ ಹಾಕಬೇಕು. ಮಣ್ಣನ್ನು ಕೈಯಲ್ಲಿ ಹಿಡಿದು ಪಂಚಪ್ರಾಣ ಶಪಥ, ವಸುದಾ ವಂದನ್‌ ಸೇರಿದಂತೆ ವಿವಿಧ ಕಾರ್ಯಕ್ರಮ ಆಯೋಜನೆಗೆ ಸೂಚನೆ ನೀಡಲಾಗಿದೆ.

click me!