
ಉಡುಪಿ (ಆ.15): ದೇಶಾದ್ಯಂತ 78ನೇ ಸ್ವಾತಂತ್ರೋತ್ಸವದ ಸಂಭ್ರಮಾಚರಣೆ ನಡೆಯುತ್ತಿದೆ. ಗೃಹಲಕ್ಷ್ಮೀ ಯೋಜನೆಯಿಂದಾಗ ರಾಜ್ಯದಲ್ಲಿ ಮಹಿಳೆಯರು ಆರ್ಥಿಕ ಸ್ವಾವಲಂಬನೆ ಸಾಧಿಸಿದ್ದಾರೆ. ಸುಮಾರು ಒಂದು ಕೋಟಿ ಇಪ್ಪತ್ತು ಲಕ್ಷಕ್ಕೂ ಅಧಿಕ ಮಹಿಳೆಯರು ಯೋಜನೆಯ ಲಾಭ ಪಡೆದುಕೊಂಡಿದ್ದಾರೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.
ಇಂದು ಉಡುಪಿ ನಗರದ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 78ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಧ್ವಜಾರೋಹಣ ಬಳಿಕ ಮಾತನಾಡಿದ ಸಚಿವರು, ಉಡುಪಿ ಜಿಲ್ಲೆಯೊಂದರಲ್ಲೇ 2.20 ಲಕ್ಷ ಅಧಿಕ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಲಾಭ ಪಡೆದುಕೊಂಡಿದ್ದಾರೆ. ಕೆಲವು ತಾಂತ್ರಿಕ ದೋಷದಿಂದ ಜೂನ್ ಹಾಗೂ ಜುಲೈ ತಿಂಗಳ ಹಣ ಜಮೆಯಾಗಿಲ್ಲ. ಕಳೆದ ಗುರುವಾರದಿಂದ ಯೋಜನೆಯ ಹಣ ಮಹಿಳೆಯರ ಖಾತೆಗೆ ಜಮಾ ಮಾಡಲಾಗುತ್ತಿದೆ ಎಂದರು.
ಇಂದು ಭಾರತದ 78ನೇ ಸ್ವಾತಂತ್ರ್ಯ ದಿನ ಸಂಭ್ರಮ : 11ನೇ ಸಲ ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ
ರಾಜ್ಯದ್ದೇ ಪ್ರತ್ಯೇಕ ಕರ್ನಾಟಕ ಶಿಕ್ಷಣ ನೀತಿ ತರಲು ಸಮಿತಿ ರಚನೆ ಮಾಡಲಾಗಿದೆ. ಸಮಿತಿಯಿಂದ ಈಗಾಗಲೇ ಮಧ್ಯಂತರ ವರದಿ ಸಲ್ಲಿಸಲಾಗಿದೆ. ಬಹುಧರ್ಮ, ಸಂಸ್ಕೃತಿ, ಭಾಷೆ ಇರುವ ದೇಶದಲ್ಲಿ ಏಕ ಸಂಸ್ಕೃತಿ ಹೊಂದುವುದಿಲ್ಲ. ಸಾಮಾಜಿಕ ಸಂಸ್ಕೃತಿ, ಆರ್ಥಿಕ ವಾಸ್ತವಾಂಶ ಹೊಂದಿರುವ ಶಿಕ್ಷಣ ನೀತಿ ತರುವ ಅಗತ್ಯವಿದೆ.
ರಾಜ್ಯದಲ್ಲಿ ಗ್ಯಾರೆಂಟಿ ಯೋಜನೆಯಿಂದ ಏಳು ಕೋಟಿ ಮಹಿಳೆಯರಿಗೆ ಅನುಕೂಲ 1.2 ಕೋಟಿ ಜನ ಬಡತನ ರೇಖೆಯಿಂದ ಮೇಲಕ್ಕೆ ಬಂದಿದ್ದಾರೆ. ಮನೆ ಬಾಗಿಲಲೇ ತಪಾಸಣೆ ನಡೆಸಿ ಅಗತ್ಯ ಔಷಧಿ ಒದಗಿಸುವ ಗೃಹ ಆರೋಗ್ಯ ಯೋಜನೆ ಕೂಡ ಮುಂದಿನ ತಿಂಗಳಿನಿಂದ ರಾಜ್ಯದಲ್ಲಿ ಜಾರಿ ಮಾಡಲಾಗುತ್ತಿದೆ. ಮಧುಮೇಹ ಮತ್ತು ಅಧಿಕ ರಕ್ತದ ಒತ್ತಡ ಸಮಸ್ಯೆ ಇರುವವರಿಗೆ ಮೂರು ತಿಂಗಳಿಗೆ ಆಗುವಷ್ಟು ಮಾತ್ರೆ ಮನೆಗೆ ಒದಗಿಸುವ ಯೋಜನೆ ಜಾರಿಯಾಗಲಿದೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ