ಯಾದಗಿರಿ: ಬಂಧನ ಭೀತಿಯಿಂದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಗೈರಾದ ಶಾಸಕ ಚನ್ನಾರೆಡ್ಡಿ ಪಾಟೀಲ್

Published : Aug 15, 2024, 11:38 AM IST
ಯಾದಗಿರಿ: ಬಂಧನ ಭೀತಿಯಿಂದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಗೈರಾದ ಶಾಸಕ ಚನ್ನಾರೆಡ್ಡಿ ಪಾಟೀಲ್

ಸಾರಾಂಶ

ಯಾದಗಿರಿಯಲ್ಲಿ ನಡೆದ 78ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಧ್ವಜಾರೋಹಣಯಿಂದ ಕಾರ್ಯಕ್ರಮಕ್ಕೆ ಇದೇ ಮೊದಲ ಬಾರಿಗೆ ಶಾಸಕರೊಬ್ಬರು ಗೈರಾದ ಘಟನೆ ನಡೆದಿದೆ. ಹೌದು ಪ್ರತಿ ವರ್ಷ ಶಾಸಕರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯುತ್ತಿತ್ತು. ಆದರೆ  ಈ ಬಾರಿ ಶಾಸಕರಿಲ್ಲದೇ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.

ಯಾದಗಿರಿ (ಆ.15): ಯಾದಗಿರಿಯಲ್ಲಿ ನಡೆದ 78ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಧ್ವಜಾರೋಹಣಯಿಂದ ಕಾರ್ಯಕ್ರಮಕ್ಕೆ ಇದೇ ಮೊದಲ ಬಾರಿಗೆ ಶಾಸಕರೊಬ್ಬರು ಗೈರಾದ ಘಟನೆ ನಡೆದಿದೆ. ಹೌದು ಪ್ರತಿ ವರ್ಷ ಶಾಸಕರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯುತ್ತಿತ್ತು. ಆದರೆ  ಈ ಬಾರಿ ಶಾಸಕರಿಲ್ಲದೇ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.

ಪಿಎಸ್‌ಐ ಪರಶುರಾಮ ಸಾವು ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಶಾಸಕ ಚನ್ನರಡ್ಡಿ ಪಾಟೀಲ್, ಪುತ್ರ. ಪರಶುರಾಮ್ ಸಾವಿನ ಬಳಿಕ ತಲೆಮರೆಸಿಕೊಂಡಿರುವ ಶಾಸಕ. ಇತ್ತ ದಲಿತ ಸಂಘಟನೆಗಳು, ಕುಟುಂಬಸ್ಥರು ಶಾಸಕರ ಬಂಧನಕ್ಕೆ ತೀವ್ರ ಒತ್ತಡ ತಂದಿರುವ ಹಿನ್ನೆಲೆ ಧ್ವಜಾರೋಹನಕ್ಕೆ ಬಂದರೆ ಬಂಧನಕ್ಕೊಳಗಾಗುವ ಭೀತಿಯಿಂದ ಗೈರಾಗಿರುವ ಶಾಸಕ.  ಈ ಹಿಂದೆ ಯಾವತ್ತೂ ಶಾಸಕರ ಗೈರಿನಲ್ಲಿ ಕಾರ್ಯಕ್ರಮ ನಡೆದಿದ್ದೇ ಇಲ್ಲ. ಇದೇ ಮೊದಲ ಬಾರಿ ಯಾದಗಿರಿ ಕ್ಷೇತ್ರದ ಶಾಸಕ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ. \

ರಾಜ್ಯಕ್ಕೆ ಪ್ರತ್ಯೇಕ ಶಿಕ್ಷಣ ನೀತಿ ತರಲು ಸಮಿತಿ ರಚನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಪಿಎಸ್‌ಐ ಪರಶುರಾಮ್ ಸಾವು ಪ್ರಕರಣ ಸಂಬಂಧ ಈಗಾಗಲೇ ತನಿಖೆ ಚುರುಕುಗೊಳಿಸಲಾಗಿದೆ. ಬಂಧನದಿಂದ ತಪ್ಪಿಸಿಕೊಳ್ಳಲು ತೆರೆಮರೆಯಲ್ಲಿ ಹಲವು ನಾಯಕರನ್ನ ಭೇಟಿ ಮಾಡಿರುವ ಶಾಸಕ, ಪುತ್ರ. ಆದರೆ ಅದರಿಂದ ಯಾವುದೇ ಪ್ರಯೋಜನವಾಗ್ತಿಲ್ಲ. ವರ್ಗಾವಣೆಗೆ ಲಕ್ಷ ಲಕ್ಷ ಲಂಚ ಕೇಳಿದ್ದೇ ಸಾವಿಗೆ ಕಾರಣವಾಗಿರುವ ಬಗ್ಗೆ ದಲಿತ ಸಂಘಟನೆಗಳು ಸ್ವತಃ ಕುಟುಂಬಸ್ಥರು ಶಾಸಕ, ಪುತ್ರನ ವಿರುದ್ಧ ನೇರ ಆರೋಪ ಮಾಡಿದ್ದಾರೆ. ಈ ಹಿನ್ನೆಲೆ ಬಂಧನಕ್ಕೆ ಒಳಗಾಗುವ ಸಾಧ್ಯತೆ ಇದೆ. ಒಂದು ವೇಳೆ ಧ್ವಜಾರೋಹಣ ಕಾರ್ಯಕ್ರಮ ಹಾಜರಾಗಿದ್ದಾರೆ ಪ್ರತಿಭಟನೆ ಬಿಸಿ ಎದುರಿಸುವ ಸಾಧ್ಯತೆಯೂ ಇತ್ತು. ಹೀಗಾಗಿ ಗೈರಾಗಿದ್ದಾರೆ ಎನ್ನಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

20000 ರೈತರ ಜತೆ ಸೇರಿ ಡಿ. 9ಕ್ಕೆ ಸುವರ್ಣಸೌಧಕ್ಕೆ ಮುತ್ತಿಗೆ : ಬಿವೈವಿ
ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ