ಸ್ವಾತಂತ್ರ್ಯ ದಿನಾಚರಣೆಯಂದು ಎಲ್ಲಾ ಸರ್ಕಾರಿ ಕಚೇರಿಗಳು, ಸಂಸ್ಥೆಗಳು ಮತ್ತು ಶಾಲಾ ಕಾಲೇಜುಗಳಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡಬೇಕೆಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಸೂಚಿಸಿದ್ದಾರೆ. ಈ ಆದೇಶವನ್ನು ಪಾಲಿಸದಿದ್ದಲ್ಲಿ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನೂ ನೀಡಿದ್ದಾರೆ.
ಬೆಂಗಳೂರು (ಆ.14): ರಾಜ್ಯಾದ್ಯಂತ ಸ್ವಾತಂತ್ರ್ಯ ದಿನಾಚರಣೆ ವೇಳೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಫೋಟೋವನ್ನು ಕಡ್ಡಾಯವಾಗಿ ಇಡಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಹೆಚ್.ಸಿ. ಮಹದೇವಪ್ಪ ಸೂಚಿಸಿದ್ದಾರೆ.
ದೇಶದಾದ್ಯಂತ ನಾಳೆ ವಿಜೃಂಭಣೆಯಿಂದ ಅದ್ಧೂರಿಯಾಗಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಆದರೆ, ರಾಜ್ಯದಲ್ಲಿ ಸರ್ಕಾರಿ ಕಚೇರಿಗಳು, ಶಾಲೆಗಳು, ಸರ್ಕಾರಿ ಸಂಸ್ಥೆಗಳಲ್ಲಿ ಸ್ವಾತಂತ್ರ್ಯ ದಿನಾಚರಣೆ ಮಾಡುವ ವೇಳೆ ಗಾಂಧೀಜಿ ಫೋಟೋ ಇಡುವ ಮಾದರಿಯಲ್ಲಿಯೇ ಕಡ್ಡಾಯವಾಗಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಫೋಟೋವನ್ನೂ ಇರಿಸಿ ಪೂಜಿಸಬೇಕು. ಒಂದು ವೇಳೆ ಅಂಬೇಡ್ಕರ್ ಫೋಟೋ ಇಡಿದಿದ್ದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಹೆಚ್.ಸಿ. ಮಹದೇವಪ್ಪ ಸೂಚಿಸಿದ್ದಾರೆ.
ಸ್ವಾತಂತ್ರ್ಯ ದಿನಾಚರಣೆಗೆ ವಿಶೇಷ ನೇಲ್ ಪಾಲಿಶ್ ಐಡಿಯಾಗಳು
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಸರ್ಕಾರದ ಆದೇಶ ಪತ್ರವನ್ನು ಹಂಚಿಕೊಂಡಿರುವ ಅವರು, 'ಭಾರತಕ್ಕೆ ಸಾಮಾಜಿಕ ಸ್ವಾತಂತ್ರ್ಯ ತಂದುಕೊಡಲು ಪರಿಣಾಮಕಾರಿಯಾದ ಹೋರಾಟ ನಡೆಸಿದವರು ಬಾಬಾ ಸಾಹೇಬ್ ಅಂಬೇಡ್ಕರ್ ಅವರು. ಈ ಹಿನ್ನಲೆಯಲ್ಲಿ ನಾಳೆ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ, ಎಲ್ಲಾ ಸರ್ಕಾರಿ ಕಚೇರಿಗಳು, ಸರ್ಕಾರಿ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ಮತ್ತು ಶಾಲಾ ಕಾಲೇಜುಗಳಲ್ಲಿ ಡಾ ಬಿ ಆರ್ ಅಂಬೇಡ್ಕರ್ ಅವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡಲು ಆದೇಶಿಸಿದೆ. ಈ ಆದೇಶವನ್ನು ಮೀರಿದ್ದಲ್ಲಿ ಅಂತಹವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು' ಎಂದು ಪೋಸ್ಟ್ ಮಾಡಿದ್ದಾರೆ.
ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆ ಮತ್ತು ನವೆಂಬರ್-26ರ ಸಂವಿಧಾನದ ದಿನಾಚರಣೆ ಸಂದರ್ಭದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ರವರ ಭಾವಚಿತ್ರವನ್ನು ಇಡುವಂತೆ ಸಮಾಜ ಕಲ್ಯಾಣ ಇಲಾಖೆ ಆಯುಕ್ತರು ಕಳೆದ ಆ.12ರಂದೇ ಆದೇಶ ಹೊರಡಿಸಿದ್ದರು. ಇನ್ನು ಉಲ್ಲೇಖಿತ ಸರ್ಕಾರದ ಸುತ್ತೋಲೆಯಲ್ಲಿ ಜನವರಿ 26ರ ಗಣರಾಜ್ಯೋತ್ಸವ ದಿನದೊಂದಿಗೆ ಆಗಸ್ಟ್-15ರ ಸ್ವಾತಂತ್ರ್ಯ ದಿನಾಚರಣೆಯಂದು ಕೂಡ ರಾಜ್ಯದ ಎಲ್ಲಾ ಸರ್ಕಾರಿ ಕಛೇರಿಗಳು, ಸರ್ಕಾರಿ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ಹಾಗೂ ಶಾಲಾ ಕಾಲೇಜು ಸೇರಿದಂತೆ ಸರ್ಕಾರದ ವತಿಯಿಂದ ನಡೆಯುವ ಎಲ್ಲಾ ಸಮಾರಂಭಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಭಾವಚಿತ್ರದೊಂದಿಗೆ ಸಂವಿಧಾನದ ಪಿತಾಮಹ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರವನ್ನು ಸಹ ಕಡ್ಡಾಯವಾಗಿ ಇಡುವಂತೆ ಸೂಚಿಸಲಾಗಿದೆ.
ಕಾಂಗ್ರೆಸ್ ಗ್ಯಾರಂಟಿಗೆ ಎಕ್ಸ್ ಪೈರಿ.? ರಾಜ್ಯದಲ್ಲಿ ಗ್ಯಾರಂಟಿಗಳಿಗೆ ಕಾಂಗ್ರೆಸ್ ಕತ್ತರಿ..! JDS-BJP ಟೀಕೆ
ಮುಂದುವರೆದು, ನವೆಂಬರ್-26ರ ಸಂವಿಧಾನದ ದಿನಾಚರಣೆ ಸಂದರ್ಭದಲ್ಲಿ ಮೇಲ್ಕಂಡ ಎಲ್ಲಾ ಸಂಸ್ಥೆಗಳು, ಶಾಲಾ ಕಾಲೇಜು ಹಾಗೂ ಸರ್ಕಾರಿ ಕಛೇರಿಗಳಲ್ಲಿ ಸಂವಿಧಾನದ ಪಿತಾಮಹ. ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡುವಂತೆ ಸೂಚಿಸಿರುತ್ತಾರೆ. ಆದ್ದರಿಂದ, ಸರ್ಕಾರದ ಸುತ್ತೋಲೆಯಂತೆ ಅಗತ್ಯ ಕ್ರಮಕೈಗೊಳ್ಳಲು ಕೋರಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.