ಆರ್ಥಿಕ ಪ್ರಗತಿಯಲ್ಲಿ ಭಾರತ ಮೂರನೇ ಸ್ಥಾನಕ್ಕೆ ಸನ್ನಿಹಿತ: ಪ್ರಲ್ಹಾದ್‌ ಜೋಶಿ

By Kannadaprabha News  |  First Published Jan 1, 2024, 11:30 PM IST

ಆರ್ಥಿಕ ಪ್ರಗತಿಯಲ್ಲಿ ಭಾರತ ವಿಶ್ವದ ಟಾಪ್ 3ನೇ ಸ್ಥಾನಕ್ಕೆ ಬರುವುದು ಸನ್ನಿಹಿತವಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ವಿಶ್ವಾಸ ವ್ಯಕ್ತಪಡಿಸಿದರು. ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಈ ಹೊಸ ವರ್ಷದಲ್ಲಿ ಭಾರತ ದೇಶ ಆರ್ಥಿಕತೆಯಲ್ಲಿ ವಿಶ್ವದ ಟಾಪ್ 3ನೇ ರಾಷ್ಟ್ರವಾಗಲಿದೆ. 


ಹುಬ್ಬಳ್ಳಿ (ಜ.01): ಆರ್ಥಿಕ ಪ್ರಗತಿಯಲ್ಲಿ ಭಾರತ ವಿಶ್ವದ ಟಾಪ್ 3ನೇ ಸ್ಥಾನಕ್ಕೆ ಬರುವುದು ಸನ್ನಿಹಿತವಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ವಿಶ್ವಾಸ ವ್ಯಕ್ತಪಡಿಸಿದರು. ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಈ ಹೊಸ ವರ್ಷದಲ್ಲಿ ಭಾರತ ದೇಶ ಆರ್ಥಿಕತೆಯಲ್ಲಿ ವಿಶ್ವದ ಟಾಪ್ 3ನೇ ರಾಷ್ಟ್ರವಾಗಲಿದೆ. ಈಗಾಗಲೇ ನಾವು ಟಾಪ್ 5ನೇ ಸ್ಥಾನದಲ್ಲಿದ್ದೇವೆ. ಹೊಸ ವರ್ಷದಲ್ಲಿ ಟಾಪ್ 3ನೇ ಸ್ಥಾನಕ್ಕೆ ಬರಲಿದ್ದೇವೆ. ಅದಾದ ನಂತರ ಹಂತ ಹಂತವಾಗಿ ವಿಶ್ವದಲ್ಲೇ ಭಾರತ ನಂಬರ್-1 ಸ್ಥಾನಕ್ಕೆರುವುದು ಗ್ಯಾರಂಟಿ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಹಿನ್ನೆಲೆ ಅರಿತು ಮಾತನಾಡುವೆ: ಸಂಸದ ಪ್ರತಾಪ್ ಸಿಂಹ ಅವರ ಸಹೋದರ ವಿಕ್ರಂ ಸಿಂಹ ಅವರ ಬಂಧನ ಪ್ರಕರಣದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಜೋಶಿ, ಪ್ರತಾಪಸಿಂಹ ಜತೆ ನಾನು ಈ ಕುರಿತು ಮಾತನಾಡುವೆ. ಆದರೆ, ಇಷ್ಟು ದಿನ ಬಿಟ್ಟು ಈಗ ಏಕೆ ಬಂಧಿಸಿದ್ದಾರೆ? ಇದರ ಹಿನ್ನೆಲೆ ಏನು? ಎಂಬಂತಹ ಬಹಳಷ್ಟು ಪ್ರಶ್ನೆಗಳಿವೆ. ಇದರ ಬಗ್ಗೆ ಸಂಪೂರ್ಣ ಮಾಹಿತಿ ಪಡೆದು ನಂತರ ಪ್ರತಿಕ್ರಿಯೆ ನೀಡುವುದಾಗಿ ತಿಳಿಸಿದರು. ಮೈಸೂರು ಲೋಕಸಭಾ ಕ್ಷೇತ್ರದಿಂದ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಸ್ಪರ್ಧಿಸುವ ಸಾಧ್ಯತೆಯ ಹಿನ್ನೆಲೆಯಲ್ಲಿ ಹೀಗೆ ಪ್ರತಾಪ ಸಿಂಹರನ್ನ ಟಾರ್ಗೆಟ್ ಮಾಡಲಾಗಿದೆಯಾ ಎಂಬ ವರದಿಗಾರರ ಪ್ರಶ್ನೆಗೆ ಉತ್ತರಿಸಿದ ಜೋಶಿ, ಹಾಗೂ ಆಗಿರುವ ಸಾಧ್ಯತೆ ಇದೆ, ಈ ಕುರಿತು ನಾನು ಮಾಹಿತಿ ಪಡೆದು ಮಾತನಾಡುವೆ ಎಂದರು.

Tap to resize

Latest Videos

ವಿ.ಸೋಮಣ್ಣ ಜೊತೆ ಮಾತನಾಡಿದ್ದೇನೆ, ಅವರು ಬಿಜೆಪಿ ಪಕ್ಷ ಬಿಡೊಲ್ಲ: ಆರ್.ಅಶೋಕ್

ಕೇಂದ್ರದ ಅಭಿವೃದ್ಧಿ ಯೋಜನೆ ಮನೆಮನೆಗೆ ತಿಳಿಸುವ ಕಾರ್ಯ: ಕಳೆದ ಒಂಬತ್ತು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಕೈಗೊಂಡ ಜನಪರ, ಅಭಿವೃದ್ಧಿ ಯೋಜನೆಗಳನ್ನು ಮನೆಮನೆಗೆ ತಲುಪಿಸುವುದೇ ಈ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಉದ್ದೇಶವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಕಸಿತ ಭಾರತ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದರು. ಭಾರತ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಗ್ರಾಮೀಣ ಮತ್ತು ನಗರ ಪ್ರದಶಗಳಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಹಮ್ಮಿಕೊಂಡಿರುವ ವಿಕಸಿತ ಭಾರತ ಸಂಕಲ್ಪ ಯಾತ್ರೆಗೆ ಜನರಿಂದ ಉತ್ತಮ ಸ್ಪಂದನೆ ದೊರೆಯುತ್ತಿದೆ. 

ಕಳೆದ ಒಂಬತ್ತು ವರ್ಷಗಳಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಗ್ರಾಮೀಣ ಹಾಗೂ ನಗರದ ಜನರಿಗೆ ಹಲವಾರು ಯೋಜನೆ ಜಾರಿಗೆ ತಂದಿದ್ದು, ಮುಖ್ಯವಾಗಿ ಈ ಯಾತ್ರೆಯಲ್ಲಿ ಉಜ್ವಲ ಯೋಜನೆ, ಆಯುಷ್ಮಾನ ಭಾರತ ಯೋಜನೆಯಡಿ ಆರೋಗ್ಯ ತಪಾಸಣಾ ಶಿಬಿರ, ಆಧಾರ ಕಾರ್ಡ್, ಪ್ರಧಾನ ಮಂತ್ರಿ ಸ್ವನಿಧಿ, ಬ್ಯಾಂಕಿನಲ್ಲಿ ಪ್ರಧಾನ ಮಂತ್ರಿ ಜೀವನ ಜ್ಯೋತಿ ಮತ್ತು ಜೀವನ ಬಿಮಾ ಯೋಜನೆ, ಮುದ್ರಾ, ವಿಶ್ವಕರ್ಮ ಯೋಜನೆ ಮತ್ತು ಇನ್ನಿತರ ಯೋಜನೆಗಳು ಜಾರಿಯಲ್ಲಿದ್ದು ಜನರು ಇವೆಲ್ಲ ಯೋಜನೆಗಳ ಲಾಭ ಸ್ಥಳದಲ್ಲೇ ಮಾಹಿತಿ ಪಡೆದು ಅರ್ಜಿ ಸಲ್ಲಿಸುವ ವ್ಯವಸ್ಥೆ ಕಲ್ಪಿಸಲಾಗಿದೆ.

ಯತ್ನಾಳ್‌ ಮಾಹಿತಿ ಮೇಲೆ ತನಿಖೆ, ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ: ಜಗದೀಶ್‌ ಶೆಟ್ಟರ್‌

ಯೋಜನೆಗಳ ಸಮರ್ಪಕ ಮಾಹಿತಿ ನೀಡುವ ಉದ್ದೇಶದಿಂದ ಇಡಿ ದೇಶದಲ್ಲಿ ಈ ವಿಕಸಿತ ಭಾರತ ಸಂಕಲ್ಪ ಯಾತ್ರೆ ಪ್ರಾರಂಭಿಸಲಾಗಿದೆ. ಯೋಜನೆಗಳ ಲಾಭ ಪಡೆದು ತಮ್ಮ ಸ್ವಂತ ಅಭಿವೃದ್ಧಿಯ ಜತೆಗೆ ದೇಶದ ಅಭಿವೃದ್ಧಿಗೆ ಎಲ್ಲರೂ ಮುಂದಾಗಬೇಕು ಎಂದರು. ಭಾರತವನ್ನು 2047ರೊಳಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಕುರಿತು ಪ್ರತಿಜ್ಞಾವಿಧಿ ಬೋಧಿಸಲಾಯಿತು ಮತ್ತು ಕೇಂದ್ರ ಸರ್ಕಾರದ ವಿವಿಧ ಯೋಜನೆಗಳಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ಮಂಜೂರಾತಿ ಪತ್ರ ವಿತರಿಸಿ, ಕೇಂದ್ರ ಸರ್ಕಾರದ ಯೋಜನೆಗಳ ಮಾಹಿತಿಯುಳ್ಳ ಕ್ಯಾಲೆಂಡರ್ ಬಿಡುಗಡೆ ಮಾಡಲಾಯಿತು. ಇದೇ ಸಂದರ್ಭದಲ್ಲಿ ಪ್ರಧಾನ ಮಂತ್ರಿಯವರ ಮನ್ ಕೀ ಬಾತ್ ನೇರ ಪ್ರಸಾರ ಕಾರ್ಯಕ್ರಮವನ್ನು ಸಚಿವರು ಸ್ಥಳೀಯರೊಂದಿಗೆ ವೀಕ್ಷಿಸಿದರು.

click me!