
ಮಂಡ್ಯ (ಮೇ.9): ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಶೇರ್ ಮಾಡಿದ ಆರೋಪದಲ್ಲಿ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದ ಜಾವಿದ್ ಎಂಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಯು ಪಾಕಿಸ್ತಾನದ ಮಾಜಿ ಪ್ರಧಾನಮಂತ್ರಿ ಇಮ್ರಾನ್ ಖಾನ್‌ಗೆ ಮೋದಿ ಶೂ ಧರಿಸುವಂತೆ ಎಡಿಟ್ ಮಾಡಿದ ಫೋಟೊವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡುವ ಮೂಲಕ ಆರೋಪಿ ವಿಕೃತಿ ಮೆರೆದಿದ್ದ ಆರೋಪ. ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಮಲ್ಲಿಕಾರ್ಜುನ ಬಾಲದಂಡಿ ಅವರು ಈ ಕುರಿತು ಅಧಿಕೃತ ಮಾಹಿತಿ ನೀಡಿದ್ದು, ಬಿಜೆಪಿ ಕಾರ್ಯಕರ್ತರ ದೂರಿನ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಪಾಕಿಸ್ತಾನ ಸುಳ್ಳು ಸುದ್ದಿ ಹರಡುತ್ತಿದೆ: PIB ಎಚ್ಚರಿಕೆ
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ನಾಗರಿಕ ಸಂಹಿತೆ (ಬಿಎನ್‌ಎಸ್) ಕಲಂ 152, 192, ಮತ್ತು 340 ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಕೋಲಾರದಲ್ಲೂ ಇದೇ ರೀತಿಯ ಪ್ರಕರಣ
ಇದೇ ರೀತಿಯ ಘಟನೆಯೊಂದು ಕೋಲಾರದಲ್ಲೂ ನಡೆದಿದೆ.ಕೋಲಾರದ ಕುಂಬಾರಪೇಟೆ ನಿವಾಸಿ ಮುನೀರ್ ಖಾನ್ ಖುರೇಷಿ ಎಂಬ ವ್ಯಕ್ತಿಯು ತನ್ನ ಯೂಟ್ಯೂಬ್ ಚಾನೆಲ್ ಮೂಲಕ 'ಪಹಲ್ಗಾಮ್ ದಾಳಿ ಕೇಂದ್ರ ಸರ್ಕಾರದ ಪೂರ್ವ ನಿಯೋಜಿತ' ಎಂಬ ಆಧಾರ ರಹಿತ ಸುಳ್ಳು ಸುದ್ದಿಯನ್ನು ಹಬ್ಬಿಸಿದ್ದನೆಂಬ ಆರೋಪದಲ್ಲಿ ಗಲ್‌ಪೇಟೆ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿ ವಿಚಾರಣೆ ನಡೆಸಿದ್ದಾರೆ. ಈ ಘಟನೆ ಬೆನ್ನಲ್ಲೇ ಮಂಡ್ಯದಲ್ಲಿ ಪ್ರಕರಣ ಮರುಕಳಿಸಿದೆ. ಎರಡೂ ಪ್ರಕರಣಗಳು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮತ್ತು ಪ್ರಚೋದನಕಾರಿ ಮಾಹಿತಿಯನ್ನು ಹರಡುವುದರಿಂದ ಸಾರ್ವಜನಿಕ ಶಾಂತಿಗೆ ಧಕ್ಕೆ ಉಂಟಾಗಬಹುದು ಎಂಬ ಕಾರಣಕ್ಕೆ ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ. ತನಿಖೆ ಮುಂದುವರಿದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ