Constitution Day: ಜಗತ್ತಿನಲ್ಲೇ ಅತಿ ವಿಶಿಷ್ಟ ಭಾರತೀಯ ಸಂವಿಧಾನ

Published : Nov 26, 2022, 12:46 PM IST
Constitution Day:  ಜಗತ್ತಿನಲ್ಲೇ ಅತಿ ವಿಶಿಷ್ಟ ಭಾರತೀಯ ಸಂವಿಧಾನ

ಸಾರಾಂಶ

ಭಾರತದಲ್ಲಿ ಸಂವಿಧಾನ ದಿನವನ್ನು ಪ್ರತಿ ವರ್ಷ ನವೆಂಬರ್‌ 26ರಂದು ಆಚರಿಸಲಾಗುತ್ತದೆ. ಭಾರತದ ಸಂವಿಧಾನವು ವಿಶ್ವದ ಎಲ್ಲಾ ಸಂವಿಧಾನಗಳಿಗಿಂತ ಅತಿ ದೊಡ್ಡ ಲಿಖಿತ ಸಂವಿಧಾನ

ಮಣಿಕಂಠ ತ್ರಿಶಂಕರ್‌ 

ಮೈಸೂರು(ನ.26): ಭಾರತೀಯ ಸಂವಿಧಾನವು ಜನವರಿ 26, 1950ರಂದು ಜಾರಿಗೆ ಬಂದಿತು. ಭಾರತೀಯ ಸಂವಿಧಾನವನ್ನು ರಚಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಭಾರತದ ಮೊದಲ ಕಾನೂನು ಸಚಿವ ಡಾ.ಬಿ.ಆರ್‌.ಅಂಬೇಡ್ಕರ್‌ ಅವರಿಗೆ ಈ ದಿನ ಗೌರವ ಸಲ್ಲಿಸಲಾಗುತ್ತದೆ. ಭಾರತದಲ್ಲಿ ಸಂವಿಧಾನ ದಿನವನ್ನು ಪ್ರತಿ ವರ್ಷ ನವೆಂಬರ್‌ 26ರಂದು ಆಚರಿಸಲಾಗುತ್ತದೆ. ಭಾರತದ ಸಂವಿಧಾನವು ವಿಶ್ವದ ಎಲ್ಲಾ ಸಂವಿಧಾನಗಳಿಗಿಂತ ಅತಿ ದೊಡ್ಡ ಲಿಖಿತ ಸಂವಿಧಾನ. ಸಂವಿಧಾನದಲ್ಲಿ ಪ್ರತಿಪಾದಿಸಿರುವ ಮೂಲಭೂತ ಕರ್ತವ್ಯಗಳ ಅರಿವು ಮೂಡಿಸುವ ಗುರಿಯನ್ನು ಈ ದಿನವು ಹೊಂದಿದೆ.

ಭಾರತವು ಸ್ವತಂತ್ರ ರಾಷ್ಟ್ರವಾದ ನಂತರ ಸಂವಿಧಾನ ರಚನಾ ಸಭೆಯು ಡಾ.ಭೀಮರಾವ್‌ ಅಂಬೇಡ್ಕರ್‌ ಅವರ ಅಧ್ಯಕ್ಷತೆಯ ಸಮಿತಿಗೆ ಸಂವಿಧಾನವನ್ನು ರಚಿಸುವ ಕೆಲಸವನ್ನು ವಹಿಸಿಕೊಟ್ಟಿತು. ಭಾರತದ ಮೊದಲ ರಾಷ್ಟ್ರಪತಿ ಡಾ.ರಾಜೇಂದ್ರ ಪ್ರಸಾದ್‌ ಅವರು ಸಂವಿಧಾನ ರಚನಾ ಸಭೆಯ ಅಧ್ಯಕ್ಷರಾಗಿದ್ದರು. 1948ರ ಆರಂಭದಲ್ಲಿ ಡಾ.ಅಂಬೇಡ್ಕರ್‌ ಅವರು ಭಾರತೀಯ ಸಂವಿಧಾನದ ಕರಡನ್ನು ಪೂರ್ಣಗೊಳಿಸಿದರು ಮತ್ತು ಅದನ್ನು ಸಂವಿಧಾನ ಸಭೆಯಲ್ಲಿ ಮಂಡಿಸಿದರು. ನವೆಂಬರ್‌ 26, 1949ರಂದು ಈ ಕರಡನ್ನು ಕೆಲವು ತಿದ್ದುಪಡಿಗಳೊಂದಿಗೆ ಅಂಗೀಕರಿಸಲಾಯಿತು.

ಇ- ಕೋರ್ಟ್‌ ಯೋಜ​ನೆ​ಗೆ ಇಂದು ಮೋದಿ ಚಾಲನೆ: ಸುಪ್ರೀಂ ಕೋರ್ಟ​ಲ್ಲಿ ಸಂವಿಧಾನ ದಿನಾಚರಣೆ ವೇಳೆ ಉದ್ಘಾ​ಟ​ನೆ

ಭಾರತೀಯ ಸಂವಿಧಾನವು ಜನವರಿ 26, 1950ರಂದು ಜಾರಿಗೆ ಬಂದಿತು. ಈ ಸಂವಿಧಾನವು ಭಾರತವನ್ನು ಸಾರ್ವಭೌಮ, ಸಮಾಜವಾದಿ, ಜಾತ್ಯತೀತ ಮತ್ತು ಪ್ರಜಾಸತ್ತಾತ್ಮಕ ಗಣರಾಜ್ಯವೆಂದು ಘೋಷಿಸುತ್ತದೆ ಮತ್ತು ಎಲ್ಲಾ ನಾಗರಿಕರಿಗೆ ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ರಾಷ್ಟ್ರದ ಏಕತೆ ಮತ್ತು ಸಮಗ್ರತೆಯನ್ನು ಕಾಪಾಡಿಕೊಳ್ಳಲು ಭ್ರಾತೃತ್ವವನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ. ಭಾರತೀಯ ಸಂವಿಧಾನವನ್ನು ರಚಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಭಾರತದ ಮೊದಲ ಕಾನೂನು ಸಚಿವ ಡಾ.ಬಿ.ಆರ್‌.ಅಂಬೇಡ್ಕರ್‌ ಅವರಿಗೆ ಈ ದಿನ ಗೌರವ ಸಲ್ಲಿಸಲಾಗುತ್ತದೆ.

ಭಾರತದ ಸಂವಿಧಾನದ ವೈಶಿಷ್ಟ್ಯ

ಭಾರತದ ಸಂವಿಧಾನವು ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಅವುಗಳಲ್ಲಿ ಕೆಲವು ಈ ಕೆಳಗಿನಂತಿವೆ:

* ಭಾರತದ ಸಂವಿಧಾನವು ಬ್ರಿಟನ್‌, ಐರ್ಲೆಂಡ್‌, ಜಪಾನ್‌, ಯುಎಸ್‌ಎ, ದಕ್ಷಿಣ ಆಫ್ರಿಕಾ, ಜರ್ಮನಿ, ಆಸ್ಪ್ರೇಲಿಯಾ ಮತ್ತು ಕೆನಡಾ ಸೇರಿದಂತೆ ಇತರ ದೇಶಗಳಿಂದ ವೈಶಿಷ್ಟ್ಯಗಳನ್ನು ಎರವಲು ಪಡೆದುಕೊಂಡಿದೆ.
* ಭಾರತದ ಸಂವಿಧಾನ ಸಭೆಯನ್ನು 1946ರಲ್ಲಿ ಸ್ಥಾಪಿಸಲಾಯಿತು. ಭಾರತ ಸಂವಿಧಾನ ರಚನೆಗೆ 2 ವರ್ಷ 11 ತಿಂಗಳು 18 ದಿನಗಳ ಕಾಲ ಸಮಯ ತೆಗೆದುಕೊಳ್ಳಲಾಯಿತು.
* ಭಾರತದ ಸಂವಿಧಾನವು ಕೈಬರಹದ ದಾಖಲೆಯಾಗಿದೆ. ಇದು ಪ್ರಪಂಚದಲ್ಲೇ ಅತ್ಯಂತ ದೊಡ್ಡದಾದ ಕೈಬರಹದ ದಾಖಲೆಗಳಲ್ಲಿ ಒಂದಾಗಿದೆ. ಇಂಗ್ಲಿಷ್‌ ಆವೃತ್ತಿಯಲ್ಲಿ ಒಟ್ಟು 1,17,369 ಪದಗಳಿವೆ.
* ಆರಂಭದಲ್ಲಿ ಸಮಾಜವಾದಿ ಎಂಬ ಪದವು ಭಾರತೀಯ ಸಂವಿಧಾನದ ಪ್ರಿಯಾಂಬಲ… (ಪೀಠಿಕೆ) ಭಾಗವಾಗಿರಲಿಲ್ಲ. ತುರ್ತು ಪರಿಸ್ಥಿತಿಯ ಸಮಯದಲ್ಲಿ 1976ರ 42ನೇ ತಿದ್ದುಪಡಿ ಕಾಯಿದೆಯ ಮೂಲಕ ಆ ಪದವನ್ನು ಸೇರಿಸಲಾಯಿತು. ಇದು ಪೀಠಿಕೆಗೆ ಇದುವರೆಗಿನ ಏಕೈಕ ತಿದ್ದುಪಡಿಯಾಗಿದೆ.
* ಭಾರತೀಯ ಸಂವಿಧಾನದ ಮೂಲ ರಚನೆಯು ಭಾರತ ಸರ್ಕಾರದ ಕಾಯಿದೆ 1935ರ ಮೇಲೆ ನಿಂತಿದೆ.
* ಸಂವಿಧಾನದ ಮೂಲ ಕೈಬರಹದ ಪ್ರತಿಗಳನ್ನು ಸಂಸತ್‌ ಭವನದ ಗ್ರಂಥಾಲಯದಲ್ಲಿ ಹೀಲಿಯಂ ತುಂಬಿದ ಪ್ರಕೋಷ್ಠದಲ್ಲಿ ಸಂರಕ್ಷಿಸಲಾಗಿದೆ.
* ನವೆಂಬರ್‌ 26, 1949ರಂದು ಸಾಂವಿಧಾನಿಕ ಸಭೆಯು ಸಭೆ ಸೇರಿತು. ಅಂದು ಜೋರಾಗಿ ಹಾಗೂ ದೀರ್ಘವಾದ ಹರ್ಷೋದ್ಗಾರಗಳೊಂದಿಗೆ ಮತ್ತು ಮೇಜುಗಳ ಬಡಿತದೊಂದಿಗೆ ಸಂವಿಧಾನದ ಅಂಗೀಕಾರವನ್ನು ಸ್ವಾಗತಿಸಲಾಯಿತು.
* ಸಂವಿಧಾನ ರಚನಾ ಸಭೆಯ ಅಧ್ಯಕ್ಷರಾದ ಡಾ.ರಾಜೇಂದ್ರ ಪ್ರಸಾದ್‌ ಅವರು ಸಂವಿಧಾನವನ್ನು ಅಂಗೀಕರಿಸುವ ಪ್ರಸ್ತಾವನೆಯನ್ನು ಮಂಡಿಸುವ ಮೊದಲು ತಮ್ಮ ಭಾಷಣದಲ್ಲಿ ಮಹಾತ್ಮ ಗಾಂಧೀಜಿಯವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು ಮತ್ತು ಈ ಸಂವಿಧಾನವನ್ನು ಕಾರ್ಯಗತಗೊಳಿಸಲು ಯಾರ ಸೌಭಾಗ್ಯವಿದೆಯೋ ಅವರೆಲ್ಲರಿಗೂ ನಾನು ಶುಭ ಹಾರೈಸುತ್ತೇನೆ ಎಂದು ಹೇಳಿದರು. ಇದು ರಾಷ್ಟ್ರಪಿತ ಕಲಿಸಿದ ವಿಶಿಷ್ಟವಿಧಾನದಿಂದ ನಾವು ಸಾಧಿಸಿದ ಅಪೂರ್ವ ವಿಜಯ ಎಂದು ಭವಿಷ್ಯದಲ್ಲಿ ಭಾರತೀಯರು ನೆನಪಿಸಿಕೊಳ್ಳಲಿದ್ದಾರೆ. ನಾವು ಗೆದ್ದ ಸ್ವಾತಂತ್ರ್ಯವನ್ನು ಸಂರಕ್ಷಿಸುವುದು ಮಾತ್ರವಲ್ಲದೆ ಅದನ್ನು ನಿಜವಾಗಿಯೂ ಮನುಷ್ಯನಿಗೆ ಫಲದ ರೂಪದಲ್ಲಿ ನೀಡುವುದು ನಮ್ಮ ಕೈಯಲ್ಲಿದೆ ಎಂದು ಹೇಳಿದರು ಎಂದು ಪತ್ರಕರ್ತ ಮತ್ತು ಸ್ವಾತಂತ್ರ್ಯ ಹೋರಾಟಗಾರ ಶೈಲೇನ್‌ ಚಟರ್ಜಿ ಬರೆದಿದ್ದಾರೆ.
* ಸಂವಿಧಾನವನ್ನು ಅಂಗೀಕರಿಸಿದ ನಂತರ, ಸಂವಿಧಾನ ಸಭೆಯ ಐತಿಹಾಸಿಕ ಅಧಿವೇಶನವು ಶೈಲೇನ್‌ ಚಟರ್ಜಿಯವರ ಪ್ರಕಾರ ಹಿರಿಯ ಸ್ವಾತಂತ್ರ್ಯ ಹೋರಾಟಗಾರ್ತಿ ಪೂರ್ಣಿಮಾ ಬ್ಯಾನರ್ಜಿ ಅವರಿಂದ ಜನ-ಗಣ-ಮನ-ಅಧಿನಾಯಕ ಜಯ ಹೇ ಭಾರತ ಭಾಗ್ಯ ವಿಧಾತಾ ಎಂಬ ರಾಷ್ಟ್ರಗೀತೆಯನ್ನು ಹಾಡುವುದರೊಂದಿಗೆ ಕೊನೆಗೊಂಡಿತು.
* ಸಂವಿಧಾನದ ಪ್ರಕಾರ ಜನವರಿ 24, 1950ರಂದು ನಡೆದ ವಿಶೇಷ ಅಧಿವೇಶನದಲ್ಲಿ ಅಸೆಂಬ್ಲಿಯು ಡಾ.ರಾಜೇಂದ್ರ ಪ್ರಸಾದ್‌ ಅವರನ್ನು ಭಾರತೀಯ ಗಣರಾಜ್ಯದ ಮೊದಲ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿತು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಪಬ್ಬಲ್ಲಿ ಮೊಬೈಲ್‌ ತರಲುಹೋದ ಕನ್ನಡಿಗ ಬಲಿ, ಗೋವಾ ಪಬ್ ದುರಂತಕ್ಕೆ ಕಾರಣವೇನು?
ಮೆಕ್ಕೆಜೋಳ ಖರೀದಿಯ ಮಿತಿ 50 ಕ್ವಿಂಟಲ್‌ಗೇರಿಕೆ