
ಯುಗಾದಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ದಟ್ಟಣೆ ಹೆಚ್ಚಾಗುವ ಸಂಭವವಿದ್ದು, ಇದನ್ನು ಗಮನದಲ್ಲಿಟ್ಟುಕೊಂಡು ದಕ್ಷಿಣ ಮಧ್ಯ ರೈಲ್ವೆಯು ಗುಂಟೂರು ಮತ್ತು ಎಸ್.ಎಸ್.ಎಸ್. ಹುಬ್ಬಳ್ಳಿ ನಡುವೆ ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಿದೆ.
ರೈಲಿನ ವಿವರ ಈ ಕೆಳಗಿನಂತಿವೆ: ರೈಲು ಸಂಖ್ಯೆ 07271 ಗುಂಟೂರು-ಎಸ್ಎಸ್ಎಸ್ ಹುಬ್ಬಳ್ಳಿ ವಿಶೇಷ ರೈಲು ಮಾರ್ಚ್ 31, 2025 ರಂದು ರಾತ್ರಿ 8:00 ಗಂಟೆಗೆ ಗುಂಟೂರಿನಿಂದ ಹೊರಟು, ಮರುದಿನ ಬೆಳಿಗ್ಗೆ 9:20ಕ್ಕೆ ಎಸ್ಎಸ್ಎಸ್ ಹುಬ್ಬಳ್ಳಿಗೆ ಆಗಮಿಸಲಿದೆ.
ರೈಲು ಸಂಖ್ಯೆ 07272 ಎಸ್ಎಸ್ಎಸ್ ಹುಬ್ಬಳ್ಳಿ-ಗುಂಟೂರು ವಿಶೇಷ ರೈಲು ಏಪ್ರಿಲ್ 1, 2025 ರಂದು ಬೆಳಿಗ್ಗೆ 11:00 ಗಂಟೆಗೆ ಎಸ್ಎಸ್ಎಸ್ ಹುಬ್ಬಳ್ಳಿಯಿಂದ ಹೊರಟು, ಮರುದಿನ ಬೆಳಗಿನ ಜಾವ 3:00 ಗಂಟೆಗೆ ಗುಂಟೂರು ತಲುಪಲಿದೆ.
ಇದನ್ನೂ ಓದಿ: ಭಾರತೀಯ ರೈಲ್ವೆ ಆದಾಯ: ಒಂದೇ ಟಿಕೆಟ್‌ನಿಂದ ಎಷ್ಟು ಗಳಿಸುತ್ತೆ ಗೊತ್ತಾ?
ಈ ವಿಶೇಷ ರೈಲುಗಳು ಎರಡೂ ಮಾರ್ಗಗಳಲ್ಲಿ ನರಸರಾವ್ ಪೇಟೆ, ವಿನುಕೊಂಡ, ಮಾರ್ಕಾಪುರ ರೋಡ್, ಕುಂಬಂ, ಗಿಡ್ಡಲೂರು, ನಂದ್ಯಾಳ, ಧೋಣೆ, ಗುಂತಕಲ್, ಬಳ್ಳಾರಿ, ತೋರಣಗಲ್ಲು, ಹೊಸಪೇಟೆ, ಮುನಿರಾಬಾದ್, ಕೊಪ್ಪಳ, ಭಾನಾಪುರ, ಬನ್ನಿ ಕೊಪ್ಪ, ಗದಗ ಮತ್ತು ಅಣ್ಣಿಗೇರಿ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿವೆ.
ಈ ರೈಲಿನಲ್ಲಿ ಒಟ್ಟು 22 ಬೋಗಿಗಳಿದ್ದು, ಅವುಗಳಲ್ಲಿ 16 ಸಾಮಾನ್ಯ ದ್ವಿತೀಯ ದರ್ಜೆ, 4 ಚೇರ್ ಕಾರ್ ಮತ್ತು 2 ಸೆಕೆಂಡ್ ಲಗೇಜ್ ಕಮ್ ಬ್ರೇಕ್ ವ್ಯಾನ್ಗಳು ಸೇರಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ