ನುಡಿದಂತೆ ನಡೆದ ಬೊಮ್ಮಾಯಿ: ಕರ್ನಾಟಕದಲ್ಲಿ ದೇಶದ ಮೊದಲ ಹೈನುಗಾರರ ಸಹಕಾರ ಬ್ಯಾಂಕ್‌ ಸ್ಥಾಪನೆ

Published : Mar 24, 2022, 06:36 AM ISTUpdated : Mar 24, 2022, 06:37 AM IST
ನುಡಿದಂತೆ ನಡೆದ ಬೊಮ್ಮಾಯಿ: ಕರ್ನಾಟಕದಲ್ಲಿ ದೇಶದ ಮೊದಲ ಹೈನುಗಾರರ ಸಹಕಾರ ಬ್ಯಾಂಕ್‌ ಸ್ಥಾಪನೆ

ಸಾರಾಂಶ

*   ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್‌ ರಚನೆಗೆ ನಿಶಾನೆ *  ಬಜೆಟ್‌ನಲ್ಲಿ ನೀಡಿದ್ದ ಭರವಸೆ ಈಡೇರಿಸಿದ ಸಿಎಂ *  ಹಾಲು ಉತ್ಪಾದಕರಿಗೆ ಸಾಲ ನೀಡುವ ಸಹಕಾರಿ ಬ್ಯಾಂಕ್‌  

ಬೆಂಗಳೂರು(ಮಾ.24):  ಹಾಲು(Milk) ಉತ್ಪಾದಕರಿಗೆ ಹೈನುಗಾರಿಕೆ(Dairying) ಮತ್ತು ಹೈನುಗಾರಿಕೆಗೆ ಸಂಬಂಧಪಟ್ಟ ಕಸುಬು ಕೈಗೊಳ್ಳಲು ಸಾಲ ನೀಡುವುದಕ್ಕೆ ದೇಶದಲ್ಲಿ ಮೊಟ್ಟ ಮೊದಲ ‘ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್‌’(Co-Operative Bank) ಸ್ಥಾಪಿಸಲು ರಾಜ್ಯ ಸರ್ಕಾರ(Government of Karnataka) ಬುಧವಾರ ಆದೇಶಿಸಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಅವರು ಇತ್ತೀಚೆಗೆ ಮಂಡಿಸಿದ ಬಜೆಟ್‌ನಲ್ಲಿ(Budget) ಬ್ಯಾಂಕ್‌ ಸ್ಥಾಪನೆಯ ಘೋಷಣೆ ಮಾಡಿದ್ದರು. ಇದರ ಅನ್ವಯ ಬ್ಯಾಂಕ್‌ ಸ್ಥಾಪನೆಗೆ ಹಾಲು ಉತ್ಪಾದಕರ ಸಹಕಾರ ಸಂಘ, ಕರ್ನಾಟಕ ಹಾಲು ಮಹಾಮಂಡಳ ಮತ್ತು ಜಿಲ್ಲಾ ಹಾಲು ಒಕ್ಕೂಟಗಳು ಒಟ್ಟಾರೆ 260 ಕೋಟಿ ರು. ಹಾಗೂ ರಾಜ್ಯ ಸರ್ಕಾರ 100 ಕೋಟಿ ರು.ಗಳನ್ನು ಷೇರು ಬಂಡವಾಳ ರೂಪದಲ್ಲಿ ಒದಗಿಸಲಿವೆ ಎಂದು ಪ್ರಕಟಿಸಿದ್ದರು. ಬ್ಯಾಂಕ್‌ ಸ್ಥಾಪನೆ ಸಂಬಂಧ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಚರ್ಚೆ ನಡೆಸಿ ಆದೇಶ ಹೊರಡಿಸಲಾಯಿತು.

Viral News: ನಂದಿನಿ ಹಾಲಿನ ಪ್ಯಾಕೆಟ್‌ಗಳ ಮೇಲೆ ಪುನೀತ್‌ ರಾಜಕುಮಾರ್‌ ಅವರ ಭಾವಚಿತ್ರ.?

ಬ್ಯಾಂಕಿನ ಸದಸ್ಯತ್ವ ಮತ್ತು ಷೇರಿನ ಅವಕಾಶದಂತೆ ಬ್ಯಾಂಕ್‌ ಸ್ಥಾಪಿಸಿದ ನಂತರ ರಾಜ್ಯದ ಹಾಲು ಉತ್ಪಾದಕರಿಗೆ ಸರಳ ನಿಬಂಧನೆಗಳೊಂದಿಗೆ ಹೈನುಗಾರಿಕೆ ಮತ್ತು ಸಂಬಂಧಿತ ಕಸುಬು ಕೈಗೊಳ್ಳಲು ಸಾಲ ವಿತರಿಸಲು ಕ್ರಮ ಕೈಗೊಳ್ಳಬೇಕು. ಬ್ಯಾಂಕ್‌ ರಚಿಸಲು ಯೋಜನಾ ವರದಿ, ಉಪ ನಿಯಮಗಳನ್ನು ರಚಿಸಿ ಬ್ಯಾಂಕ್‌ ಸ್ಥಾಪನೆಗೆ ಸಹಕಾರ ಸಂಘಗಳ ನಿಬಂಧಕರ ಮೂಲಕ ಪ್ರಸ್ತಾವನೆ ಸಲ್ಲಿಸಲು ಆಡಳಿತಾತ್ಮಕ ಕ್ರಮ ವಹಿಸುವಂತೆ ಕೆಎಂಎಫ್‌(KMF) ವ್ಯವಸ್ಥಾಪಕ ನಿರ್ದೇಶಕರಿಗೆ ಆದೇಶದಲ್ಲಿ ಸೂಚಿಸಲಾಗಿದೆ.

ಯಾರು ಸದಸ್ಯರು?:

ಬ್ಯಾಂಕಿನ ಸದಸ್ಯತ್ವ ಪಡೆಯಲು ನಾಲ್ಕು ವರ್ಗಗಳನ್ನಾಗಿ ವಿಂಗಡಿಸಲಾಗಿದೆ. ‘ಎ’ ವರ್ಗದಲ್ಲಿ ರಾಜ್ಯದಲ್ಲಿನ ಹಾಲು ಉತ್ಪಾದಕ ಸಹಕಾರ ಸಂಘಗಳ ಸದಸ್ಯರು ಬರಲಿದ್ದು, 1000 ರು. ಮೌಲ್ಯದ ಕನಿಷ್ಠ 1 ಷೇರು ಪಡೆಯಬೇಕು. ‘ಬಿ’ ವರ್ಗದ ಸದಸ್ಯರಾಗಿ ರಾಜ್ಯದಲ್ಲಿನ ಪ್ರತಿ ಹಾಲು ಉತ್ಪಾದಕರ ಸಹಕಾರ ಸಂಘಗಳು ಬರಲಿದ್ದು, 10,000 ರು. ಮೌಲ್ಯದ ಕನಿಷ್ಠ 1 ಷೇರು ಪಡೆಯಬೇಕು. ‘ಸಿ’ ವರ್ಗದಲ್ಲಿ ಕರ್ನಾಟಕ ರಾಜ್ಯದ ಜಿಲ್ಲಾ ಸಹಕಾರಿ ಹಾಲು ಒಕ್ಕೂಟಗಳು 1 ಕೋಟಿ ರು. ಮೌಲ್ಯದ ಕನಿಷ್ಠ 1 ಷೇರು ಪಡೆಯಬೇಕು. ‘ಡಿ’ ವರ್ಗದಲ್ಲಿ ಕರ್ನಾಟಕ ಹಾಲು ಮಹಾಮಂಡಳ ಸದಸ್ಯತ್ವದ 50 ಕೋಟಿ ರು. ಮೌಲ್ಯದ ಕನಿಷ್ಠ 1 ಷೇರು ಪಡೆಯಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

14497 ಸಂಘ, 24.67 ಲಕ್ಷ ಹಾಲು ಉತ್ಪಾದಕರು:

ದೇಶದಲ್ಲಿ(India) ಸಹಕಾರಿ ಹೈನು ಉದ್ಯಮದಲ್ಲಿ ಎರಡನೇ ಸ್ಥಾನವನ್ನು ಕೆಎಂಎಫ್‌ ಹೊಂದಿದ್ದು, ಪ್ರಸ್ತುತ 14 ಜಿಲ್ಲಾ ಸಹಕಾರಿ ಹಾಲು ಒಕ್ಕೂಟಗಳನ್ನು ಒಳಗೊಂಡಿದೆ. ಗ್ರಾಮೀಣ ಮಟ್ಟದಲ್ಲಿ 14497 ಹೆಚ್ಚು ಹಾಲು ಉತ್ಪಾದಕರ ಸಹಕಾರ ಸಂಘಗಳನ್ನು ಹೊಂದಿದೆ. ಒಟ್ಟು 24.67 ಲಕ್ಷ ಹಾಲು ಉತ್ಪಾದಕರು ಸದಸ್ಯರಾಗಿದ್ದಾರೆ.

ಹಾಲಿನ ದರ ಹೆಚ್ಚಳ: ಸಿಎಂ ಬೊಮ್ಮಾಯಿ ಹೇಳಿದ್ದಿಷ್ಟು

ಹಾಲಿನ ದರ ಹೆಚ್ಚಳ ಬಗ್ಗೆ KMF ಅಧ್ಯಕ್ಷರು ಹೇಳಿದ್ದೇನು?

ಬೆಳಗಾವಿ: ಕೆಎಂಎಫ್ ನಂದಿನಿ ಹಾಲಿನ(Nandini Milk) ದರ ಹೆಚ್ಚಳಕ್ಕೆ 14 ಜಿಲ್ಲೆಗಳ ಹಾಲಿನ ಒಕ್ಕೂಟದವರು ಒತ್ತಡ ಮಾಡ್ತಿದ್ದಾರೆ. ಹಾಲಿನ ದರ ಹೆಚ್ಚಳ ಮಾಡಬೇಕು ಅದನ್ನೇ ರೈತರಿಗೆ ನೀಡ್ತೀವಿ ಅಂತಾ ಹೇಳುತ್ತಿದ್ದಾರೆ. ಅದನ್ನೇ ನಾವು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಳಿ ಮನವಿ ಮಾಡಿದ್ದೇವೆ. ಸಾಧಕ ಬಾಧಕ ನೋಡಿ ಬಳಿಕ ನಿರ್ಧಾರ ತಗೆದುಕೊಳ್ಳೋಣ ಅಂತಾ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳುತ್ತಿದ್ದಾರೆ‌ ಅಂತ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ(Balachandra Jarkiholi) ತಿಳಿಸಿದ್ದರು.

ಮಾ. 19 ರಂದು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ್ದ ಅವರು, ಬೇಸಿಗೆ ಕಾಲದಲ್ಲಿ ಹಾಲು ಕಡಿಮೆ ಬರುತ್ತೆ ಹೀಗಾಗಿ ಹೆಚ್ಚಿನ ದರ ಕೊಟ್ಟರೆ ರೈತರಿಗೆ ಅನುಕೂಲ ಆಗುತ್ತೆ. ಬೆಳಗಾವಿಯಲ್ಲಿ(Belagavi) ಆಕಳು ಹಾಲು 23 ರೂಪಾಯಿಯಷ್ಟು ಇತ್ತು 25 ರೂಪಾಯಿ ಮಾಡಿದ್ದೇವೆ‌. ಎಮ್ಮೆ ಹಾಲು 36 ರೂಪಾಯಿ ಇದ್ದದ್ದನ್ನು 38 ರೂಪಾಯಿಗಳಷ್ಟು ಮಾಡಿದ್ದೇವೆ‌‌. ಇಡೀ ಭಾರತದಲ್ಲೇ(India) ನಾವು ಅತಿ ಕಡಿಮೆ ದರದಲ್ಲಿ ಹಾಲು ಮಾರುತ್ತೇವೆ‌‌. ಬೇರೆಡೆ ಹಾಲಿನ ದರ ಹೆಚ್ಚಿದೆ. ಗ್ರಾಹಕರಿಗೆ ಹೊರೆ ಆಗದ ಹಾಗೇ ಹಾಲಿನ ದರ ಹೆಚ್ಚು ಮಾಡಿದ್ರೆ ರೈತರಿಗೆ(Farmers) ಅನುಕೂಲ ಆಗುತ್ತೆ‌. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಏನೂ ನಿರ್ಧಾರ ತಗೆದುಕೊಳ್ಳುತ್ತಾರೆ ನೋಡಿ ನಾವು ನಿರ್ಣಯ ಕೈಗೊಳ್ಳುತ್ತೇವೆ' ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ವರುಣಾ ಜನತೆಯ ಋಣ ತೀರಿಸಲು ಸಾಧ್ಯವಿಲ್ಲ, ಆದರೂ ಶ್ರಮಿಸುವೆ: ಯತೀಂದ್ರ ಸಿದ್ದರಾಮಯ್ಯ
ಮಹಾಮೇಳಾವ್ ಅನುಮತಿ ನಿರಾಕರಣೆ: ನಾಡದ್ರೋಹಿ ಎಂಇಎಸ್ ‌ಪುಂಡರಿಗೆ ಶಾಕ್ ಕೊಟ್ಟ ಬೆಳಗಾವಿ ಜಿಲ್ಲಾಡಳಿತ