
ಬೆಂಗಳೂರು (ಏ.08): ಸೈಬರ್ ಅಪರಾಧ ಕೃತ್ಯಗಳಿಗೆ ಕಡಿವಾಣ ಹಾಗೂ ಆ ಪ್ರಕರಣಗಳ ತನಿಖೆ ಸಲುವಾಗಿ ಪ್ರತ್ಯೇಕವಾಗಿ ಸ್ಥಾಪಿಸಿರುವ ಸೈಬರ್ ತನಿಖಾ ಘಟಕಕ್ಕೆ ರಾಜ್ಯ ಸರ್ಕಾರ ಚಾಲನೆ ನೀಡಿದೆ. ಈ ಘಟಕದ ಡಿಐಜಿಯಾಗಿ ಭೂಷಣ್ ಬೊರೆಸೆ ಅವರು ನೇಮಕಗೊಂಡಿದ್ದು, ಹಂತ ಹಂತವಾಗಿ ಐಜಿಪಿ ಹಾಗೂ ಎಸ್ಪಿ ಸೇರಿದಂತೆ ಅಧಿಕಾರಿ-ಸಿಬ್ಬಂದಿ ನಿಯೋಜಿಸಲು ಸರ್ಕಾರ ಮುಂದಾಗಿದೆ. ಘಟಕದ ಮುಖ್ಯಸ್ಥರಾಗಿ ಪ್ರಣವ್ ಮೊಹಂತಿ ಅವರಿಗೆ ಹೊಣೆಗಾರಿಕೆ ನೀಡಲಾಗಿದ್ದು, ಈ ಬಗ್ಗೆ ಅಧಿಕೃತ ಆದೇಶ ಹೊರ ಬೀಳಬೇಕಿದೆ. ಸೈಬರ್‌ಅಪರಾಧ ಕೃತ್ಯಗಳು ಹೆಚ್ಚಾದ ಹಿನ್ನೆಲೆಯಲ್ಲಿ ಅವುಗಳ ತನಿಖೆಗೆ ಪ್ರತ್ಯೇಕ ಘಟಕ ಸ್ಥಾಪಿಸುವಂತೆ ಸರ್ಕಾರಕ್ಕೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಪ್ರಸ್ತಾವನೆ ಸಲ್ಲಿಸಿದ್ದರು. ಈ ಪ್ರಸ್ತಾವನೆಗೆ ಸರ್ಕಾರ ಹಸಿರು ನಿಶಾನೆ ತೋರಿದೆ.
372 ಕೋಟಿ ಅನುದಾನ ಕೋರಿಕೆ: ಸೈಬರ್ ತನಿಖಾ ಘಟಕಕ್ಕೆ ಸ್ಥಾಪನೆಗೆ 272 ಕೋಟಿ ಅನುದಾನ ನೀಡುವಂತೆ ಸರ್ಕಾರಕ್ಕೆ ಪೊಲೀಸ್ ಇಲಾಖೆ ಕೋರಿಕೆ ಸಲ್ಲಿಸಿದೆ. ಆದರೆ ಮೊದಲ ಹಂತದಲ್ಲಿ ಘಟಕಕ್ಕೆ ಕೇವಲ 5 ಕೋಟಿ ಮಾತ್ರ ಬಿಡುಗಡೆಗೆ ಸರ್ಕಾರ ಸಮ್ಮಿತಿಸಿದೆ. ಸೈಬರ್‌ಲ್ಯಾಬ್, ತಾಂತ್ರಿಕ ಉಪಕರಣಗಳ ಖರೀದಿಗೆ ನೆರವು ಕೋರಲಾಗಿದೆ.
ಶಾಂತಿ ನೆಲೆಸಲು ಕೆಲಸ ಮಾಡಿ: ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸರಿಯಾಗಿದ್ದಾಗ ಹೆಚ್ಚು ಬಂಡವಾಳ ಹರಿದು ಬರುತ್ತದೆ. ಬಂಡವಾಳ ಬಂದರೆ ಉದ್ಯೋಗ ಸೃಷ್ಟಿಯಾಗಿ ನಿರುದ್ಯೋಗ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಅನುಕೂಲವಾಗುತ್ತದೆ. ಹೀಗಾಗಿ ಪೊಲೀಸರು ಸಮಾಜದಲ್ಲಿ ಶಾಂತಿ, ನೆಮ್ಮದಿ ಹಾಗೂ ನಿರ್ಭಯದ ವಾತಾವರಣ ನಿರ್ಮಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಗಂಡಸರಿಗೆ ಸೀರೆ ಉಡಿಸಿ ನರೇಗಾ ಕೂಲಿ ವಂಚನೆ: ಆರೋಪಿ ಅಮಾನತು
ಕೋರಮಂಗಲದ ಕೆಎಸ್‌ಆರ್‌ಪಿ ಕವಾಯತು ಮೈದಾನದಲ್ಲಿ ಬುಧವಾರ ನಡೆದ ‘ಪೊಲೀಸ್ ಧ್ವಜ ದಿನಾಚರಣೆ’ ಹಾಗೂ 472 ಪೊಲೀಸ್ ಅಧಿಕಾರಿ-ಸಿಬ್ಬಂದಿಗೆ ‘ಮುಖ್ಯಮಂತ್ರಿ ಅವರ ಪದಕ’ ವಿತರಣೆ ಸಮಾರಂಭದಲ್ಲಿ ಮಾತನಾಡಿ, ಕಾನೂನು ಮತ್ತು ಸುವ್ಯವಸ್ಥೆ, ಹೂಡಿಕೆ, ಅಭಿವೃದ್ಧಿ, ಉದ್ಯೋಗ ಸೃಷ್ಟಿ ಒಂದಕ್ಕೊಂದು ಸಂಬಂಧವಿದೆ. ಕರ್ನಾಟಕ ಮುಂದುವರೆದ ರಾಜ್ಯಗಳಲ್ಲಿ ಮುಂಚೂಣಿಯಲ್ಲಿದೆ. ರಾಜ್ಯ ಅಭಿವೃದ್ಧಿ ಪಥದತ್ತ ಸಾಗುವಲ್ಲಿ ಪೊಲೀಸ್ ಇಲಾಖೆ ಮಹತ್ತರ ಪಾತ್ರ ವಹಿಸಿದೆ ಎಂದು ಮೆಚ್ಚುಗೆ ಸೂಚಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ