ಬೆಂಗಳೂರು: ದೇಶದ ಅತಿ ಎತ್ತರದ ಅಂಬೇಡ್ಕರ್ ಪ್ರತಿಮೆ ನಿರ್ಮಾಣಕ್ಕೆ ಸಿಎಂ ಪಣ!

Published : Apr 15, 2025, 04:23 AM ISTUpdated : Apr 15, 2025, 05:13 AM IST
ಬೆಂಗಳೂರು: ದೇಶದ ಅತಿ ಎತ್ತರದ ಅಂಬೇಡ್ಕರ್ ಪ್ರತಿಮೆ ನಿರ್ಮಾಣಕ್ಕೆ ಸಿಎಂ ಪಣ!

ಸಾರಾಂಶ

ಬೆಂಗಳೂರು ನಗರದಲ್ಲಿ ಡಾ. ಬಿ.ಆರ್‌. ಅಂಬೇಡ್ಕರ್ ಮ್ಯೂಸಿಯಂ ಹಾಗೂ ದೇಶದಲ್ಲೇ ಅತಿ ಎತ್ತರವಾದ ಅಂಬೇಡ್ಕರ್‌ ಪ್ರತಿಮೆಯನ್ನು ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಜತೆಗೆ ಮೈಸೂರು ವಿಶ್ವವಿದ್ಯಾಲಯದಲ್ಲಿ ಸಂವಿಧಾನ ಪೀಠ ಸ್ಥಾಪನೆ ಮಾಡುವುದಾಗಿ ಹೇಳಿದ್ದಾರೆ.

ಬೆಂಗಳೂರು (ಏ.15): ಬೆಂಗಳೂರು ನಗರದಲ್ಲಿ ಡಾ. ಬಿ.ಆರ್‌. ಅಂಬೇಡ್ಕರ್ ಮ್ಯೂಸಿಯಂ ಹಾಗೂ ದೇಶದಲ್ಲೇ ಅತಿ ಎತ್ತರವಾದ ಅಂಬೇಡ್ಕರ್‌ ಪ್ರತಿಮೆಯನ್ನು ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಜತೆಗೆ ಮೈಸೂರು ವಿಶ್ವವಿದ್ಯಾಲಯದಲ್ಲಿ ಸಂವಿಧಾನ ಪೀಠ ಸ್ಥಾಪನೆ ಮಾಡುವುದಾಗಿ ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ಅಂಬೇಡ್ಕರ್‌ ಜಯಂತಿ ಆಚರಣೆ ವೇಳೆ ಮಾತನಾಡಿದ ಅವರು, ಆಂಧ್ರಪ್ರದೇಶದ ಮಾದರಿಯಲ್ಲಿ ಬೆಂಗಳೂರಿನಲ್ಲಿ ಅಂಬೇಡ್ಕರ್‌ ಮ್ಯೂಸಿಯಂ ಮಾಡಲಾಗುವುದು. ಅಲ್ಲೇ ದೇಶದಲ್ಲೇ ಅತಿ ದೊಡ್ಡದಾದ ಅಂಬೇಡ್ಕರ್‌ ಪ್ರತಿಮೆ ಮಾಡಲಾಗುವುದು. ಅಂಬೇಡ್ಕರ್‌ ಅವರಿಗೆ ನಾವು ಎಷ್ಟು ಮಾಡಿದರೂ ಕಡಿಮೆಯೇ. ಅವರಿಗೆ ಕೃತಜ್ಞತೆ ಸಲ್ಲಿಸುವ ಕೆಲಸವನ್ನು ನಮ್ಮ ಸರ್ಕಾರ ನಿರಂತರವಾಗಿ ಮಾಡುತ್ತದೆ ಎಂದು ತಿಳಿಸಿದರು.

ಇದನ್ನೂ ಓದಿ: ಅಂಬೇಡ್ಕರ್‌ ಕನಸನ್ನು ರಾಜ್ಯದಲ್ಲಿ ನಾವು ನನಸು ಮಾಡುತ್ತಿದ್ದೇವೆ: ಸಿಎಂ ಸಿದ್ದರಾಮಯ್ಯ

ಆಂಧ್ರಪ್ರದೇಶದ ವಿಜಯವಾಡದಲ್ಲಿ ದೇಶ ಹಾಗೂ ವಿಶ್ವದ ಅತಿದೊಡ್ಡ ಅಂಬೇಡ್ಕರ್‌ ಪ್ರತಿಮೆ ಇದೆ. ಆ ಪ್ರತಿಮೆ 206 ಅಡಿ ಎತ್ತರವಿದೆ. ಈ ಪೈಕಿ ಪ್ರತಿಮೆ 125 ಅಡಿ ಎತ್ತರವಿದ್ದರೆ, ಅದರ ಸ್ತಂಭ 85 ಅಡಿ ಎತ್ತರ ಹೊಂದಿದೆ..

  • ಮೈಸೂರು ವಿವೀಲಿ ಅಂಬೇಡ್ಕರ್‌ ಸಂವಿಧಾನ ಪೀಠ
  • ಆಂಧ್ರ ಮಾದರಿ ಅಂಬೇಡ್ಕರ್‌ ಮ್ಯೂಸಿಯಂ: ಸಿದ್ದು
  • ಈಗ ಆಂಧ್ರದ ವಿಜಯವಾಡದಲ್ಲಿ ದೇಶ ಹಾಗೂ ವಿಶ್ವದ ಅತಿದೊಡ್ಡ ಅಂಬೇಡ್ಕರ್‌ ಪ್ರತಿಮೆ
  • ಆ ಪ್ರತಿಮೆ ಒಟ್ಟು ಎತ್ತರ 206 ಅಡಿ. ಇದರಲ್ಲಿ ಪ್ರತಿಮೆ ಎತ್ತರ 125 ಅಡಿ, ಸ್ತಂಭ 85 ಅಡಿ
  • ಈಗ ಕರ್ನಾಟಕದಲ್ಲಿ ಇದಕ್ಕಿಂತ ಹೆಚ್ಚು ಎತ್ತರದ ಪ್ರತಿಮೆ ನಿರ್ಮಾಣ: ಸಿಎಂ ಘೋಷಣೆ
  • ಆಂಧ್ರದ ಮಾದರಿಯಲ್ಲೇ ಬೆಂಗಳೂರಲ್ಲಿ ಅಂಬೇಡ್ಕರ್‌ ಮ್ಯೂಸಿಯಂ ನಿರ್ಮಾಣಕ್ಕೆ ಪಣ

ಅಂಬೇಡ್ಕರ್ ಆಶಯ ಜಾರಿಗಾಗಿ ಗ್ಯಾರಂಟಿ ಯೋಜನೆ:

ಅಂಬೇಡ್ಕರ್ ಅವರ ಆಶಯಗಳ ಜಾರಿಗಾಗಿ ನಾವು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ನಮ್ಮ ಜನರ ಕೊಳ್ಳುವ ಶಕ್ತಿಯನ್ನು ಹೆಚ್ಚಿಸಿದ್ದೇವೆ. ಅವರು ಇಡೀ ದೇಶದ ಶಿಕ್ಷಣ ವಂಚಿತ ನೂರಾರು ಜಾತಿ ಸಮುದಾಯಗಳಿಗೆ ಶಿಕ್ಷಣ ಸಿಗಲು ಕಾರಣಕರ್ತರಾದರು. ಮುಸಲ್ಮಾನರು ಶಿಕ್ಷಣದಿಂದ ವಂಚಿತರಾಗಬಾರದು, ಅವಕಾಶಗಳಿಂದ ವಂಚಿತರಾಗಬಾರದು. ಹೀಗಾಗಿ ಸಂವಿಧಾನ ಹೇಳಿದಂತೆ ನಾವು ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರಿಗೆ ಅವಕಾಶ ಕಲ್ಪಿಸುತ್ತಿದ್ದೇವೆ. ಇಷ್ಟಕ್ಕೇ ಕಾಂಗ್ರೆಸ್ ಬರೀ ಮುಸಲ್ಮಾನರನ್ನು ಓಲೈಸುತ್ತಿದೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಬಹುತ್ವದ ದೇಶ ನಿರ್ಮಾಣಕ್ಕೆ, ಭ್ರಾತೃತ್ವದ ಸಮಾಜ ನಿರ್ಮಾಣಕ್ಕೆ ಅಂಬೇಡ್ಕರ್ ಅವರು ಕೊಟ್ಟ ಮಾರ್ಗದಲ್ಲಿ ನಮ್ಮ ಸರ್ಕಾರ ನಡೆಯುತ್ತಿದೆ. ಸಾರಾಯಿ ಬೇಡ, ಶಾಲೆ ಬೇಕು ಎನ್ನುವುದು ದಲಿತ ಸಂಘರ್ಷ ಸಮಿತಿ ಹೋರಾಟದ ಘೋಷಣೆಯಾಗಿತ್ತು. ನಾನು ಉಪಮುಖ್ಯಮಂತ್ರಿ ಆದ ತಕ್ಷಣ ಊರು ಊರಲ್ಲಿ ವಸತಿ ಶಾಲೆ ಆರಂಭಿಸಿದೆ. ಮುಂದಿನ ಆರ್ಥಿಕ ವರ್ಷದ ಕೊನೆಯ ವೇಳೆಗೆ ರಾಜ್ಯದ ಎಲ್ಲಾ ಹೋಬಳಿಗಳಲ್ಲೂ ವಸತಿ ಶಾಲೆ ತೆರೆದಿರುತ್ತವೆ ಎಂದು ಹೇಳಿದರು.

ಇದನ್ನೂ ಓದಿ: ಬಾಬಾ ಸಾಹೇಬ ಅಂಬೇಡ್ಕರರ ಪ್ರತಿ ನಡೆಯಲ್ಲೂ ದೇಶಪ್ರೇಮ ಕಿಚ್ಚು

ಅಂಬೇಡ್ಕರ್‌ರನ್ನು ನೆಹರೂ ವಿರೋಧಿಸಲಿಲ್ಲ:

ಅಂಬೇಡ್ಕರ್ ಅವರನ್ನು ನೆಹರೂ ವಿರೋಧಿಸಲಿಲ್ಲ. ಹಾಗಿದ್ದರೆ, ಅಂಬೇಡ್ಕರ್ ಅವರನ್ನು ಸಂವಿಧಾನ ಬರೆಯಲು ಆಯ್ಕೆ ಮಾಡುತ್ತಿರಲಿಲ್ಲ. ಹಿಂದೂ ಕೋಡ್ ಬಿಲ್ ತಂದಾಗ ನೆಹರೂ ಅದರ ಪರವಾಗಿಯೇ ಇದ್ದರು. ನಮ್ಮಲ್ಲಿರುವ ಕೆಲವು ಶಕ್ತಿಗಳು ನೆಹರೂ ಅವರು ಅದನ್ನು ಜಾರಿ ಮಾಡಲು ಬಿಡಲಿಲ್ಲ. ಆದರೆ ಹಿಂದೂ ಕೋಡ್ ಬಿಲ್‌ನಲ್ಲಿರುವ ಅಂಶಗಳನ್ನು ನೆಹರೂ ಅವರು ಅವರ ಅಧಿಕಾರದ ಅವಧಿಯಲ್ಲಿ ಜಾರಿ ಮಾಡುವ ಪ್ರಯತ್ನ ಮಾಡಿದ್ದರು ಎಂದು ಮುಖ್ಯಮಂತ್ರಿಯವರು ಇದೇ ವೇಳೆ ಹೇಳಿದರು.

ಅಂಬೇಡ್ಕರ್ ಅವರು ದೇಶ ಕಂಡ ಮಹಾನ್ ನಾಯಕರು ಹಾಗೂ ಮಾನವತಾವಾದಿ. ಸರ್ಕಾರ ಅತ್ಯಂತ ಗೌರವ, ನಮ್ರತೆಯಿಂದ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮ ದಿನವನ್ನು ಆಚರಿಸುತ್ತಿದೆ. ಅಂಬೇಡ್ಕರ್ ಅವರು ಕೇವಲ ದಲಿತರ ನಾಯಕರಾಗಿರದೇ ಸಮಾಜದಲ್ಲಿ ಶೋಷಿತರು, ಅನ್ಯಾಯ ಹಾಗೂ ದೌರ್ಜನ್ಯಕ್ಕೆ ಒಳಗಾದವರ ಪರವಾಗಿ ಅನ್ಯಾಯದಿಂದ ಮುಕ್ತಿ ಪಡೆಯಬೇಕೆಂದು ತಮ್ಮ ಬದುಕನ್ನೇ ಮುಡಿಪಾಗಿಟ್ಟಿದ್ದರು ಎಂದು ಸ್ಮರಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌