
ಬೆಂಗಳೂರು (ಫೆ.28): ಇತ್ತೀಚೆಗೆ ನಡೆಸಲಾದ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಆಗುರುವ ಹೂಡಿಕೆ ಒಡಂಬಡಿಕೆಗಳ ಪರುಣಾಮಕಾರಿ ಅನುಷ್ಠಾನಕ್ಕೆ ಸಮರೋಪಾದಿಯಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಅಧಿಕಾರಿಗಳಿಗೆ ಕಟ್ಟುನಿಟ್ಟು ನಿರ್ದೇಶನ ನೀಡಿದ್ದಾರೆ.
ಈ ಸಂಬಂಧವಾಗಿ ಶುಕ್ರವಾರ ಅವರು ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ, ಕೆಐಎಡಿಬಿ, ಉದ್ಯೋಗ ಮಿತ್ರ, ಭುಸ್ವಾಧೀನ ವಿಭಾಗ ಮತ್ತು ಇನ್ವೆಸ್ಟ್ ಕರ್ನಾಟಕ ಫೋರಂನ ಉನ್ನತ ಅಧಿಕಾರಿಗಳ ಜತೆ ಇಲ್ಲಿನ ಖನಿಜ ಭವನದಲ್ಲಿ ಮಹತ್ವದ ಸಭೆ ನಡೆಸಿದರು. ಹೂಡಿಕೆದಾರರು ಭಾರೀ ನಿರೀಕ್ಷೆಯೊಂದಿಗೆ ಒಡಂಬಡಿಕೆಗಳನ್ನು ಮಾಡಿಕೊಂಡಿದ್ದಾರೆ. ಆದ್ದರಿಂದ ಅಧಿಕಾರಿಗಳು ಭೂಮಿಯ ಲಭ್ಯತೆ, ಸ್ವಾಧೀನ ಪ್ರಕ್ರಿಯೆ, ಇರಬಹುದಾದ ವಿವಾದಗಳ ಇತ್ಯರ್ಥ, ಈಗಾಗಲೇ ಸರಕಾರದ ಮಟ್ಟದಲ್ಲಿ ಇರುವ ಭೂಮಿ ಇವುಗಳ ಬಗ್ಗೆ ತಿಳಿವಳಿಕೆ ಹೊಂದಿರಬೇಕು ಎಂದು ಹೇಳಿದರು.
ಸುಗಮ ಹೂಡಿಕೆಗೆ ಕೈಗಾರಿಕಾ ಇಲಾಖೆಯು ಉದ್ಯಮಿಸ್ನೇಹಿ ಏಕಗವಾಕ್ಷಿ ವ್ಯವಸ್ಥೆಯನ್ನು ಕೂಡ ರೂಪಿಸಿದೆ. ಈ ಬಗ್ಗೆ ಕೂಡ ಸಂಬಂಧಿಸಿದ ಉಳಿದ ಇಲಾಖೆಗಳ ಅಧಿಕಾರಿಗಳಲ್ಲೂ ಜಾಗೃತಿ ಮೂಡಿಸಬೇಕು. ಕೈಗಾರಿಕಾ ಯೋಜನೆಗಳ ಜತೆ ಕಂದಾಯ, ಅರಣ್ಯ, ಇಂಧನ, ನಗರಾಭಿವೃದ್ಧಿ, ಮಾಲಿನ್ಯ ನಿಯಂತ್ರಣ ಮಂಡಲಿ, ಬಿಡಬ್ಲ್ಯುಎಸ್ಎಸ್ಬಿ ಮುಂತಾದ ಇಲಾಖೆಗಳು ನಿಕಟ ಸಂಬಂಧ ಹೊಂದಿವೆ. ಈ ಇಲಾಖೆಗಳಿಂದ ಕೂಡ ಕೈಗಾರಿಕಾ ಯೋಜನೆಗಳಿಗೆ ಅನುಮತಿ ಅಗತ್ಯವಾಗಿದೆ. ಇವೆಲ್ಲವುಗಳ ಜೊತೆ ಕೈಗಾರಿಕಾ ಇಲಾಖೆಯ ಅಧಿಕಾರಿಗಳು ಸಮನ್ವಯ ಸಾಧಿಸಬೇಕು ಎಂದು ಸೂಚಿಸಿದರು.
ಇದನ್ನೂ ಓದಿ: ತಾರತಮ್ಯ ಬಿಡಿ, ರಸ್ತೆಗುಂಡಿ ಮುಚ್ಚೋದಕ್ಕಾದ್ರೂ ಶಾಸಕರಿಗೆ ₹120 ಕೋಟಿ ಅನುದಾನ ಕೊಡಿ; ಆರ್. ಅಶೋಕ ಆಗ್ರಹ
ಸಭೆಯಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಒ ಡಾ.ಮಹೇಶ್, ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ದೊಡ್ಡ ಬಸವರಾಜು, ಐಕೆಎಫ್ ಹೆಚ್ಚುವರಿ ನಿರ್ದೇಶಕರಾದ ಶಿವಕುಮಾರ, ಜಗದೀಶ ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಇದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ