
ಬೆಂಗಳೂರು (ಡಿ.15): ಗೂಂಡಾ ಕಾಯ್ದೆಯಡಿ ಬಂಧಿತ ಆರೋಪಿಗೆ ಬಂಧನದ ಆದೇಶದ ದಾಖಲೆಗಳನ್ನು ಆತನಿಗೆ ತಿಳಿದಿರುವ ಭಾಷೆಯಲ್ಲಿ ಒದಗಿಸುವುದು ಕಡ್ಡಾಯ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.
ಗೂಂಡಾ ಕಾಯ್ದೆಯಡಿ ತನ್ನ ಪುತ್ರ ರೋಷನ್ ಜಮೀರ್ ಅನ್ನು ಬಂಧಿಸಿದ ಪೊಲೀಸರ ಕ್ರಮ ಪ್ರಶ್ನಿಸಿ ತಂದೆ ಮೊಹಮ್ಮದ್ ಶಫೀವುಲ್ಲಾ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಸೋಮಶೇಖರ್ ಅವರ ನೇತೃತ್ವದ ವಿಭಾಗೀಯ ಪೀಠ ಸ್ಪಷ್ಟನೆ ನೀಡಿದೆ.
ಬೆಳಗಾವಿ ಕೇಸ್ ದ್ರೌಪದಿ ವಸ್ತ್ರಾಪಹರಣಕ್ಕಿಂತಲೂ ಕ್ರೂರ: ಹೈಕೋರ್ಟ್
ಅಲ್ಲದೆ, ರೋಷನ್‌ಗೆ ಅರೇಬಿಕ್ ಮತ್ತು ಉರ್ದು ಭಾಷೆ ಮಾತ್ರ ತಿಳಿದಿದೆ. ಆ ಭಾಷೆಯಲ್ಲಿ ಬಂಧನದ ಆದೇಶದ ದಾಖಲೆಗಳನ್ನು ಪೊಲೀಸ್ ಅಧಿಕಾರಿಗಳು ಒದಗಿಸಿಲ್ಲ ಎಂಬ ಕಾರಣಕ್ಕೆ ರೋಷನ್ ಜಮೀರ್ ಬಿಡುಗಡೆಗೆ ಹೈಕೋರ್ಟ್ ಆದೇಶಿಸಿದೆ.
ಗೂಂಡಾ ಕಾಯ್ದೆಯಡಿ ಬಂಧನಕ್ಕೆ ಒಳಗಾದ ಆರೋಪಿಯು ತನ್ನ ಬಂಧನದ ಆದೇಶ ವಿರುದ್ಧ ಸಕ್ಷಮ ಪ್ರಾಧಿಕಾರಕ್ಕೆ ಮನವಿ ಸಲ್ಲಿಸಲು ಅವಕಾಶವಿದೆ. ಅದಕ್ಕಾಗಿ ಬಂಧನ ಪ್ರಾಧಿಕಾರವು ಆರೋಪಿಗೆ ತಿಳಿಸಿರುವ ಭಾಷೆಯಲ್ಲಿ ಬಂಧನದ ಆದೇಶದ ಪ್ರತಿ ಹಾಗೂ ಸಂಬಂಧಪಟ್ಟ ಇತರೆ ದಾಖಲೆಗಳನ್ನು ಒದಗಿಸಬೇಕಾಗುತ್ತದೆ ಎಂದಿತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ