ಅಂಬೇಡ್ಕರ್‌ರನ್ನ ಸೋಲಿಸಿದ್ದು ಆರೆಸ್ಸೆಸ್ ಎಂದು ಸಾಬೀತುಪಡಿಸಿದ್ರೆ ನಿವೃತ್ತಿ, ಕಾಂಗ್ರೆಸ್‌ಗೆ ಚಲವಾದಿ ಸವಾಲು!

Published : May 05, 2025, 11:35 AM ISTUpdated : May 05, 2025, 11:36 AM IST
ಅಂಬೇಡ್ಕರ್‌ರನ್ನ ಸೋಲಿಸಿದ್ದು ಆರೆಸ್ಸೆಸ್ ಎಂದು ಸಾಬೀತುಪಡಿಸಿದ್ರೆ ನಿವೃತ್ತಿ, ಕಾಂಗ್ರೆಸ್‌ಗೆ ಚಲವಾದಿ ಸವಾಲು!

ಸಾರಾಂಶ

 ಬಾಬಾ ಸಾಹೇಬ್‌  ಅಂಬೇಡ್ಕರ್‌ ಅವರನ್ನು ಚುನಾವಣೆಯಲ್ಲಿ ಕಾಂಗ್ರೆಸ್‌ ಪರಾಭವಗೊಳಿಸಿಲ್ಲ ಎಂದು ಕಾಂಗ್ರೆಸ್‌ ನಾಯಕರು ಸುಳ್ಳು ಹೇಳುತ್ತಿದ್ದಾರೆ. ಈ ಮಾತನ್ನು ಈ ನಾಯಕರು ಸಾಬೀತುಪಡಿಸಿದರೆ ವಿಧಾನ ಪರಿಷತ್‌ ವಿಪಕ್ಷ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿ ರಾಜಕೀಯ ನಿವೃತ್ತಿ ಘೋಷಿಸುತ್ತೇನೆ ಎಂದು ಛಲವಾದಿ ನಾರಾಯಣ ಸ್ವಾಮಿ ಸವಾಲು ಹಾಕಿದ್ದಾರೆ.

ಬೆಂಗಳೂರು : ಬಾಬಾ ಸಾಹೇಬ್‌  ಅಂಬೇಡ್ಕರ್‌ ಅವರನ್ನು ಚುನಾವಣೆಯಲ್ಲಿ ಕಾಂಗ್ರೆಸ್‌ ಪರಾಭವಗೊಳಿಸಿಲ್ಲ ಎಂದು ಕಾಂಗ್ರೆಸ್‌ ನಾಯಕರು ಸುಳ್ಳು ಹೇಳುತ್ತಿದ್ದಾರೆ. ಈ ಮಾತನ್ನು ಈ ನಾಯಕರು ಸಾಬೀತುಪಡಿಸಿದರೆ ವಿಧಾನ ಪರಿಷತ್‌ ವಿಪಕ್ಷ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿ ರಾಜಕೀಯ ನಿವೃತ್ತಿ ಘೋಷಿಸುತ್ತೇನೆ ಎಂದು ಛಲವಾದಿ ನಾರಾಯಣ ಸ್ವಾಮಿ ಸವಾಲು ಹಾಕಿದ್ದಾರೆ.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಚುನಾವಣೆಯಲ್ಲಿ ಅಂಬೇಡ್ಕರ್‌ ಅವರನ್ನು ಕಾಂಗ್ರೆಸ್ ಸೋಲಿಸಿಲ್ಲ. ಕಮ್ಯುನಿಸ್ಟ್ ಪಕ್ಷದ ಡಾಂಗೆ ಮತ್ತು ಆರ್‌ಎಸ್‍ಎಸ್‍ನ ಸಾವರ್ಕರ್ ಸೋಲಿಸಿದರು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್‌ ರಾಷ್ಟ್ರೀಯ ನಾಯಕ ಜೈರಾಂ ರಮೇಶ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಪ್ರಿಯಾಂಕ ಖರ್ಗೆ ಹೇಳಿದ್ದಾರೆ. ಈ ನಾಲ್ವರು ತಮ್ಮ ಮಾತನ್ನು ಸಾಬೀತುಪಡಿಸಿದರೆ ನನ್ನ ಸ್ಥಾನಕ್ಕೆ ರಾಜೀನಾಮೆ ನೀಡಿ ರಾಜಕೀಯದಿಂದ ನಿವೃತ್ತಿ ಘೋಷಿಸಲು ಸಿದ್ಧ ಎಂದು ಪ್ರಕಟಿಸಿದರು.

ಕಾಂಗ್ರೆಸ್ ನಾಯಕರು ಅವರ ಮಾತು ಸಾಬೀತುಪಡಿಸಿದರೆ ನನ್ನ ಸ್ವಂತ ವೇತನದಲ್ಲಿ ಒಂದು ಲಕ್ಷದ ಒಂದು ರುಪಾಯಿಯನ್ನು ಬಹುಮಾನವಾಗಿ ನೀಡುತ್ತೇನೆ. ಒಂದು ವೇಳೆ ತಮ್ಮ ಮಾತನ್ನು ಸಾಬೀತುಪಡಿಸಲು ಅವರು ವಿಫಲವಾದರೆ ಈ ನಾಲ್ವರೂ ರಾಜೀನಾಮೆ ನೀಡಿ ರಾಜಕೀಯದಿಂದ ನಿವೃತ್ತಿ ಹೊಂದುವುದಾಗಿ ಘೋಷಿಸಲು ಸಿದ್ಧರಿದ್ದಾರೆಯೇ ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ಅಂಬೇಡ್ಕರ್ ಸೋಲಿಸಿದ್ದು ವೀರ್ ಸಾವರ್ಕರ್; ಬಾಬಾ ಸಾಹೇಬರ ಪತ್ರ ತೋರಿಸಿದ ಖರ್ಗೆ!

ಖರ್ಗೆಗಳಿಂದ ದಲಿತರಿಗೆ ಅನ್ಯಾಯ:

ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಪುತ್ರ ಪ್ರಿಯಾಂಕ್‌ ಖರ್ಗೆ ಡಬಲ್ ಇಂಜಿನ್ ಸುಳ್ಳುಗಾರರು. ಇಂತಹ ಖರ್ಗೆಗಳಿಂದ ಬಾಬಾಸಾಹೇಬ್ ಮತ್ತು ದಲಿತರಿಗೆ ಅನ್ಯಾಯವಾಗಿದೆ. ಅಂಬೇಡ್ಕರ್ ಅವರಿಗೆ ಈ ದೇಶದಲ್ಲಿ ನ್ಯಾಯ ಸಿಗಲಿಲ್ಲ ಎಂದು ಹೇಳಿದ್ದಾರೆ. ಕಾಂಗ್ರೆಸ್ ಪಕ್ಷ ದೇಶದಲ್ಲಿ 65 ವರ್ಷ ಆಡಳಿತ ನಡೆಸಿದ್ದು, ಏಕೆ ನ್ಯಾಯ ಕೊಡಲಿಲ್ಲ ಎಂದು ತರಾಟೆ ತೆಗೆದುಕೊಂಡರು.

ದೇಶದ ಸಂವಿಧಾನ ಸಾವಿರ ವರ್ಷಗಳ ಹಿಂದಿನದು ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಅವರಿಗೆ ಬುದ್ಧಿ ತಲೆಯಲ್ಲಿ ಇದೆಯೋ ಅಥವಾ ಪಾದಗಳಲ್ಲಿ ಇದೆಯೋ ಎಂದು ಅರ್ಥವಾಗುತ್ತಿಲ್ಲ. ಈ ರೀತಿ ಹೇಳಿಕೆ ನೀಡಿದ ರಾಹುಲ್ ಗಾಂಧಿ ವಿರುದ್ಧ ಕಾಂಗ್ರೆಸ್ ನಾಯಕರು ಯಾವುದೇ ಮಾತನಾಡದಿರುವುದು ಸಂವಿಧಾನ ಮತ್ತು ಬಾಬಾಸಾಹೇಬರಿಗೆ ಮಾಡಿರುವ ಅಪಚಾರವಾಗಿದೆ. ಇಂಥವರು ಹೇಗೆ ಸಂವಿಧಾನ ಕಾಪಾಡುತ್ತಾರೆ ಎಂದು ಟೀಕಿಸಿದರು.

ಇದನ್ನೂ ಓದಿ: ಅಂಬೇಡ್ಕರ್‌ಗೆ ಸಿಗಬೇಕಾದ ಸ್ಥಾನಮಾನ ಸಿಕ್ಕಿಲ್ಲ ಪ್ರಿಯಾಂಕ್‌ ಖರ್ಗೆ

ಮೀಸಲಾತಿಗೆ ಬಿಜೆಪಿ ಮತ್ತು ಆರ್‌ಎಸ್‍ಎಸ್ ವಿರೋಧವಿತ್ತು ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ನೀಡಿದ್ದಾರೆ. ವಿರೋಧ ಯಾವತ್ತು ಇತ್ತು? ಈ ದೇಶದಲ್ಲಿ ಆಡಳಿತ ನಡೆಸಿದವರು ಬಿಜೆಪಿ ಮತ್ತು ಆರ್‌ಎಸ್‍ಎಸ್‌ನವರಾ? ದೇಶದಲ್ಲಿ ಸಮಾನತೆ ಬರುವವರೆಗೆ ಮೀಸಲಾತಿ ಇರಬೇಕು ಎಂದು ಆರ್‌ಎಸ್‍ಎಸ್‌ನವರು ಹೇಳಿದ್ದಾರೆ. ಅದೇ ರೀತಿ ಎಂದಿಗೂ ಮೀಸಲಾತಿ ಹಿಂಪಡೆಯುವುದಿಲ್ಲ ಎಂದು ಬಿಜೆಪಿ ಹೇಳುತ್ತದೆ ಎಂದು ಸ್ಪಷ್ಟಪಡಿಸಿದರು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್