ಕನ್ನಡಿಗರನ್ನ ಒಕ್ಕಲೆಬ್ಬಿಸಿದ ಗೋವಾ ಸರ್ಕಾರದ ವಿರುದ್ಧ ಕರವೇ ನಾರಾಯಣಗೌಡ ಆಕ್ರೋಶ

By Ravi JanekalFirst Published Apr 16, 2024, 10:12 AM IST
Highlights

ಗೋವಾದಲ್ಲಿ ನಾಲ್ಕು ದಶಕಗಳಿಂದ ವಾಸವಾಗಿರುವ ಕನ್ನಡಿಗರನ್ನು ಒಕ್ಕಲೆಬ್ಬಿಸ್ತಿರೋದು ಸರಿಯಲ್ಲ. ಗೋವಾ ಸರ್ಕಾರ ವಜಾಗೊಳಿಸಿ ರಾಷ್ಟ್ರಪತಿ ಆಳ್ವಿಕೆ ಜಾರಿ ಮಾಡಬೇಕು ಎಂದು ಗೋವಾ ಸರ್ಕಾರದ ವಿರುದ್ಧ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರು (ಏ.16): ಗೋವಾದಲ್ಲಿ ನಾಲ್ಕು ದಶಕಗಳಿಂದ ವಾಸವಾಗಿರುವ ಕನ್ನಡಿಗರನ್ನು ಒಕ್ಕಲೆಬ್ಬಿಸ್ತಿರೋದು ಸರಿಯಲ್ಲ. ಗೋವಾ ಸರ್ಕಾರ ವಜಾಗೊಳಿಸಿ ರಾಷ್ಟ್ರಪತಿ ಆಳ್ವಿಕೆ ಜಾರಿ ಮಾಡಬೇಕು ಎಂದು ಗೋವಾ ಸರ್ಕಾರದ ವಿರುದ್ಧ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಉತ್ತರ ಗೋವಾದ ಸಾಂಗೋಲ್ಡಾ ಪ್ರದೇಶದಲ್ಲಿರುವ ಕನ್ನಡಿಗರ 15 ಮನೆಗಳನ್ನು ಜೆಸಿಬಿ ಬಳಸಿ ನೆಲಸಮಗೊಳಿಸಿರುವ ವಿಚಾರ ಸಂಬಂಧ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಇಡೀ ಗೋವಾದಲ್ಲಿ ಕನ್ನಡಿಗರೇ ಇರಬಾರದು ಎಂದು ಅಲ್ಲಿನ ಸರ್ಕಾರ ತೀರ್ಮಾನಿಸಿದಂತಿದೆ. ಕೂಡಲೇ ರಾಷ್ಟ್ರಪತಿ ಮಧ್ಯೆ ಪ್ರವೇಶಿಸಿ ಸರ್ಕಾರ ವಜಾಗೊಳಿಸಬೇಕು. ಈಗಾಗಲೇ ಹದಿನೈದು ಕನ್ನಡಿಗರ ಕುಟುಂಬಗಳು ಬೀದಿಪಾಲಾಗಿವೆ. ಗೋವಾದಲ್ಲಿ ಕನ್ನಡಿಗರನ್ನು ಗುರಿಯಾಗಿಸಿಕೊಂಡು ಒಕ್ಕಲೆಬ್ಬಿಸುತ್ತಿರುವುದು ಸಹಿಸೊಲ್ಲ. ಸರ್ಕಾರ ಚುನಾವಣೆ ಮಧ್ಯೆಯೂ ಕರ್ನಾಟಕ ಸಿಎಂ ಸಿದ್ದರಾಮಯ್ಯ ಗೋವಾಗೆ ತೆರಳಿ ಕನ್ನಡಿಗರಿಗೆ ನ್ಯಾಯ ದೊರಕಿಸಬೇಕು ಆಗ್ರಹಿಸಿದರು.

ಮತ್ತೆ ಕನ್ನಡಿಗರ ಒಕ್ಕಲೆಬ್ಬಿಸಿದ ಗೋವಾ ಸರ್ಕಾರ!

click me!