ನೀರಾವರಿ ವಿಚಾರದಲ್ಲಿ ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಅನ್ಯಾಯ: ಮುಖ್ಯಮಂತ್ರಿ ಚಂದ್ರು

By Kannadaprabha News  |  First Published Sep 12, 2024, 1:02 PM IST

ಕರ್ನಾಟಕದಲ್ಲಿ ಪಶ್ಚಿಮ ಘಟ್ಟದ ಕೆಲವು ಭಾಗ ಮಹದಾಯಿ ವನ್ಯಜೀವಿ ಅಭಯಾರಣ್ಯ ವ್ಯಾಪ್ತಿಯಲ್ಲಿ ಬರಲಿದೆ.  ಇದೇ ಭಾಗದಲ್ಲಿ ಕಳಸಾ-ಬಂಡೂರಿ ನಾಲಾ ತಿರುವು ಯೋಜನೆ ನಡೆಯುತ್ತಿದೆ. ಹುಲಿ ಸಂರಕ್ಷಿತ ಪ್ರದೇಶವೆಂದು ಘೋಷಣೆಯಾದರೆ ಯೋಜನೆಗೆ ಮತ್ತಷ್ಟು ಅಡ್ಡಿಯಾಗುವ ಸಾಧ್ಯತೆಗಳಿವೆ. ಗೋವಾ ಸರ್ಕಾರ ನಿರ್ಮಿಸಿರುವ ತಡೆಗೋಡೆ ತೆರವುಗೊಳಿಸಿ, ಶೀಘ್ರವೇ ಯೋಜನೆ ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ಒಗ್ಗೂಡಿ ಹೋರಾಟ ಸಂಘಟಿಸಬೇಕು ಎಂದ ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು 
 


ಬೆಂಗಳೂರು(ಸೆ.12): ಉತ್ತರ ಕರ್ನಾಟಕದ ಪ್ರಮುಖ ನೀರಾವರಿ ನೆಯಾಗಿರುವ ಮಹದಾಯಿ, ಕಳಸಾ- ಬಂಡೂರಿ ಯೋಜನೆ ಅನುಷ್ಠಾನವಿಚಾರದಲ್ಲಿ ಆರೋಪ-ಪ್ರತ್ಯಾರೋಪ ಮಾಡದೆ ಶೀಘ್ರದಲ್ಲಿಯೇ ಸರ್ವಪಕ್ಷದ ನಿಯೋಗವನ್ನು ದೆಹಲಿಗೆ ಕೊಂಡೊಯ್ಯಬೇಕು ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಆಗ್ರಹಿಸಿದ್ದಾರೆ.

ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅವರು, ಮಹದಾಯಿ ನ್ಯಾಯಾಧಿಕರಣದಿಂದ 2018ರ ಆ.14 ರಂದು ತೀರ್ಪು ಪ್ರಕಟವಾಗಿದೆ. ತೀರ್ಪಿನಲ್ಲಿ 13.42 ಟಿಎಂಸಿ ನೀರು ರಾಜ್ಯಕ್ಕೆ ಹಂಚಿಕೆಯಾಗಿದ್ದು, ಕಳಸಾ ನೀರು ಬಳಕೆಗೆ ಕಳಸಾ, ಹಲತಾರ ಅಣೆಕಟ್ಟು ನಿರ್ಮಾಣದ ಅವಶ್ಯಕತೆ ಯೋಜನೆ ಇದೆ. ಅಣೆಕಟ್ಟು ನಿರ್ಮಾಣದ ಜಮೀನು ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಇದೆ. ಹೀಗಾಗಿ ಕೇಂದ್ರ ಪರಿಸರ ಹಾಗೂ ಅರಣ್ಯ ಇಲಾಖೆ ಅನುಮತಿ ಸಿಕ್ಕಿಲ್ಲ. ಜತೆಗೆ ಗೋವಾ ಸರ್ಕಾರ ಪರಿಸರದ ನೆಪ ವೊಡ್ಡಿ ಪದೆ ಪದೇ ಅಡ್ಡಿ ಮಾಡುತ್ತಿದೆ. 

Tap to resize

Latest Videos

undefined

ಎಂಡಿಎ ಹಗರಣ: ರಾಜ್ಯಪಾಲರು ಕೇಂದ್ರ ಸರ್ಕಾರದ ಕೈ ಗೊಂಬೆಯಾಗಿದ್ದಾರೆ: ಮುಖ್ಯಮಂತ್ರಿ ಚಂದ್ರು

2022ರ ಡಿ.29 ರಂದು ಕೇಂದ್ರ ಜಲ ಆಯೋಗ ಮಹದಾಯಿ ಯೋಜನೆ ಡಿಪಿಆರ್‌ಗೆ ಅನುಮೋದನೆ ನೀಡಿದೆ. ಆದರೂ, ಮಹದಾಯಿ ಕಾಮಗಾರಿಗೆ ಟೈಗರ್‌ ಕಾರಿಡಾರ್‌ ಅನುಮತಿ ಸಿಕ್ಕಿಲ್ಲ. ಕರ್ನಾಟಕದಲ್ಲಿ ಪಶ್ಚಿಮ ಘಟ್ಟದ ಕೆಲವು ಭಾಗ ಮಹದಾಯಿ ವನ್ಯಜೀವಿ ಅಭಯಾರಣ್ಯ ವ್ಯಾಪ್ತಿಯಲ್ಲಿ ಬರಲಿದೆ.  ಇದೇ ಭಾಗದಲ್ಲಿ ಕಳಸಾ-ಬಂಡೂರಿ ನಾಲಾ ತಿರುವು ಯೋಜನೆ ನಡೆಯುತ್ತಿದೆ. ಹುಲಿ ಸಂರಕ್ಷಿತ ಪ್ರದೇಶವೆಂದು ಘೋಷಣೆಯಾದರೆ ಯೋಜನೆಗೆ ಮತ್ತಷ್ಟು ಅಡ್ಡಿಯಾಗುವ ಸಾಧ್ಯತೆಗಳಿವೆ. ಗೋವಾ ಸರ್ಕಾರ ನಿರ್ಮಿಸಿರುವ ತಡೆಗೋಡೆ ತೆರವುಗೊಳಿಸಿ, ಶೀಘ್ರವೇ ಯೋಜನೆ ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ಒಗ್ಗೂಡಿ ಹೋರಾಟ ಸಂಘಟಿಸಬೇಕು ಎಂದಿದ್ದಾರೆ. 

ಇನ್ನು, ಭದ್ರಾ ಮೇಲ್ದಂಡೆ ಯೋಜನೆಗೆ ತನ್ನ ಪಾಲಿನ 5300 ಕೋಟಿ ರು. ಬಿಡುಗಡೆ ಮಾಡುವ ಬದಲಿಗೆ ಹೊಸ ಷರತ್ತುಗಳನ್ನು ವಿಧಿಸುವ ಮೂಲಕ ಕೇಂದ್ರ ಸರ್ಕಾರವು ರಾಜ್ಯಕ್ಕೆ ಅನ್ಯಾಯ ಮಾಡಿದೆ. ರಾಜಕೀಯ ಹೇಳಿಕೆಗಳನ್ನು ನೀಡದೆ ರಾಜ್ಯವು ಎಲ್ಲಾ ವಿವರಗಳನ್ನು ಕೇಂದ್ರಕ್ಕೆ ಸಲ್ಲಿಸಬೇಕು. ಕಾಲಹರಣ ನಡೆಸದೆ, ಈವರೆಗೆ ರಾಜ್ಯ ಸರ್ಕಾರ ಖರ್ಚು ಮಾಡಿರುವ 9,713 ಕೋಟಿ ರು. ಹಾಗೂ ಕೇಂದ್ರದಿಂದ ಬರಬೇಕಿರುವ ನೆರವಿನ ಮೊತ್ತದ ಬಗ್ಗೆ ವಿಸ್ತ್ರತ ವಿಸ್ತ್ರತ ವರದಿ ಸಲ್ಲಿಸಿ ಕೇಂದ್ರದ ಮೇಲೆ ಒತ್ತಡವನ್ನು ಹೇರಿ ಯೋಜನೆ ಅನುಷ್ಠಾನಗೊಳಿಸುವ ಪ್ರಯತ್ನ ನಡೆಸಬೇಕು ಎಂದು ತಿಳಿಸಿದ್ದಾರೆ.

click me!