Karnataka election 2023: ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮತ ಎಣಿಕೆ ಕೇಂದ್ರಗಳ ವೀಕ್ಷಣೆ

Published : May 08, 2023, 10:03 PM IST
Karnataka election 2023: ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮತ ಎಣಿಕೆ ಕೇಂದ್ರಗಳ ವೀಕ್ಷಣೆ

ಸಾರಾಂಶ

ಜಿಲ್ಲಾ ಚುನಾವಣಾಧಿಕಾರಿ-ಬೆಂಗಳೂರು ವ್ಯಾಪ್ತಿಯಲ್ಲಿ 28 ವಿಧಾನಸಭಾ ಕ್ಷೇತ್ರಗಳ ಪೈಕಿ ಮತ ಎಣಿಕೆ ಕಾರ್ಯವು 4 ವಿವಿಧ ಸ್ಥಳಗಳಲ್ಲಿ ನಡೆಯಲಿದೆ. ಈ ಪೈಕಿ ನಾಲ್ಕೂ ಮತ ಎಣಿಕೆ ಕೇಂದ್ರಗಳಲ್ಲಿ ಮತ ಎಣಿಕೆ ಕಾರ್ಯಕ್ಕೆ ಸಂಬಂಧಿಸಿದ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತ  ತುಷಾರ್ ಗಿರಿ ನಾಥ್ ರವರು ತಿಳಿಸಿದರು. 

ಬೆಂಗಳೂರು (ಮೇ.8) : ಜಿಲ್ಲಾ ಚುನಾವಣಾಧಿಕಾರಿ-ಬೆಂಗಳೂರು ವ್ಯಾಪ್ತಿಯಲ್ಲಿ 28 ವಿಧಾನಸಭಾ ಕ್ಷೇತ್ರಗಳ ಪೈಕಿ ಮತ ಎಣಿಕೆ ಕಾರ್ಯವು 4 ವಿವಿಧ ಸ್ಥಳಗಳಲ್ಲಿ ನಡೆಯಲಿದೆ. ಈ ಪೈಕಿ ನಾಲ್ಕೂ ಮತ ಎಣಿಕೆ ಕೇಂದ್ರಗಳಲ್ಲಿ ಮತ ಎಣಿಕೆ ಕಾರ್ಯಕ್ಕೆ ಸಂಬಂಧಿಸಿದ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತ  ತುಷಾರ್ ಗಿರಿ ನಾಥ್ ರವರು ತಿಳಿಸಿದರು. 

ನಗರದಲ್ಲಿರುವ ಸೆಂ. ಜೋಸೆಫ್ ಇಂಡಿಯನ್ ಹೈ ಸ್ಕೂಲ್(St Joseph's Indian High School) ನಲ್ಲಿರುವ ಮತ ಎಣಿಕೆ ಕೇಂದ್ರಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತ ಎಣಿಕೆಯ ಸಿಬ್ಬಂದಿ 3 ವಿಧದಲ್ಲಿ ಇರಲಿದ್ದು, ಪ್ರತಿ ಟೇಬಲ್ ಗೆ ಮೈಕ್ರೋ ಅಬ್ಸರ್ವರ್(Micro Observer), ಮತ ಎಣಿಕೆ ಮೇಲ್ವಿಚಾರಕರು ಮತ್ತು ಮತ ಎಣಿಕೆ ಸಹಾಯಕರನ್ನು ನಿಯೋಜನೆ ಮಾಡಲಾಗುತ್ತದೆ. ಪ್ರತಿ ಎಣಿಕಾ ಕೊಠಡಿಗೆ ಸಾಮಾನ್ಯವಾಗಿ 10 ರಿಂದ 14 ಟೇಬಲ್ ಗಳ ವ್ಯವಸ್ಥೆ ಮಾಡಲಾಗಿರುತ್ತದೆ. ಅದರಲ್ಲಿ 2 ಟೇಬಲ್ ಗಳನ್ನು ಪೋಸ್ಟಲ್ ಬ್ಯಾಲೆಟ್ ಮತಗಳ ಎಣಿಕೆಗೆ ಮೀಸಲಿಡಲಾಗಿರುತ್ತದೆ ಎಂದು ಹೇಳಿದರು.

ಮತ ಎಣಿಕೆ ಕಾರ್ಯ ಎಚ್ಚರಿಕೆಯಿಂದ ನಿರ್ವಹಿಸಿ: ತುಕಾರಾಂ ಹರಿಬಾವು ಮುಂಡೆ

ಬೆಂಗಳೂರು ನಗರದ ಅಪರ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿಯಾದ ಡಾ. ದಯಾನಂದ್ ಮಾತನಾಡಿ, ಸಾರ್ವತ್ರಿಕ ವಿಧಾನಸಭೆ ಚುನಾವಣೆ(Karnataka Assembly election)ಯ ಮತ ಎಣಿಕೆ ಕಾರ್ಯವು ಮೇ. 13 ರಂದು ನಡೆಯಲಿದ್ದು, ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಪ್ರತಿ ಟೇಬಲ್ ಗಳಿಗೂ ವೆಬ್ ಕಾಸ್ಟಿಂಗ್ ವ್ಯವಸ್ಥೆಯಿರುತ್ತದೆ. ಎಣಿಕಾ ಮೇಲ್ವಿಚಾರಕರು ಹಾಗೂ ಎಣಿಕಾ ಸಹಾಕರಿಗೆ ಈಗಾಗಲೇ ತರಬೇತಿಯನ್ನು ಸಹಾ ನೀಡಲಾಗಿದೆ. ಮೇ 12 ರಂದು, ಮೈಕ್ರೋ ಅಬ್ಸರ್ವರ್ಸ್, ಎಣಿಕಾ ಮೇಲ್ವಿಚಾರಕರು ಹಾಗೂ ಎಣಿಕಾ ಸಹಾಕರಿಗೆ ಮತ್ತೊಂದು ಬಾರಿ ತರಬೇತಿಯನ್ನು ನೀಡಲಾಗುವುದು. ಎಲ್ಲಾ ಕಡೆ ಸಿಸಿ ಕ್ಯಾಮೆರಾಗಳ ಅಳವಡಿಕೆ ಮಾಡಿದ್ದು, ಮೂರು ಹಂತದದಲ್ಲಿ ಪೊಲೀಸ್ ಭದ್ರತಾ ವ್ಯವಸ್ಥೆ ಮಾಡಲಾಗುತ್ತದೆ. ಆವರಣದಲ್ಲಿ ಪಾರ್ಕಿಂಗ್ ವ್ಯಸವ್ಥೆ ಮಾಡಲಾಗಿದೆ ಎಂದು ಹೇಳಿದರು.

ಬೆಂಗಳೂರು ನಗರ ವ್ಯಾಪ್ತಿಯಲ್ಲಿ 7 ವಿಧಾನಸಭಾ ಕ್ಷೇತ್ರಗಳು(Bengaluru assembly constituency) ಬರಲಿದ್ದು, ಯಲಹಂಕ ಹಾಗೂ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರಗಳಲ್ಲಿ 16ಕ್ಕೂ ಹೆಚ್ಚು ಅಭ್ಯರ್ಥಿಗಳಿರುವುದರಿಂದ 2 ಬ್ಯಾಲೇಟ್ ಯುನಿಟ್ ಗಳು ಬರಲಿವೆ. ಉಳಿದ ವಿಧಾನಸಭಾ ಕ್ಷೇತ್ರಗಳಿಗೆ 1 ಬ್ಯಾಲೇಟ್ ಯುನಿಟ್ ಗಳು ಬರಲಿವೆ ಎಂದು ತಿಳಿಸಿದರು.

ಮತ ಎಣಿಕೆ: ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿ​ಸಿ ಜಿಲ್ಲಾ​ಧಿ​ಕಾರಿ ಆದೇಶ

ಮತ ಎಣಿಕೆ ಕೇಂದ್ರಗಳ ವಿವರ:

ಬೆಂಗಳೂರು ಕೇಂದ್ರ: ಬಿಎಂಎಸ್ ಕಾಲೇಜು, ಬೂಗಲ್ ರಾಕ್ ರಸ್ತೆ, ಗಾಂಧಿ ಬಜಾರ್, ಬಸವನಗುಡಿ, ಬೆಂಗಳೂರು.

ಬೆಂಗಳೂರು ದಕ್ಷಿಣ: ಎಸ್.ಎಸ್.ಎಂ.ಆರ್.ವಿ ಪಿಯು ಕಾಲೇಜು, 26ನೇ ಮುಖ್ಯ ರಸ್ತೆ, 4ನೇ ಬ್ಲಾಕ್, ಜಯನಗರ, ಬೆಂಗಳೂರು.

ಬೆಂಗಳೂರು ಉತ್ತರ: ಮೌಂಟ್ ಕಾರ್ಮಲ್ ಕಾಲೇಜು, ಪ್ಯಾಲೆಸ್ ರಸ್ತೆ, ವಸಂತನಗರ, ಬೆಂಗಳೂರು.

ಬೆಂಗಳೂರು ನಗರ: ಸೆಂ. ಜೋಸೆಫ್ ಇಂಡಿಯನ್ ಹೈ ಸ್ಕೂಲ್, ವಿಟ್ಟಲ್ ಮಲ್ಯ ರಸ್ತೆ, ಬೆಂಗಳೂರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!