ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಸೂಚನೆ: ಉಲ್ಲಂಘಿಸಿದ್ರೆ ಖಡಕ್ ಎಚ್ಚರಿಕೆ

By Suvarna NewsFirst Published Feb 9, 2021, 7:10 PM IST
Highlights

ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಖಡಕ್ ಸೂಚನೆ ಕೊಡಲಾಗಿದ್ದು, ಒಂದು ವೇಳೆ ಇದನ್ನ ಉಲ್ಲಂಘಸಿದ್ರೆ  ಶಿಸ್ತು ಕ್ರಮ ಮತ್ತು ಕ್ರಿಮಿನಲ್ ಕೇಸ್ ಎಚ್ಚರಿಕೆ ನೀಡಲಾಗಿದೆ.

ಬೆಂಗಳೂರು, (ಫೆ.09): ಸರ್ಕಾರಿ ನೌಕರರು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ರಾಜ್ಯ ಸರ್ಕಾರ ಖಡಕ್ ಸೂಚನೆಯೊಂದು ಕೊಟ್ಟಿದೆ.

ಸರ್ಕಾರಿ, ಸರ್ಕಾರದ ನಿಗಮ, ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಸಂಸ್ಥೆಯ ಅಧಿಕಾರಿ/ನೌಕರರು ಹಾಗೂ ಅವರ ಅವಲಂಬಿತ ಕುಟುಂಬ ವರ್ಗದವರು ಬಿಪಿಎಲ್ ಪಡಿತರ ಚೀಟಿಯನ್ನು ಪಡೆದಿದ್ದಲ್ಲಿ ಅದು ಅಕ್ಷಮ್ಯ ಅಪರಾಧವಾಗುತ್ತದೆ.

ಸಚಿವರಾಗುತ್ತಿದ್ದಂತೆಯೇ ಶುರುವಾಯ್ತು ಕತ್ತಿ ವರಸೆ: ಫೇಕ್ BPL ಕಾರ್ಡುದಾರರಿಗೆ ಶಾಕ್

ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ವಿತರಿಸಲಾಗುವ ಬಿಪಿಎಲ್ ಪಡಿತರ ಚೀಟಿಯನ್ನು ಪಡೆದಿದ್ದಲ್ಲಿ ಕೂಡಲೇ ತಮ್ಮ ಪಡಿತರ ಚೀಟಿಯನ್ನು ಆಹಾರ ಇಲಾಖೆಗೆ ಸಲ್ಲಿಸಿ ರದ್ದುಪಡಿಸಿಕೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ.

ಆರ್ಥಿಕವಾಗಿ ಸದೃಢವಾಗಿರುವವರು ಬಿಪಿಎಲ್ ಕಾರ್ಡ್ ಪಡೆದು ಸರ್ಕಾರಿ ಸೇವೆಗಳನ್ನು ಪಡೆಯುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಒಂದು ವೇಳೆ ಆರ್ಥಿಕವಾಗಿ ಸದೃಢರು ಹಾಗೂ ಅಧಿಕಾರಿ/ ನೌಕರರು ಮತ್ತು ಅವರ ಅವಲಂಬಿತ ಕುಟುಂಬ ಸದಸ್ಯರು ಕಾರ್ಡ್‌ ಹೊಂದಿರುವ ಬಗ್ಗೆ ದೂರುಗಳು ಸ್ವೀಕೃತವಾಗಿದ್ದಲ್ಲಿ ಅಂತಹ ಅಧಿಕಾರಿ/ನೌಕರರ ವಿರುದ್ದ ಶಿಸ್ತು ಕ್ರಮ ಮತ್ತು ಕ್ರಿಮಿನಲ್ ಮೊಕದ್ದಮೆ ಹೂಡಿ ಸರ್ಕಾರಕ್ಕೆ ಉಂಟಾಗಿರುವ ನಷ್ಟವನ್ನು ವಸೂಲು ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ.

ಬಿಪಿಎಲ್ ಕಾರ್ಡ್ ಬಡತನ ರೇಖೆಗಿಂತ ಕೆಳಗಿರುವ ಬಡವರಿಗೆ ನೀಡುವ ಸೌಲಭ್ಯವಾಗಿದ್ದು, ಇದನ್ನು ಸರ್ಕಾರಿ ನೌಕರರು ಮತ್ತು ಆರ್ಥಿಕ ಸದೃಢರು ಉಪಯೋಗಿಸಿಕೊಳ್ಳುವುದು ಕಾನೂನು ಬಾಹಿರವಾಗಿದೆ ಎಂದು ತಿಳಿಸಲಾಗಿದೆ.

click me!