
ಬೆಂಗಳೂರು(ಮೇ.11): ಕೊರೋನಾ ಲಾಕ್‌ಡೌನ್‌ನಿಂದ ರಾಜ್ಯದಲ್ಲಿ ಉಳಿದಿರುವ ಹೊರರಾಜ್ಯದ ಪ್ರವಾಸಿಗರು, ಉದ್ಯೋಗಿಗಳು, ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (ಕೆಎಸ್‌ಆರ್‌ಟಿಸಿ) ಹೊರರಾಜ್ಯಗಳಿಗೆ ಬಸ್ ಕಾರ್ಯಾಚರಣೆ ಮಾಡಲು ನಿರ್ಧರಿಸಿದೆ.
"
ಲಾಕ್‌ಡೌನ್: KSRTC ನೌಕರರಿಗೆ ಕೊನೆಗೂ ಸಂಬಳ ಪಾವತಿ..!
ಸೇವಾಸಿಂಧು ಇ-ಪಾಸ್ ಹೊಂದಿರುವವರು ಹೊರರಾಜ್ಯಗಳಿಗೆ ಈ ಬಸ್‌ನಲ್ಲಿ ಪ್ರಯಾಣಿಸಬಹುದು. ಆಸಕ್ತರು ಕೆಎಸ್‌ಆರ್‌ಟಿಸಿ ಆರಂಭಿಸಿರುವ ಸಹಾಯವಾಣಿಗೆ ಮೇ 11ರಿಂದ ಕರೆ ಮಾಡಿ ಹೆಚ್ಚಿನ ಮಾಹಿತಿ ಪಡೆಯಬಹುದು. ಈ ಹೊರರಾಜ್ಯ ಬಸ್ ಸೇವೆ ಆರಂಭವಾಗುವ ದಿನಾಂಕ ಇನ್ನೂ ಅಂತಿಮವಾಗಿಲ್ಲ. ಶೀಘ್ರದಲ್ಲೇ ದಿನಾಂಕ ಪ್ರಕಟಿಸುವುದಾಗಿ ಕೆಎಸ್‌ಆರ್‌ಟಿಸಿಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.
ತಮಿಳುನಾಡು ಹಾಗೂ ಪಾಂಡಿಚೇರಿಗೆ ತೆರಳುವ ಪ್ರಯಾಣಿಕರು ಮೊಬೈಲ್ ಸಂಖ್ಯೆ 7760990100, 7760990560, 7760990034, 7760990035, 7760991295, ಆಂಧ್ರಪ್ರದೇಶ ಹಾಗೂ ತೆಲಂಗಾಣಕ್ಕೆ ಹೋಗುವವರು 7760990561, 7760990532, 7760990955, 7760990530, 7760990967 ಹಾಗೂ ಕೇರಳಕ್ಕೆ ತೆರಳುವವರು 7760990287, 7760990988, 7760990531, 6366423895, 6366423896 ಈ ಸಂಖ್ಯೆಗಳಿಗೆ ಸಂಪರ್ಕಿಸಬಹುದು ಎಂದು ನಿಗಮ ತಿಳಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ