ತೋರಣಗಲ್‌ ಅಂತಾರಾಷ್ಟ್ರೀಯ ಯೋಗ ದಿನಾಚಣೆಯಲ್ಲಿ ಸಿಎಂ ಸಿದ್ದರಾಮಯ್ಯ ಇಂದು ಭಾಗಿ 

Published : Jun 21, 2024, 07:06 AM IST
ತೋರಣಗಲ್‌ ಅಂತಾರಾಷ್ಟ್ರೀಯ ಯೋಗ ದಿನಾಚಣೆಯಲ್ಲಿ ಸಿಎಂ ಸಿದ್ದರಾಮಯ್ಯ ಇಂದು ಭಾಗಿ 

ಸಾರಾಂಶ

ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಸಂಡೂರು ತಾಲೂಕಿನ ತೋರಣಗಲ್ಲಿನ ಜಿಂದಾಲ್ ನ ವಿದ್ಯಾನಗರ ಟೌನ್‌ಶಿಪ್‌ನಲ್ಲಿ ಜೂ.21ರಂದು ಹಮ್ಮಿಕೊಂಡಿರುವ ಯೋಗ ದಿನಾಚರಣೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಪಾಲ್ಗೊಳ್ಳಲಿದ್ದಾರೆ.

ಬಳ್ಳಾರಿ (ಜೂ.21): ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಸಂಡೂರು ತಾಲೂಕಿನ ತೋರಣಗಲ್ಲಿನ ಜಿಂದಾಲ್ ನ ವಿದ್ಯಾನಗರ ಟೌನ್‌ಶಿಪ್‌ನಲ್ಲಿ ಜೂ.21ರಂದು ಹಮ್ಮಿಕೊಂಡಿರುವ ಯೋಗ ದಿನಾಚರಣೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಪಾಲ್ಗೊಳ್ಳಲಿದ್ದಾರೆ.

ಯೋಗ ದಿನಾಚರಣೆ (International yoga day 2024) ಅಂಗವಾಗಿ ಜೆಎಸ್‌ಡಬ್ಲ್ಯು ಟೌನ್‌ಶಿಪ್‌ನಲ್ಲಿ "ಯೋಗ" ಕಾರ್ಯಕ್ರಮ ಆಯೋಜಿಸಲಾಗಿದ್ದು, ಹರಿಹರ ಪಂಚಮಸಾಲಿ ಪೀಠದ ಮುಖ್ಯಸ್ಥರು, ಖ್ಯಾತ ಯೋಗಪಟುಗಳಾದ ವಚನಾನಂದ ಶ್ರೀಗಳು ಯೋಗ- ಧ್ಯಾನ ಹೇಳಿಕೊಡಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah) ಹಾಗೂ ಇನ್ನೂ ಹಲವು ಸಚಿವರು, ಶಾಸಕರು ಪಾಲ್ಗೊಳ್ಳಲಿದ್ದಾರೆ.

ಬಳಿಕ ತೋರಣಗಲ್ ವಿದ್ಯಾನಗರದಿಂದ ಹೊರಟು ಹೊಸಪೇಟೆಗೆ ತೆರಳಲಿದ್ದು, 11 ಗಂಟೆಗೆ ವಿಜಯನಗರ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಿಎಂ ಭಾಗವಹಿಸುವರು.

'ವಿಶ್ವ ಸ್ವಾಸ್ಥ್ಯಕ್ಕೆ ‘ಯೋಗ’ವೇ ಮದ್ದು' - ಬಿವೈ ವಿಜಯೇಂದ್ರ ಅವರ ವಿಶೇಷ ಲೇಖನ

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಜಯನಗರ ಕೆಡಿಪಿ ಸಭೆ

 ಮುಖ್ಯಮಂತ್ರಿ ಸಿದ್ದರಾಮಯ್ಯ ಜೂ.21ರಂದು ಬೆಳಗ್ಗೆ 11 ಗಂಟೆಗೆ ಹೊಸಪೇಟೆಯಲ್ಲಿರುವ ವಿಜಯನಗರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ.

ಸಿಎಂ ಸಿದ್ದರಾಮಯ್ಯ(CM Siddaramaiah) ಜೂ.21ರಂದು ವಿಜಯನಗರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಬೆಳಿಗ್ಗೆ 10 ಗಂಟೆಗೆ ಬಳ್ಳಾರಿ ಜಿಲ್ಲೆಯ ತೋರಣಗಲ್‌ನಿಂದ ನಿರ್ಗಮಿಸಿ ರಸ್ತೆಯ ಮೂಲಕ ಬೆಳಗ್ಗೆ 10.25ಕ್ಕೆ ಹೊಸಪೇಟೆಗೆ ಆಗಮಿಸುವರು. ಬಳಿಕ ಬೆಳಗ್ಗೆ 11 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿನ ಆಡಿಟೋರಿಯಂ ಹಾಲ್‌ನಲ್ಲಿ ವಿಜಯನಗರ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ಸಂಜೆ 4 ಗಂಟೆಗೆ ಹೊಸಪೇಟೆಯಿಂದ ನಿರ್ಗಮಿಸಿ ಬಳಿಕ ಜಿಂದಾಲ್ ನಿಲ್ದಾಣಕ್ಕೆ ತೆರಳಿ ಅಲ್ಲಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.

International Yoga Day 2024: ಗ್ಲೋಬಲ್‌ ಯೋಗಕ್ಕೀಗ ದಶಕದ ಸಂಭ್ರಮ!

ಕೆಡಿಪಿ ಸಭೆಯಲ್ಲಿ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್. ಜಮೀರ್ ಅಹ್ಮದ್ ಖಾನ್, ವಿಜಯನಗರ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಜಿಲ್ಲೆಯ ಶಾಸಕರಾದ ಎಚ್.ಆರ್‌. ಗವಿಯಪ್ಪ, ಕೆ.ನೇಮರಾಜ್‌ ನಾಯ್ಕ, ಎಂ.ಪಿ. ಲತಾ, ಡಾ. ಎನ್‌.ಟಿ. ಶ್ರೀನಿವಾಸ್‌, ಕೃಷ್ಣ ನಾಯ್ಕ ಸೇರಿದಂತೆ ಜನಪ್ರತಿನಿಧಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನವೀನ್‌ರಾಜ್ ಸಿಂಗ್, ಜಿಲ್ಲಾಧಿಕಾರಿ ಎಂ.ಎಸ್‌. ದಿವಾಕರ್‌, ಎಸ್ಪಿ ಶ್ರೀಹರಿಬಾಬು, ಜಿಪಂ ಸಿಇಒ ಸದಾಶಿವಪ್ರಭು ಸೇರಿದಂತೆ ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ, ಇಂಗ್ಲೀಷ್ ಶಾಲೆಗಳ ಪೋಷಕರಿಂದ ಸಡಿಲಿಕೆಗೆ ಮನವಿ
ಚಿನ್ನಸ್ವಾಮಿಗೆ ಅಂತಾರಾಷ್ಟ್ರೀಯ ಮತ್ತು IPL ಪಂದ್ಯಗಳು ವಾಪಸ್; ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ