ಅಂತಾರಾಷ್ಟ್ರೀಯ ಯೋಗ ದಿನ: ಕೊಡಗಿನಲ್ಲಿ ಯೋಗಭ್ಯಾಸ ಮಾಡಿದ ಸಾವಿರಾರು ವಿದ್ಯಾರ್ಥಿಗಳು

By Govindaraj S  |  First Published Jun 21, 2023, 12:19 PM IST

9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಕೊಡಗು ಜಿಲ್ಲೆಯ ವಿವಿಧೆಡೆ ಯೋಗಭ್ಯಾಸ ನಡೆಯಿತು. ಜಿಲ್ಲಾ ಕೇಂದ್ರ ಮಡಿಕೇರಿ ಮತ್ತು ವಿರಾಜಪೇಟೆ, ಕುಶಾಲನಗರ ಮತ್ತು ಸೋಮವಾರಪೇಟೆ ಸೇರಿದಂತೆ ವಿವಿಧೆಡೆ ಯೋಗಭ್ಯಾಸ ನಡೆಯಿತು. 


ವರದಿ: ರವಿ.ಎಸ್ ಹಳ್ಳಿ, ಏಷ್ಯಾನೆಟ್ ಸುವರ್ಣ ನ್ಯೂಸ್, ಕೊಡಗು

ಕೊಡಗು (ಜೂ.21): 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಕೊಡಗು ಜಿಲ್ಲೆಯ ವಿವಿಧೆಡೆ ಯೋಗಭ್ಯಾಸ ನಡೆಯಿತು. ಜಿಲ್ಲಾ ಕೇಂದ್ರ ಮಡಿಕೇರಿ ಮತ್ತು ವಿರಾಜಪೇಟೆ, ಕುಶಾಲನಗರ ಮತ್ತು ಸೋಮವಾರಪೇಟೆ ಸೇರಿದಂತೆ ವಿವಿಧೆಡೆ ಯೋಗಭ್ಯಾಸ ನಡೆಯಿತು. ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಆಯುಷ್ಮಾನ್ ಇಲಾಖೆ ವತಿಯಿಂದ ಕೆಳಗಿನ ಗೌಡ ಸಮಾಜದಲ್ಲಿ ಯೋಗಭ್ಯಾಸ ನಡೆಯಿತು. ಇನ್ನು ವಿರಾಜಪೇಟೆಯಲ್ಲಿ ತಾಲ್ಲೂಕು ಆಡಳಿತದಿಂದ ಯೋಗಭ್ಯಾಸ ನಡೆಯಿತು. 

Tap to resize

Latest Videos

undefined

ಮಡಿಕೇರಿಯಲ್ಲಿ ನಡೆದ ಯೋಗಭ್ಯಾಸದಲ್ಲಿ ಜಿಲ್ಲಾಧಿಕಾರಿ ಡಾ. ಬಿ.ಸಿ ಸತೀಶ್, ಜಿಲ್ಲಾ ಪಂಚಾಯಿತಿ ಸಿಇಓ ಡಾ. ಆಕಾಶ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಎನ್ಡಿಆರ್ಎಫ್ ಸಿಬ್ಬಂದಿ, ಸ್ಕೌಟ್ಸ್ ಅಂಡ್ ಗೈಡ್ಸ್ ವಿದ್ಯಾರ್ಥಿಗಳು ಸೇರಿದಂತೆ ವಿವಿಧ ಶಾಲಾ ಕಾಲೇಜುಗಳ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಯೋಗ ದಿನಾಚರಣೆಯಲ್ಲಿ ಭಾಗವಹಿಸಿ ಯೋಗಭ್ಯಾಸ ಮಾಡಿದರು. ಮುಸ್ಲಿಂ ವಿದ್ಯಾರ್ಥಿನಿಯೊಬ್ಬರು ಯೋಗ ದಿನಾಚರಣೆಯಲ್ಲಿ ಭಾಗವಹಿಸಿ ಬುರ್ಕಾ ಧರಿಸಿಯೇ ಯೋಗಭ್ಯಾಸ ಮಾಡಿ ಎಲ್ಲರ ಗಮನ ಸೆಳೆದರು. ಯೋಗ ಗುರು ಮಹೇಶ್ ಅವರು ವಿವಿಧ ಯೋಗ ಆಸನಗಳನ್ನು ಹೇಳಿ ಕೊಡುವ ಮೂಲಕ ಅರ್ಥ ಪೂರ್ಣವಾಗಿ ಯೋಗಭ್ಯಾಸ ಮಾಡಿಸಿದರು. 

ಕೇಂದ್ರದಿಂದ ಸರ್ವರ್ ಹ್ಯಾಕ್ ಆರೋಪ: ಜಾರಕಿಹೊಳಿಗೆ ಸಂಸದ ರಮೇಶ ಜಿಗಜಿಣಗಿ ತಿರುಗೇಟು!

ಇನ್ನು ವಿರಾಜಪೇಟೆಯಲ್ಲಿ ಅಲ್ಲಿನ ಶಾಸಕ ಎ.ಎಸ್. ಪೊನ್ನಣ್ಣ ತಾಲ್ಲೂಕು ಆಡಳಿತದಿಂದ ನಡೆದ ಯೋಗಭ್ಯಾಸದಲ್ಲಿ ಭಾಗವಹಿಸಿ ಯೋಗಭ್ಯಾಸ ಮಾಡಿದರು. ಯೋಗಭ್ಯಾಸದಲ್ಲಿ ಭಾಗವಹಿಸಿದ್ದ ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ್ ಅವರು ಮಾತನಾಡಿ ವಸುದೈವ ಕುಟುಂಬಕ್ಕಾಗಿ ಯೋಗ. ಹರ್ ಆಂಗನ್ ಯೋಗ ಎಂಬ ಘೋಷ ವಾಕ್ಯದೊಂದಿಗೆ ಈ ಬಾರಿಯ ಯೋಗಭ್ಯಾಸ ನಡೆಯುತ್ತಿದೆ. ಜಿಲ್ಲಾಡಳಿತದಿಂದ ಅರ್ಥ ಪೂರ್ಣವಾಗಿ ಮತ್ತು ಸುಸಜ್ಜಿತವಾಗಿ ಯೋಗಭ್ಯಾಸವನ್ನು ಆಯೋಜನೆ ಮಾಡಲಾಗಿದೆ. ಜನರು ಯೋಗ ದಿನದ ಅಂಗವಾಗಿ ಅಂದು ಮಾತ್ರ ಯೋಗ ಮಾಡದೆ ನಿತ್ಯ ಯೋಗ ಮಾಡುವ ಮೂಲಕ ನಿಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಉತ್ತಮವಾಗಿ ಇಟ್ಟುಕೊಳ್ಳಬಹುದು. 

ಹೀಗಾಗಿ ನಿತ್ಯ ಯೋಗ ಮಾಡಿ ಎಂದು ಸಲಹೆ ನೀಡಿದರು. ಇನ್ನು ಕಳೆದ ಒಂದುವರೆ ವರ್ಷದಿಂದ ಕೊಡಗು ಜಿಲ್ಲೆಯಲ್ಲಿ ಜಿಲ್ಲಾ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಯಾಗಿರುವುದಕ್ಕೆ ಮಾಧ್ಯಮಗಳೊಂದಿಗೆ ತಮ್ಮ ಅಭಿಪ್ರಾಯ ಹಂಚಿಕೊಂಡರು. ಒಬ್ಬ ಜಿಲ್ಲಾಧಿಕಾರಿಗೆ ಜಿಲ್ಲೆಗಳಲ್ಲಿ ಕೆಲಸ ಮಾಡುವುದೇ ಒಂದು ವಿಶೇಷ ಅನುಭವ, ಅದೊಂದು ಗೋಲ್ಡನ್ ಅಪರ್ಚುನಿಟಿ ಎಂದು ನಿರ್ಗಮಿತ ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕಳೆದ ಒಂದುವರೆ ವರ್ಷಗಳ ಕಾಲ ಕೊಡಗು ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ಈಗ ಬೆಂಗಳೂರಿಗೆ ವರ್ಗಾವಣೆಯಾಗಿರುವುದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದರು. 

ಧಮ್‌ ಇದ್ರೆ 15 ಕೆ.ಜಿ. ಅಕ್ಕಿ ಕೊಡಿ: ಸಿದ್ದುಗೆ ಸವಾಲ್ ಹಾಕಿದ ಮಾಜಿ ಸಿಎಂ ಬೊಮ್ಮಾಯಿ

ಕೊಡಗು ಜಿಲ್ಲೆಯಲ್ಲಿ 20 ತಿಂಗಳ ಕಾಲ ಕಾರ್ಯ ನಿರ್ವಹಿಸಿದ್ದೇನೆ. ಇದೊಂದು ಯಾವಾಗಲೂ ನೆನಪಿನಲ್ಲಿ ಉಳಿದುಕೊಳ್ಳುವಂತಹ ಕ್ಷಣ. ಕೊಡಗು ಎಂದರೆ ಪ್ರಕೃತಿಯ ತಾಣ, ಇಲ್ಲಿನ ಬೆಟ್ಟಗುಡ್ಡ, ನದಿ, ಹಳ್ಳ ಕೊಳ್ಳ ಅದಕ್ಕಿಂತ ಮುಖ್ಯವಾಗಿ ಇಲ್ಲಿನ ಜನರ ಒಡನಾಟ ಎಲ್ಲವೂ ಮರೆಯಲಾಗದ ಕ್ಷಣಗಳು. ಮತ್ತೊಂದು ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿ ಕೆಲಸ ಮಾಡಲು ಅವಕಾಶ ಸಿಕ್ಕರೆ ಕೆಲಸ ಮಾಡುತ್ತೇನೆ ಎಂದು ಜಿಲ್ಲಾಧಿಕಾರಿ ಬಿ.ಸಿ. ಸತೀಶ್ ಪ್ರತಿಕ್ರಿಯಿಸಿದರು. ಬುಧವಾರ ಕೊನೆಯ ದಿನ ಹೊಸ ಜಿಲ್ಲಾಧಿಕಾರಿಯವರು ಆಗಮಿಸುತ್ತಿದ್ದು ಅವರಿಗೆ ಅಧಿಕಾರ ಹಸ್ತಾಂತರಿಸಿ ತೆರಳುವುದಾಗಿ ಅವರು ಹೇಳಿದರು.

click me!