Coronavirus ಅಂತರಾಜ್ಯ ಚಟುವಟಿಕೆ, ಓಡಾಟಗಳಿಗೆ ಮುಕ್ತ ಅವಕಾಶ, ಅಶ್ವತ್ಥ್ ನಾರಾಯಣ ಸ್ಪಷ್ಟನೆ

By Suvarna News  |  First Published Jan 5, 2022, 11:56 PM IST

* ಕರ್ನಾಟಕದಲ್ಲಿ ಕೊರೋನಾ, ಒಮಿಕ್ರಾನ್ ಹೆಚ್ಚಳ
* ಕರ್ನಾಟಕದಲ್ಲಿ ಕಠಿಣ ರೂಲ್ಸ್ ಜಾರಿಗೆ ತಂದ ರಾಜ್ಯ ಸರ್ಕಾರ
* ಆದ್ರೆ,  ಅಂತರಾಜ್ಯ ಚಟುವಟಿಕೆ, ಓಡಾಟಗಳಿಗೆ ಮುಕ್ತ ಅವಕಾಶ


ಬೆಳಗಾವಿ, (ಜ.05): ರಾಜ್ಯದಲ್ಲಿ ಒಮಿಕ್ರಾನ್ (Omicron) ಹಾಗೂ ಕೊರೋನಾ (Coronavirus( ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ರಾಜ್ಯದೊಳಗೆ ಕಟ್ಟುನಿಟ್ಟಿನ ಕ್ರಮಗಳನ್ನ ಕೈಗೊಂಡಿದೆ.

ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ (Weekend Curfew) ಸೇರಿದಂತೆ ಹಲವು ಟಫ್ ರೂಲ್ಸ್ ಮಾಡಲಾಗಿದೆ. ಆದ್ರೆ, ರಾಜ್ಯದ ಗಡಿಗಳನ್ನು ಸದ್ಯ ಬಂದ್ ಮಾಡುವ ಬಗ್ಗೆ ಯಾವ ನಿರ್ಧಾರ ಮಾಡಿಲ್ಲ.

Tap to resize

Latest Videos

Weekend Curfew ವೀಕೆಂಡ್‌ ಕರ್ಫ್ಯೂ ವೇಳೆ ಬಸ್‌, ಮೆಟ್ರೊ ಸಂಚಾರ ಇರುತ್ತಾ? ಹೊಸ ರೂಲ್ಸ್ ಇಲ್ಲಿದೆ

ಈ ಬಗ್ಗೆ ಬೆಳಗಾವಿಯಲ್ಲಿ ಇಂದು(ಬುಧವಾರ) ಸಚಿವ ಅಶ್ವತ್ಥ್ ನಾರಾಯಣ ಪ್ರತಿಕ್ರಿಯಿಸಿದ್ದು, ಕೊರೋನಾ ಮತ್ತು ಓಮಿಕ್ರಾನ್ ಸೋಂಕು ಪ್ರಕರಣಗಳು ಹೆಚ್ಚುತ್ತಿರುವುದು ನಿಜವಾದರೂ ಬೆಳಗಾವಿ ಸೇರಿದಂತೆ ರಾಜ್ಯದ ಯಾವ ಕಡೆಗಳಲ್ಲೂ ಅಂತರರಾಜ್ಯ ಗಡಿಗಳನ್ನು ಬಂದ್ ಮಾಡುವ ಆಲೋಚನೆ ಸರಕಾರದ ಮುಂದಿಲ್ಲ ಎಂದು ಸ್ಪಷ್ಟಪಡಿಸಿದರು.

ಅಂತರರಾಜ್ಯ ಗಡಿಗಳಲ್ಲಿ ರಾಜ್ಯದೊಳಕ್ಕೆ ಬರುವವರನ್ನು ಪರೀಕ್ಷೆಗೆ ಒಳಪಡಿಸಿ, ಹೆಚ್ಚಿನ ನಿಗಾ ವಹಿಸಲಾಗುವುದು. ಸೋಂಕಿತರು ಕಂಡುಬಂದರೆ ಅಂಥವರನ್ನು ಮಾತ್ರ ನಿಯಂತ್ರಿಸಲಾಗುವುದು. ಉಳಿದಂತೆ ಅಂತರರಾಜ್ಯ ಚಟುವಟಿಕೆ ಮತ್ತು ಓಡಾಟಗಳಿಗೆ ಮುಕ್ತ ಅವಕಾಶ ಮುಂದುವರಿಯಲಿದೆ ಎಂದರು.

ಪರಿಸ್ಥಿತಿ ಕೈಮೀರಿ ಹೋಗಬಾರದೆಂದು 15 ದಿನಗಳ ಮಟ್ಟಿಗೆ ಸರಕಾರವು ವಾರಾಂತ್ಯದ ಕರ್ಫ್ಯೂ ಸೇರಿದಂತೆ ಹಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಸಂಪೂರ್ಣ ಲಾಕ್ ಡೌನನ್ನು ತಡೆಯುವುದೇ ಇದರ ಹಿಂದಿನ ಸದುದ್ದೇಶವಾಗಿದೆ. ಕಚೇರಿಗಳು ಸೇರಿದಂತೆ ಪಬ್, ಬಾರ್, ಚಿತ್ರಮಂದಿರ ಇತ್ಯಾದಿಗಳಲ್ಲಿ ಸಾಮರ್ಥ್ಯದ ಶೇ.50ರಷ್ಟು ಮಾತ್ರ ಜನ ಸೇರುವಂತೆ ಸೂಚಿಸಲಾಗಿದೆ ಎಂದು ಅವರು ಹೇಳಿದರು.

ಮುಂಜಾಗ್ರತಾ ಕ್ರಮಗಳ ಹಿಂದೆ ಮುಖ್ಯವಾಗಿ ಬೆಂಗಳೂರಿನಲ್ಲಿ ಪರಿಸ್ಥಿತಿಯನ್ನು ತಹಬಂದಿಗೆ ತರುವ ಚಿಂತನೆ ಇದೆ. ಹೀಗಾಗಿಯೇ ಅಲ್ಲಿ ಎರಡು ವಾರಗಳ ಮಟ್ಟಿಗೆ ಶಾಲಾಕಾಲೇಜುಗಳನ್ನು ಮುಚ್ಚಲಾಗಿದೆ. ಇದರ ಜತೆಯಲ್ಲೇ 15ರಿಂದ 18 ವರ್ಷದ ಯುವಜನರಿಗೂ ಕೊರೋನಾ ಲಸಿಕೆ ಹಾಕಲು ಆರಂಭಿಸಲಾಗಿದೆ. ಆದ್ದರಿಂದ ಯಾರೂ ಆತಂಕಕ್ಕೆ ಒಳಪಡಬೇಕಾಗಿಲ್ಲ ಎಂದು ಅವರು ಭರವಸೆಯ ಮಾತುಗಳನ್ನಾಡಿದರು.

ವೈದ್ಯಕೀಯ ಕಾಲೇಜುಗಳಲ್ಲೂ ಅಲ್ಲಿನ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಗೆ ಬೂಸ್ಟರ್ ಡೋಸ್ ಕೊಡಲಾಗುತ್ತಿದ್ದು, ಪರಿಸ್ಥಿತಿಯನ್ನು ಎದುರಿಸಲು ಸಜ್ಜುಗೊಳಿಸಲಾಗಿದೆ. ಹತ್ತು ದಿನಗಳ ನಂತರ ಮತ್ತೊಮ್ಮೆ ಸಮಾಲೋಚಿಸಿ, ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಚಿವರು ನುಡಿದರು.

ಬಸ್ ಸಂಚಾರ
ಕೆಎಸ್‌ಆರ್‌ಟಿಸಿ(KSRTC) ಮತ್ತು ಬಿಎಂಟಿಸಿಯ ಬಸ್‌ಗಳ(BMTC Bus) ಓಡಾಟದ ಕುರಿತು ಮಾರ್ಗಸೂಚಿಗಳನ್ನು(Guidelines) ಬಿಡುಗಡೆ ಮಾಡಲಾಗಿದ್ದು,  ಬಸ್‌ ಮತ್ತು ನಮ್ಮ ಮೆಟ್ರೊ (Namma Metro) ಸಂಚಾರಕ್ಕೆ ಸಂಬಂಧಿಸಿದಂತೆ ಪ್ರತ್ಯೇಕವಾಗಿರುವ ಮಾರ್ಗಸೂಚಿಯನ್ನು ರಿಲೀಸ್ ಮಾಡಿದೆ.

ವೀಕೆಂಡ್​ ಕರ್ಫ್ಯೂ ವೇಳೆ ಕೆಎಸ್‌ಆರ್‌ಟಿಸಿ ಬಸ್‌ಗಳು ಎಂದಿನಂತೆ ಸಂಚರಿಸಲಿವೆ. ಪ್ರಯಾಣಿಕರ ಸಂಖ್ಯೆಗೆ ಅನುಗುಣವಾಗಿ ಬಸ್‌ಗಳ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ.

 ರಾಜ್ಯ ಹಾಗೂ ಹೊರ ರಾಜ್ಯದ ನಡುವೆ ಬಸ್ ಸಂಚಾರ ಇರಲಿದೆ. ಗೋವಾ, ಕೇರಳ, ‌ಮಹಾರಾಷ್ಟ್ರ ಹಾಗೂ ತಮಿಳುನಾಡಿನ ಪ್ರಯಾಣಿಕರಿಗೆ ನೆಗೆಟಿವ್ ರಿಪೋರ್ಟ್ ಕಡ್ಡಾಯ ಮಾಡಲಾಗಿದೆ.

ಪಕ್ಕದ ರಜ್ಯಗಳಾದ ಕೇರಳ, ಗೋವಾ ಹಾಗೂ ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಆತಂಕ ಎದುರಾಗಿದೆ ಎಂದು ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಹೇಳಿದ್ದಾರೆ. ಆದರೂ ಗಡಿ ಬಂದ್ ಮಾಡುವ ಚಿಂತನೆ ಮಾಡಿಲ್ಲ

click me!