
ವಿಧಾನಸಭೆ(ಜು.19): ಕೋವಿಡ್ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದ್ದು, ಈ ಬಗ್ಗೆ ಸೂಕ್ತ ತನಿಖೆ ನಡೆಸುವ ಅಗತ್ಯ ಇದೆ. ಹೀಗಾಗಿ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಶ್ವಾಸನೆ ನೀಡಿದ್ದಾರೆ.
ಮಂಗಳವಾರ ಕಾಂಗ್ರೆಸ್ ಸದಸ್ಯ ಈಶ್ವರ್ ಪ್ರದೀಪ್, ಕೋವಿಡ್ ಅವ್ಯವಹಾರ ಕುರಿತು ಗಮನ ಸೆಳೆದ ವಿಚಾರಕ್ಕೆ ಉತ್ತರ ನೀಡಿದ ಅವರು, ಮುಖ್ಯಮಂತ್ರಿಗಳ ಜತೆ ಚರ್ಚೆ ನಡೆಸಿ ಸೂಕ್ತ ಕ್ರಮ ಜರುಗಿಸಲಾಗುವುದು. ಕೋವಿಡ್ ಉಪಕರಣ ಖರೀದಿ ಸೇರಿದಂತೆ ಇತರೆ ವಿಚಾರಗಳಲ್ಲಿ ಅಕ್ರಮ ನಡೆದಿರುವ ಬಗ್ಗೆ ಸಿಎಜಿ ವರದಿಯಲ್ಲಿ ಉಲ್ಲೇಖವಾಗಿದೆ. ಅಲ್ಲದೇ, ಕೆಲವು ಆರ್‌ಟಿಐ ಕಾರ್ಯಕರ್ತರು ಸಹ ಹಲವು ಮಾಹಿತಿಗಳನ್ನು ಇಲಾಖೆಗೆ ಒದಗಿಸಿದ್ದಾರೆ. ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಯೂ ವರದಿಯೂ ಸಹ ನಮ್ಮ ಮುಂದಿದೆ. ಈ ಹಿನ್ನೆಲೆಯಲ್ಲಿ ಕೋವಿಡ್ ಅವ್ಯವಹಾರಗಳ ಬಗ್ಗೆ ತನಿಖೆಯ ಅಗತ್ಯ ಇದೆ ಎಂದು ಹೇಳಿದರು.
ಬಿಜೆಪಿಯಲ್ಲಿ ಜೆಡಿಎಸ್ ವಿಲೀನ ಮಾಡಲಿ: ಸಚಿವ ದಿನೇಶ್ ಗುಂಡೂರಾವ್
ತನಿಖೆಯನ್ನು ಯಾವ ರೀತಿಯಲ್ಲಿ ನಡೆಸಬೇಕು ಎಂಬುದರ ಕುರಿತು ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ. ಎಲ್ಲಾ ವರದಿಗಳನ್ನು ಅಧ್ಯಯನ ನಡೆಸಿದ ಬಳಿಕ ತನಿಖೆಗೆ ವಹಿಸಲಾಗುವುದು. ತಪ್ಪಿಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ