ಎಮ್ಮೆ, ಕೋಣಗಳನ್ನು ಕಡಿಯುವುದಾದರೆ ಹಸುಗಳನ್ನು ಏಕೆ ಕಡಿಯಬಾರದು? ಹಾಗಾಗಿ, ಈ ಬಗ್ಗೆ ಚರ್ಚೆಗಳಾಗುತ್ತಿದ್ದು, ಗೋಹತ್ಯೆ ನಿಷೇಧ ಕಾಯ್ದೆ ಹಿಂಪಡೆಯಬೇಕೇ? ಬೇಡವೇ ಎಂಬುದರ ಕುರಿತು ಚಿಂತನೆ ನಡೆಸಲಾಗುತ್ತಿದೆ ಎಂದ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್
ಮೈಸೂರು(ಜೂ.04): ರಾಜ್ಯದಲ್ಲಿ ಜಾರಿಯಲ್ಲಿರುವ ಗೋಹತ್ಯೆ ನಿಷೇಧ ಕಾಯ್ದೆಯನ್ನು ಹಿಂಪಡೆಯಬೇಕೇ, ಬೇಡವೇ ಎಂಬುದರ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್ ತಿಳಿಸಿದ್ದಾರೆ. ಆ ಮೂಲಕ ಗೋಹತ್ಯೆ ನಿಷೇಧ ಕಾಯ್ದೆ ವಾಪಸ್ ಪಡೆಯುವ ಸುಳಿವು ನೀಡಿದ್ದಾರೆ.
ನಗರದ ಜಲದರ್ಶಿನಿ ಅತಿಥಿಗೃಹದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಮ್ಮೆ, ಕೋಣಗಳನ್ನು ಕಡಿಯುವುದಾದರೆ ಹಸುಗಳನ್ನು ಏಕೆ ಕಡಿಯಬಾರದು? ಹಾಗಾಗಿ, ಈ ಬಗ್ಗೆ ಚರ್ಚೆಗಳಾಗುತ್ತಿದ್ದು, ಗೋಹತ್ಯೆ ನಿಷೇಧ ಕಾಯ್ದೆ ಹಿಂಪಡೆಯಬೇಕೇ? ಬೇಡವೇ ಎಂಬುದರ ಕುರಿತು ಚಿಂತನೆ ನಡೆಸಲಾಗುತ್ತಿದೆ ಎಂದರು.
ಅಪ್ಪಟ ಹಿಂದು ಎನ್ನುವ ಸಿದ್ದರಾಮಯ್ಯ, ಗೋಹತ್ಯೆ ನಿಷೇಧ ಕಾಯ್ದೆ ತಂದಾಗ ಆರ್ಭಟಿಸಿದ್ದೇಕೆ: ಕೋಟ
‘ನನ್ನ ಮನೆಯಲ್ಲೂ 3-4 ಹಸುಗಳಿವೆ. ಈ ಪೈಕಿ ಒಂದು ಹಸು ಸತ್ತಾಗ ಗುಂಡಿ ತೋಡಿ ಹೂಳಲು ತುಂಬಾ ಕಷ್ಟಪಡಬೇಕಾಯಿತು. 25 ಮಂದಿ ಬಂದರೂ ಸತ್ತ ಹಸುವಿನ ಮೃತದೇಹ ಎತ್ತಲು ಸಾಧ್ಯವಾಗಲಿಲ್ಲ. ಕೊನೆಗೆ ಜೆಸಿಬಿ ತರಿಸಿ ಮೃತ ಹಸುವನ್ನು ಎತ್ತಿಸಿ ಗುಂಡಿ ತೋಡಿ ಹೂಳಬೇಕಾಯಿತು. ಹಾಗಾಗಿ, ಗೋಹತ್ಯೆ ನಿಷೇಧ ಕಾನೂನಿನ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ. ಒಟ್ಟಿನಲ್ಲಿ ರೈತರಿಗೆ ಅನುಕೂಲವಾಗುವ ರೀತಿಯಲ್ಲಿ ಸೂಕ್ತ ತೀರ್ಮಾನ ಮಾಡುತ್ತೇವೆ’ ಎಂದರು. 2021ರಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿಗೆ ಬಂದಿತ್ತು.
ಪಶುವೈದ್ಯ ಸಿಬ್ಬಂದಿ ನೇಮಕ:
ರಾಜ್ಯದಲ್ಲಿ ಹೆಚ್ಚು, ಹೆಚ್ಚು ಜನ ಹೈನುಗಾರಿಕೆಯನ್ನು ಅವಲಂಬಿಸುತ್ತಿದ್ದಾರೆ. ಹೀಗಾಗಿ, ಜಾನುವಾರುಗಳಿಗೆ ಸೂಕ್ತ ಚಿಕಿತ್ಸಾ ಸೌಲಭ್ಯ ಕಲ್ಪಿಸುವ ಅಗತ್ಯವಿದೆ. ರಾಜ್ಯದಲ್ಲಿ 4,600 ಪಶು ವೈದ್ಯಕೀಯ ಆಸ್ಪತ್ರೆಗಳಿವೆ. ಇಲ್ಲಿ ವೈದ್ಯರು ಸೇರಿದಂತೆ 18 ಸಾವಿರ ಸಿಬ್ಬಂದಿಯ ಅವಶ್ಯಕತೆಯಿದೆ. ಆದರೆ, ಪ್ರಸ್ತುತ ವೈದ್ಯರು ಸೇರಿ 9 ಸಾವಿರ ಸಿಬ್ಬಂದಿ ಮಾತ್ರ ಇದ್ದಾರೆ. ಹೀಗಾಗಿ, ಖಾಲಿ ಇರುವ ಸ್ಥಾನಗಳನ್ನು ಹಂತ, ಹಂತವಾಗಿ ತುಂಬಲಾಗುವುದು ಎಂದು ತಿಳಿಸಿದರು.
ಗೋ ರಕ್ಷಣೆಗಾಗಿ ಗೋಶಾಲೆ ಸ್ಥಾಪನೆ: ಸಚಿವ ಪ್ರಭು ಚವ್ಹಾಣ್
ಹಸು ದತ್ತು ಯೋಜನೆ ಪರಿಶೀಲನೆ:
ಹಸು ದತ್ತು ಯೋಜನೆ ಏನಾಗಿದೆ ಎಂದು ಪರಿಶೀಲಿಸುತ್ತೇವೆ. ಗೋಶಾಲೆಗಳ ನಿರ್ವಹಣೆ ಮಾಡಲು ಹಣದ ಕೊರತೆಯಿಲ್ಲ. ಆದರೆ, ನಿರ್ವಹಣೆ ಸರಿಯಾಗಿ ಆಗಿಲ್ಲ. ಮುಂದೆ ಎಲ್ಲವನ್ನೂ ಸರಿಪಡಿಸುತ್ತೇವೆ ಎಂದು ಹೇಳಿದರು. ಅಮುಲ್ ಬಗ್ಗೆ ಪ್ರತಿಕ್ರಿಯಿಸಿ, ರಾಜ್ಯಕ್ಕೆ ಅಮುಲ್ ಬಂದಿಲ್ಲ. ಅಮುಲ್‌ನಿಂದ ನಂದಿನಿಗೆ ತೊಂದರೆ ಆಗಿಲ್ಲ. ಮುಂದಿನ ದಿನಗಳಲ್ಲಿ ಅಮುಲ್ ಬಂದಾಗ ನೋಡೋಣ. ನಂದಿನಿ ಉತ್ಪನ್ನಗಳ ಉತ್ತೇಜನಕ್ಕೆ ಕ್ರಮ ಕೈಗೊಳ್ಳುತ್ತೇವೆ ಎಂದು ಸಚಿವರು ಭರವಸೆ ನೀಡಿದರು.
ಕಾಂಗ್ರೆಸ್ಸಿನ ಹಿಂದು ದ್ವೇಷ ರಾಜಕಾರಣ 2.0 ಶುರು
ನಾವು ಮಾತೆ ಎಂದು ಪೂಜಿಸುವ ಗೋವುಗಳನ್ನು ಕಡಿದರೆ ತಪ್ಪೇನು ಎಂದು ಪಶುಸಂಗೋಪನಾ ಸಚಿವರು ಉಡಾಫೆಯಾಗಿ ಮಾತನಾಡುತ್ತಿದ್ದಾರೆ. ಗೋಕಳ್ಳರ ಅಟ್ಟಹಾಸಕ್ಕೆ ಇನ್ನೆಷ್ಟುಗೋವುಗಳು, ಅವುಗಳ ರಕ್ಷಣೆಗೆ ಧಾವಿಸುವ ಇನ್ನೆಷ್ಟುಹಿಂದೂಗಳು ಬಲಿಯಾಗಬೇಕೋ. ಕಾಂಗ್ರೆಸ್‌ನ ಹಿಂದು ದ್ವೇಷ ರಾಜಕಾರಣದ ಭಾಗ-2 ಆರಂಭಗೊಂಡಿದೆ ಅಂತ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.