ಬಳ್ಳಾರಿ(ಜ.05): ಮಾಜಿ ಸಚಿವ ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ರಾಜ್ಯ ಸರ್ಕಾರ ಅನುಮತಿ ನೀಡಿಲ್ಲ. ಹೀಗಾಗಿ ರಾಜ್ಯ ಸರ್ಕಾರದ ವಿರುದ್ಧ ಸಿಬಿಐ ಹೈಕೋರ್ಟ್ ಮೆಟ್ಟಿಲೇರಿದೆ. ಹೊಸದಾಗಿ ಜನಾರ್ದನ ರೆಡ್ಡಿಗೆ ಸೇರಿದ 219 ಆಸ್ತಿಯನ್ನ ಸಿಬಿಐ ಪತ್ತೆ ಮಾಡಿದೆ. ಕರ್ನಾಟಕ, ಆಂಧ್ರ, ತೆಲಂಗಾಣ ರಾಜ್ಯಗಳಲ್ಲಿ ಆಸ್ತಿಗಳು ಪತ್ತೆಯಾಗಿವೆ.
ಆಸ್ತಿಗಳ ಜಪ್ತಿಗೆ ಅನುಮತಿ ಕೋರಿ ಆಗಸ್ಟ್ 30 ರಂದು ಸಿಬಿಐ ಅರ್ಜಿ ಸಲ್ಲಿಸಿತ್ತು. ಆದ್ರೆ, ರಾಜ್ಯ ಸರ್ಕಾರ ಅನುಮತಿ ನೀಡಿಲ್ಲ. ಹೀಗಾಗಿ ಸಿಬಿಐ ಅರ್ಜಿ ಸಲ್ಲಿಸಿರುವುದನ್ನ ತಿಳಿದು ಆಸ್ತಿ ಮಾರಾಟ ಮಾಡಲು ಜನಾರ್ದನ ರೆಡ್ಡಿ ಮುಂದಾಗಿದ್ದಾರೆ ಅಂತ ತಿಳಿದು ಬಂದಿದೆ.
Ballari: ಜನಾರ್ಧನ ರೆಡ್ಡಿಯ ಕೆಆರ್‌ಪಿಪಿ ಪಕ್ಷದ ಬಾವುಟ ಲೋಕಾರ್ಪಣೆ: ಪ್ರಚಾರ ಕಾರ್ಯ ಆರಂಭಿಸಿದ ಲಕ್ಷ್ಮೀ ಅರುಣಾ
ಕರ್ನೂಲ್, ರಂಗಾರೆಡ್ಡಿ ಜಿಲ್ಲೆಗಳಲ್ಲಿ ಇರುವ ಆಸ್ತಿಗಳ ಮಾರಾಟಕ್ಕೆ ಜನಾರ್ದನ ರೆಡ್ಡಿ ಯತ್ನಿಸಿದ್ದಾರೆ. ಜಪ್ತಿಗೆ ಅನುಮತಿ ನೀಡುವ ಬಗ್ಗೆ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಿಬಿಐ ಅರ್ಜಿ ಸಲ್ಲಿಸಿದೆ. ಅಕ್ರಮ ಗಣಿಗಾರಿಕೆಯಿಂದ ಆಸ್ತಿ ಸಂಪಾದನೆ ಮಾಡಲಾಗಿದೆ ಎಂಬುದು ಸಿಬಿಐ ಆರೋಪವಾಗಿದೆ. ಕರ್ನಾಟಕ, ಆಂಧ್ರ, ತೆಲಂಗಾಣ ರಾಜ್ಯಗಳಲ್ಲಿ ಸುಮಾರು 65 ಕೋಟಿ ಮೌಲ್ಯದ ಆಸ್ತಿಗಳನ್ನ ಸಿಬಿಐ ಪತ್ತೆ ಮಾಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ