ಸಚಿವ ನಾರಾಯಣಗೌಡ ವಿರುದ್ಧ ಕೇಸ್‌ಗೆ ರಾಜ್ಯಪಾಲರ ಒಪ್ಪಿಗೆ?

Kannadaprabha News   | Asianet News
Published : Feb 19, 2021, 09:13 AM IST
ಸಚಿವ ನಾರಾಯಣಗೌಡ ವಿರುದ್ಧ ಕೇಸ್‌ಗೆ ರಾಜ್ಯಪಾಲರ ಒಪ್ಪಿಗೆ?

ಸಾರಾಂಶ

ತಪ್ಪು ಆಸ್ತಿ ವಿವರ ಸಲ್ಲಿಕೆ ಆರೋಪ| ಖಾಸಗಿ ದೂರು ದಾಖಲಿಸಲು ಅನುಮತಿ ಕೋರಿದ್ದ ಸಾಮಾಜಿಕ ಕಾರ್ಯಕರ್ತ| ಸೂಕ್ತ ಕ್ರಮಕ್ಕಾಗಿ ಸರ್ಕಾರಕ್ಕೆ ವರ್ಗಾಯಿಸಿದ ರಾಜ್ಯಪಾಲರು| ರಾಜ್ಯಪಾಲರಿಂದ ತನಿಖೆಗೆ ಆದೇಶ ಎಂದು ತಪ್ಪು ಮಾಹಿತಿ ಹರಿದಾಡುತ್ತಿದೆ. ಇದು ಸತ್ಯಕ್ಕೆ ದೂರವಾದುದು ಎಂದು ಪ್ರಕಟಣೆ ನೀಡಿದ ಸಚಿವರು| 

ಬೆಂಗಳೂರು(ಫೆ.19): ಆಸ್ತಿ ವಿವರ ಸಲ್ಲಿಕೆಯಲ್ಲಿ ತಪ್ಪು ಮಾಹಿತಿ ನೀಡಿರುವ ಆರೋಪದ ಮೇರೆಗೆ ಕೆ.ಆರ್‌.ಪೇಟೆ ಕ್ಷೇತ್ರದ ಶಾಸಕರೂ ಆಗಿರುವ ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವ ಕೆ.ಸಿ.ನಾರಾಯಣಗೌಡ ವಿರುದ್ಧ ಖಾಸಗಿ ದೂರು ದಾಖಲಿಸಲು ಅನುಮತಿ ನೀಡುವ ಮನವಿಯನ್ನು ರಾಜ್ಯಪಾಲರು ಸೂಕ್ತ ಕ್ರಮಕ್ಕಾಗಿ ಸರ್ಕಾರಕ್ಕೆ ವರ್ಗಾಯಿಸಿದ್ದಾರೆ. 

ಸಾಮಾಜಿಕ ಕಾರ್ಯಕರ್ತ ದಿನೇಶ್‌ ಕಲ್ಲಳ್ಳಿ ಅವರು ಸಚಿವರ ವಿರುದ್ಧ ದೂರು ದಾಖಲಿಸಲು ರಾಜ್ಯಪಾಲರಿಗೆ ಅನುಮತಿ ನೀಡುವಂತೆ ಪತ್ರ ಬರೆದಿದ್ದರು. ಸಚಿವ ನಾರಾಯಣಗೌಡ 2013ರ ಸಾರ್ವತ್ರಿಕ ಚುನಾವಣೆ ವೇಳೆಯ ಆಸ್ತಿ ವಿವರ ಮತ್ತು 2018ರ ಉಪಚುನಾವಣೆಯಲ್ಲಿ ನಮೂದಿಸಿರುವ ಆಸ್ತಿ ವಿವರಕ್ಕೂ ಸಾಕಷ್ಟು ವ್ಯತ್ಯಾಸ ಇದೆ. ಸಚಿವರು ತಪ್ಪು ಮಾಹಿತಿ ನೀಡಿದ್ದು, ಅಕ್ರಮ ಆಸ್ತಿ ಗಳಿಸಿದ್ದಾರೆ. ತಮ್ಮ ಆಸ್ತಿಯ ವಾಸ್ತವಾಂಶವನ್ನು ಮರೆಮಾಚಿದ್ದಾರೆ. ಹೀಗಾಗಿ ದೂರು ದಾಖಲಿಸಲು ಅನುಮತಿ ನೀಡಬೇಕು ಎಂದು ಕೋರಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಸಚಿವ ನಾರಾಯಣಗೌಡ, ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಅಲ್ಲಿ ಬ್ಲಾಸ್ಟ್ : ಇಲ್ಲಿ ಎಚ್ಚೆತ್ತುಕೊಂಡ ಸಚಿವ ನಾರಾಯಣಗೌಡ ವಾರ್ನಿಂಗ್

ದಿನೇಶ್‌ ಅವರ ಮನವಿಯನ್ನು ಪುರಸ್ಕರಿಸಿದ ರಾಜ್ಯಪಾಲ ವಜುಭಾಯಿ ವಾಲಾ ಅವರ ಕಚೇರಿಯಿಂದ ಈ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಲಾಗಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಸಾಮಾಜಿಕ ಕಾರ್ಯಕರ್ತ ದಿನೇಶ್‌ ಕಲ್ಲಳ್ಳಿ, 2013ರ ಚುನಾವಣೆ ಮತ್ತು 2018ರ ಚುನಾವಣೆ ವೇಳೆ ನಾರಾಯಣಗೌಡ ಅವರು ಸಲ್ಲಿಕೆ ಮಾಡಿರುವ ಆಸ್ತಿ ವಿವರದಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ದೂರು ನೀಡಲು ರಾಜ್ಯಪಾಲರ ಅನುಮತಿಗಾಗಿ ಪತ್ರ ಬರೆದಿದ್ದೆ. ಈಗ ರಾಜ್ಯಪಾಲರಿಂದ ಅನುಮತಿ ನೀಡಲಾಗಿದ್ದು, ಜನಪ್ರತಿನಿಧಿಗಳ ನ್ಯಾಯಾಲಯ ಅಥವಾ ಲೋಕಾಯುಕ್ತ ನ್ಯಾಯಾಲಯಕ್ಕೆ ದೂರು ನೀಡಲಾಗುವುದು ಎಂದು ತಿಳಿಸಿದ್ದಾರೆ.

ತನಿಖೆಗೆ ಆದೇಶಿಸಿಲ್ಲ-ಸಚಿವರ ಸ್ಪಷ್ಟನೆ:

ಈ ನಡುವೆ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿಲ್ಲ ಎಂದು ಸಚಿವ ನಾರಾಯಣಗೌಡ ಸ್ಪಷ್ಟಪಡಿಸಿದ್ದಾರೆ. ಸಾಮಾಜಿಕ ಕಾರ್ಯಕರ್ತ ದಿನೇಶ್‌ ಕಲ್ಲಳ್ಳಿ ಎಂಬುವವರು ರಾಜ್ಯಪಾಲರಿಗೆ ಖಾಸಗಿ ದೂರು ನೀಡಿದ್ದು, ಅದನ್ನು ರಾಜ್ಯಪಾಲರ ಕಚೇರಿಯಿಂದ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಮುಂದಿನ ಕ್ರಮಕ್ಕಾಗಿ ಎಂದು ವರ್ಗಾಯಿಸಿದ್ದಾರೆ. ಹೀಗಾಗಿ ರಾಜ್ಯಪಾಲರಿಂದ ತನಿಖೆಗೆ ಆದೇಶ ಎಂದು ತಪ್ಪು ಮಾಹಿತಿ ಹರಿದಾಡುತ್ತಿದೆ. ಇದು ಸತ್ಯಕ್ಕೆ ದೂರವಾದುದು ಎಂದು ಸಚಿವರು ಪ್ರಕಟಣೆ ನೀಡಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಸ್ತ್ರಿರೋಗ ತಜ್ಞೆ, ಪುತ್ರನ ದುರಂತ ಅಂತ್ಯ, ರಾತ್ರಿ ಜಗಳವಾಡಿದ ಇಬ್ಬರು ಬೆಳಗ್ಗೆ ಶವವಾಗಿ ಪತ್ತೆ
ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!