Karnataka Social and Educational Survey: ಭಾಗವಹಿಸುವುದು ಕಡ್ಡಾಯವೇ? ಆಯೋಗ ಹೇಳಿದ್ದೇನು?

Kannadaprabha News, Ravi Janekal |   | Kannada Prabha
Published : Sep 27, 2025, 08:23 AM IST
Social and Educational Survey Karnataka

ಸಾರಾಂಶ

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಭಾಗವಹಿಸುವುದು ಜನರ ಸ್ವಯಂ ಇಚ್ಛೆಗೆ ಬಿಟ್ಟಿದ್ದು ಎಂದು ಸ್ಪಷ್ಟಪಡಿಸಿದೆ. ಯಾವುದೇ ಕುಟುಂಬ ಅಥವಾ ವ್ಯಕ್ತಿಯನ್ನು ಮಾಹಿತಿ ನೀಡುವಂತೆ ಒತ್ತಾಯಿಸಲಾಗುವುದಿಲ್ಲ ಎಂದು ಆಯೋಗ ತಿಳಿಸಿದೆ

 ಬೆಂಗಳೂರು (ಸೆ. 27): ರಾಜ್ಯದಲ್ಲಿ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಭಾಗವಹಿಸಿರುವುದು ಜನರು ಅಥವಾ ಕುಟುಂಬಗಳ ಸ್ವಯಂ ಇಚ್ಛೆಗೆ ಬಿಡಲಾಗಿದೆ ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸ್ಪಷ್ಟಪಡಿಸಿದೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಆಯೋಗವು, ಸೆ.22 ರಿಂದ ರಾಜ್ಯದ ಕುಟುಂಬಗಳ ಹಾಗೂ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಾರಂಭಿಸಲಾಗಿದೆ. ರಾಜ್ಯದ ಸಂಪೂರ್ಣ ಜನಸಂಖ್ಯೆಯನ್ನು ಸಮೀಕ್ಷೆಗೆ ಒಳಪಡಿಸಲು ಉದ್ದೇಶಿಸಲಾಗಿದೆ. ಆದರೆ ಸಮೀಕ್ಷೆಯಲ್ಲಿ ಭಾಗವಹಿಸುವುದು ಜನರ ಅಥವಾ ಕುಟುಂಬಗಳ ಸ್ವಯಂ ಇಚ್ಛೆಗೆ ಬಿಡಲಾಗಿದೆ. ಮಾಹಿತಿ ನೀಡುವ ಬಗ್ಗೆ, ಸಮೀಕ್ಷೆಯಲ್ಲಿ ಭಾಗವಹಿಸುವ ಬಗ್ಗೆ ಆಯೋಗ ಒತ್ತಾಯ ಮಾಡುತ್ತಿಲ್ಲ ಎಂದು ಸ್ಪಷ್ಟೀಕರಿಸಲಾಗಿದೆ ಎಂದು ಆಯೋಗದ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: Karnataka Caste survey: ಗಣತಿ ಲೊಕೇಷನ್‌ ಆಫ್ರಿಕಾ, ಗುಜರಾತ, ಸ್ಮಶಾನಕ್ಕೆ ಹೋಗುತ್ತೆ!

ಸಮೀಕ್ಷೆಯಲ್ಲಿ ಭಾಗವಹಿಸುವಂತೆ ಒತ್ತಾಯ ಮಾಡುವಂತಿಲ್ಲ ಎಂದು ನ್ಯಾಯಾಲಯ ಹೇಳಿದೆ. ನಾವು ಸಹ ಅದನ್ನೇ ಹೇಳಿದ್ದೇವೆ. ಸಮೀಕ್ಷೆಯಲ್ಲಿ ಬರೆಸಬಹುದು ಅಥವಾ ಬಿಡಬಹುದು. ನಾವು ಯಾರನ್ನೂ ಒತ್ತಾಯ ಮಾಡುವುದಿಲ್ಲ.

- ಶಿವರಾಜ್‌ ತಂಗಡಗಿ, ಸಚಿವರು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!
ಐಷಾರಾಮಿ ಕಾರ್ಟಿಯರ್ ವಾಚ್‌: ಲೋಕಾಯುಕ್ತ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!