
ಬೆಂಗಳೂರು(ಏ.11): ತಾಯಿ ಎದೆಹಾಲು ಸಂಗ್ರಹಣೆ ಹಾಗೂ ಮಾರಾಟ ತಡೆಯಲು ಯಾವುದಾದರೂ ಕಾನೂನು ಜಾರಿಯಲ್ಲಿದೆಯೇ ಎಂಬ ಬಗ್ಗೆ ಅಧ್ಯಯನ ನಡೆಸಿ ಮಾಹಿತಿ ನೀಡುವಂತೆ ಅರ್ಜಿದಾರ ಪರ ವಕೀಲರಿಗೆ ಹೈಕೋರ್ಟ್ ನಿರ್ದೇಶಿಸಿದೆ.
ತಾಯಿ ಎದೆ ಹಾಲನ್ನು ವಾಣಿಜ್ಯಕರಣ ಮಾಡುತ್ತಿರುವುದನ್ನು ನಿಲ್ಲಿಸಲು ಸರ್ಕಾರಕ್ಕೆ ಆದೇಶಿಸುವಂತೆ ಕೋರಿ ಬೆಂಗಳೂರಿನ ಮರಳಕುಂಟೆ ನಿವಾಸಿ ಮುನೇಗೌಡ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠವು ಅರ್ಜಿದಾರರ ಪರ ವಕೀಲ ಬಿ.ವಿಶ್ವೇಶ್ವರಯ್ಯ ಅವರಿಗೆ ಈ ಸೂಚನೆ ನೀಡಿತು. ವಿಚಾರಣೆ ವೇಳೆ ವಕೀಲ ಬಿ.ವಿಶ್ವೇಶ್ವರಯ್ಯ ಹಾಜರಾಗಿ, ಕೆಲ ಬಹುರಾಷ್ಟ್ರೀಯ ಕಂಪನಿಗಳು ತಾಯಿ ಎದೆ ಹಾಲು ವಾಣಿಜ್ಯಕರಣ ಮಾಡುತ್ತಿವೆ. ಅನೈತಿಕ ವಾಗಿರುವ ಈ ವ್ಯಾಪಾರವನ್ನು ತಡೆಯಬೇಕು.
ದೇಶದ ಇತಿಹಾಸದಲ್ಲೇ ಮೊದಲು: ಕರ್ನಾಟಕ ಹೈಕೋರ್ಟ್‌ನಲ್ಲಿ ವಾಕ್, ಶ್ರವಣ ದೋಷಿ ವಕೀಲೆ ವಾದ..!
ಆ ಸಂಬಂಧ ನಿರ್ದಿಷ್ಟ ಕಾನೂನು ರೂಪಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿದರು. ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಅದನ್ನು ತಡೆಯಲು ದೇಶ-ವಿದೇಶದಲ್ಲಿ ಯಾವುದಾದರೂ ಕಾನೂನುಗಳ ಇವೆಯೇ ಎಂದು ಪ್ರಶ್ನಿಸಿತು. ಅದಕ್ಕೆ ಉತ್ತರಿಸಿದ ವಕೀಲರು, ನಾನು ನಡೆಸಿದ ಅಧ್ಯಯನ ಪ್ರಕಾರ ಯಾವುದೇ ಕಾನೂನು ಇಲ್ಲ ಎಂದರು. ಇದಕ್ಕೆ ನ್ಯಾಯಪೀಠ ಪ್ರತಿಕ್ರಿಯಿಸಿ, ಕಾನೂನಿನ ಚೌಕ ಟ್ಟು ಇರಬೇಕಲ್ಲವೇ? ಇಲ್ಲವಾದರೆ ಕಾನೂನು ರೂಪಿಸುವಂತೆ ನಿರ್ದೇಶಿಸಲು ಪಿಐಎಲ್ ವ್ಯಾಪ್ತಿಯಲ್ಲಿ ಹೇಗೆ ಸಾಧ್ಯ ಎಂದು ಕೇಳಿತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ