
ಬೆಂಗಳೂರು(ನ.16): ಗುಂಡಿಗಳ ಮೇಲೆ ಸಂಪತ್ತಿನ ಗೋಪುರ ಕಟ್ಟುವ ಬಿಜೆಪಿ ಸರ್ಕಾರಕ್ಕೆ ಆತ್ಮಸಾಕ್ಷಿ ಎನ್ನುವುದೇ ಇಲ್ಲ. ರಾಜ್ಯಾದ್ಯಂತ ರಸ್ತೆಗಳಲ್ಲಿ ಬಿದ್ದಿರುವ ಗುಂಡಿಗಳಿಗೆ ಬಲಿಯಾಗುವ ಸರಣಿ ಮುಂದುವರಿದಿರುವುದು ಅತ್ಯಂತ ಕಳವಳಕಾರಿ. ರಾಜ್ಯದ ಕಳಪೆ ರಸ್ತೆಗಳಿಗೆ ಪರಿಹಾರವೇ ಇಲ್ಲವೇ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟೀಕಾಪ್ರಹಾರ ನಡೆಸಿದ್ದಾರೆ.
ಮಂಡ್ಯದಲ್ಲಿ ನಿವೃತ್ತ ಯೋಧರೊಬ್ಬರು ರಸ್ತೆಗುಂಡಿಗೆ ಬಿದ್ದು ಲಾರಿ ಕೆಳಗೆ ಜೀವ ಕಳೆದುಕೊಂಡ ಘಟನೆ ಕುರಿತು ಕಂಬನಿ ಮಿಡಿದಿರುವ ಅವರು ಟ್ವೀಟರ್‌ನಲ್ಲಿ ಸರ್ಕಾರ ವಿರುದ್ಧ ಕಿಡಿಕಾರಿದ್ದಾರೆ.
ಮೂರೂವರೆ ವರ್ಷಗಳ ನಂತರ ಜೆಡಿಎಸ್ ಕಚೇರಿಗೆ ಕಾಲಿಟ್ಟ ಜಿಟಿಡಿ: ಸಿಹಿ ತಿನ್ನಿಸಿದ ಎಚ್‌ಡಿಕೆ
ಸೇನೆಯಿಂದ ಇತ್ತೀಚೆಗಷ್ಟೇ ನಿವೃತ್ತಿಯಾಗಿದ್ದ ಕುಮಾರ್ ಎಂಬ ಯೋಧರು ಮಂಡ್ಯದ ಕಾರಿಮನೆ ಗೇಟ್ ಬಳಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ರಸ್ತೆಗುಂಡಿಗೆ ಬಿದ್ದೊಡನೆ ಅವರ ಮೇಲೆ ಲಾರಿ ಹರಿದು ಕೊನೆಯುಸಿರೆಳೆದಿರುವುದು ಈ ವ್ಯವಸ್ಥೆಯ ಕರಾಳತೆಗೆ ಹಿಡಿದ ಕನ್ನಡಿಯಾಗಿದೆ. ಪೊಲೀಸ್ ತರಬೇತಿ ಪಡೆಯುತ್ತಿದ್ದ ಕುಮಾರ್, ಬದುಕಿನಲ್ಲಿ ಅರ್ಥಪೂರ್ಣ ಕನಸುಗಳನ್ನು ಕಟ್ಟಿಕೊಂಡಿದ್ದರು. ತಮ್ಮ ತಂದೆಯವರ ಜತೆ ಸಾತನೂರು ಗ್ರಾಮಕ್ಕೆ ಹೋಗುವಾಗ ಈ ದುರ್ಘಟನೆ ನಡೆದಿದೆ. ಆ ವೃದ್ಧ ತಂದೆಗೆ ಆಸರೆಯಾಗಿದ್ದ ಪುತ್ರ ಗುಂಡಿಯಿಂದ ಜೀವ ಕಳೆದುಕೊಂಡಿದ್ದು ರಾಜ್ಯದ ಕಳಪೆ ರಸ್ತೆಗಳಿಗೆ ಹಿಡಿದ ಕನ್ನಡಿಯಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ