ISRO Land Acquisition: ಇಸ್ರೋಗಾಗಿ 81 ಎಕರೆ ಜಮೀನು ಸ್ವಾಧೀನ ಅಧಿಸೂಚನೆ ರದ್ದುಪಡಿಸಿದ ಹೈಕೋರ್ಟ್‌, ಏನಿದು ಪ್ರಕರಣ?

Published : Jul 08, 2025, 11:56 AM ISTUpdated : Jul 08, 2025, 12:27 PM IST
karnataka highcourt

ಸಾರಾಂಶ

ಇಸ್ರೋಗಾಗಿ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ನಿಯಮ ಉಲ್ಲಂಘನೆಯಾಗಿದೆ ಎಂದು ಹೈಕೋರ್ಟ್ ತೀರ್ಪು ನೀಡಿದೆ. ದೇವನಹಳ್ಳಿ ತಾಲೂಕಿನಲ್ಲಿ ೮೧ ಎಕರೆ ಜಮೀನು ಸ್ವಾಧೀನಕ್ಕೆ ಹೊರಡಿಸಿದ್ದ ಅಧಿಸೂಚನೆಯನ್ನು ರದ್ದುಗೊಳಿಸಲಾಗಿದೆ. 

ಬೆಂಗಳೂರು (ಜುಲೈ 8) : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಗಾಗಿ (ಇಸ್ರೋ) ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಅಬ್ಬಚಿಕ್ಕನಹಳ್ಳಿ ಮತ್ತು ಲಾಲಗೊಂಡನಹಳ್ಳಿ ಗ್ರಾಮಗಳಲ್ಲಿ 81 ಎಕರೆ ಜಮೀನು ಸ್ವಾಧೀನಪಡಿಸಿಕೊಳ್ಳಲು ಹೊರಡಿಸಿದ್ದ ಅಧಿಸೂಚನೆಯನ್ನು ಹೈಕೋರ್ಟ್‌ ರದ್ದುಪಡಿಸಿದೆ.

ಭೂ ಸ್ವಾಧೀನ ಪ್ರಕ್ರಿಯೆ ಸಂಬಂಧ ಹೊರಡಿಸಿದ್ದ ಅಧಿಸೂಚನೆ ರದ್ದು ಕೋರಿ ದೇವನಹಳ್ಳಿ, ಬೆಂಗಳೂರು ಮತ್ತು ಹೈದ್ರಾಬಾದ್‌ ಮೂಲದ ಭೂಮಾಲಿಕರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್‌.ಆರ್‌. ಕೃಷ್ಣಕುಮಾರ್ ಅವರ ನ್ಯಾಯಪೀಠ ಈ ಆದೇಶ ನೀಡಿದೆ.

ಈ ಜಮೀನುಗಳ ಸ್ವಾಧೀನಕ್ಕೆ 2010ರ ಜ.28ರಂದು ಪ್ರಾಥಮಿಕ ಅಧಿಸೂಚನೆ ಹಾಗೂ 2011ರ ಮೇ 30ರಂದು ಅಂದರೆ ಒಂದು ವರ್ಷದ ಬಳಿಕ ಅಂತಿಮ ಅಧಿಸೂಚನೆ ಹೊರಡಿಸಲಾಗಿತ್ತು. ಜೊತೆಗೆ, 2013ರ ಜು.19ರಂದು ಭೂ ಮಾಲೀಕರಿಗೆ ಪರಿಹಾರವನ್ನೂ ಘೋಷಣೆ ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಭೂ ಮಾಲೀಕರು, ಪ್ರಾಥಮಿಕ ಅಧಿಸೂಚನೆ ಹೊರಡಿಸಿದ ಒಂದು ವರ್ಷದ ಅಂತ್ಯದ ವೇಳೆಗೆ ಅಂತಿಮ ಅಧಿಸೂಚನೆ ಹೊರಡಿಸಬೇಕು ಎಂದು ಭೂ ಸ್ವಾಧೀನ ಕಾಯ್ದೆ ಸೆಕ್ಷನ್‌ 6(2)ರಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ. ಹೀಗಾಗಿ, ಭೂ ಸ್ವಾಧೀನ ಪ್ರಕ್ರಿಯೆ ರದ್ದು ಮಾಡಬೇಕು ಎಂದು ಕೋರಿದ್ದರು.

ಈ ವಾದ ಪುರಸ್ಕರಿಸಿದ ನ್ಯಾಯಪೀಠ, ಪ್ರಾಥಮಿಕ ಅಧಿಸೂಚನೆ ಹೊರಡಿಸಿದ ಒಂದು ವರ್ಷದಲ್ಲಿ ಅಂತಿಮ ಅಧಿಸೂಚನೆ ಹೊರಡಿಸಲಾಗಿಲ್ಲ. ಈ ವಿಳಂಬದ ಕುರಿತು ವಿಚಾರಣೆ ನಡೆಸಿಲ್ಲ. ನಿಯಮಗಳನ್ನು ಉಲ್ಲಂಘಿಸಿ ಸ್ವಾಧೀನ ಪ್ರಕ್ರಿಯೆ ನಡೆಸಿದ್ದು, ಅಂತಿಮ ಅಧಿಸೂಚನೆ ಅಂಗೀಕರಿಸಲಾಗಿದೆ. ರಾಜ್ಯ ಸರ್ಕಾರ ಮತ್ತು ಇಸ್ರೋ 2013ರ ಜು.19ರಂದು ಪರಿಹಾರ ಘೋಷಣೆ ಮಾಡಲಾಗಿದೆ ಎಂದು ಹೇಳಿವೆ. ಆದರೆ, ಅದನ್ನು ಸ್ಪಷ್ಟಪಡಿಸಲು ಯಾವುದೇ ದಾಖಲೆಗಳನ್ನು ಒದಗಿಸಿಲ್ಲ. ಒಂದು ವರ್ಷದ ಬಳಿಕ ಭೂ ಮಾಲೀಕರಿಗೆ ಪರಿಹಾರ ನೀಡುವ ಸಂಬಂಧ ನೋಟಿಸ್‌ ನೀಡಲಾಗಿದೆ. ಈ ಎಲ್ಲ ಕಾರಣಗಳಿಂದ ಅಧಿಸೂಚನೆ ರದ್ದುಪಡಿಸಲಾಗುತ್ತಿದೆ ಎಂದು ಪೀಠ ತಿಳಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ನನಗೂ ಸಿಎಂ ಆಗುವ ಆಸೆ ಇದೆ, ಹೈಕಮಾಂಡ್ ನಿರ್ಧಾರ ಅಂತಿಮ: ದಿನೇಶ್‌ ಗುಂಡೂರಾವ್
Karnataka News Live: ನ್ಯಾಷನಲ್‌ ಹೆರಾಲ್ಡ್‌ ಕೇಸ್‌ನಲ್ಲಿ ಡಿಕೆಗೆ ದಿಲ್ಲಿ ಪೊಲೀಸ್‌ ನೋಟಿಸ್‌